Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಆರ್‌ಟಿಸಿಯಿಂದ ಪ್ರಯಾಣಿಕರಿಗೆ...

ಕೆಎಸ್ಆರ್‌ಟಿಸಿಯಿಂದ ಪ್ರಯಾಣಿಕರಿಗೆ ದೀಪಾವಳಿ ಕೊಡುಗೆ: 1600 ವಿಶೇಷ ಬಸ್‌ಗಳ ವ್ಯವಸ್ಥೆ

ಎಲ್ಲಿಂದ ಎಲ್ಲಿಗೆ ಸಂಚಾರ ? ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ18 Oct 2019 7:09 PM IST
share
ಕೆಎಸ್ಆರ್‌ಟಿಸಿಯಿಂದ ಪ್ರಯಾಣಿಕರಿಗೆ ದೀಪಾವಳಿ ಕೊಡುಗೆ: 1600 ವಿಶೇಷ ಬಸ್‌ಗಳ ವ್ಯವಸ್ಥೆ

ಬೆಂಗಳೂರು, ಅ.18: ದೀಪಾವಳಿ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿ ವತಿಯಿಂದ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 1,600 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ನರಕಚತುರ್ದಶಿ(ಅ.27) ಹಾಗೂ ಬಲಿಪಾಡ್ಯಮಿ(ಅ.29) ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ.25ರಿಂದ 27ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರ್‌ರಾಜ್ಯದ ಸ್ಥಳಗಳಿಗೆ 1,600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.29ರಂದು ವಿಶೇಷ ವಾಹನಗಳು ಸಂಚರಿಸಲಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.

ಬೆಂಗಳೂರು ನಗರದ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‌ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X