Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಘೋಷಿತ ದೇವಮಾನವ ‘ಕಲ್ಕಿ ಭಗವಾನ್’...

ಸ್ವಘೋಷಿತ ದೇವಮಾನವ ‘ಕಲ್ಕಿ ಭಗವಾನ್’ ಆಶ್ರಮದ ಮೇಲೆ ಐಟಿ ದಾಳಿ: 409 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ18 Oct 2019 10:48 PM IST
share
ಸ್ವಘೋಷಿತ ದೇವಮಾನವ ‘ಕಲ್ಕಿ ಭಗವಾನ್’ ಆಶ್ರಮದ ಮೇಲೆ ಐಟಿ ದಾಳಿ: 409 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು, ಅ.18: ತಾನು ವಿಷ್ಣುವಿನ 10ನೇ ಅವತಾರ ಎಂದು ಹೇಳಿಕೊಳ್ಳುತ್ತಿರುವ ಸ್ವಘೋಷಿತ ದೇವಮಾನವ ‘ಕಲ್ಕಿ ಭಗವಾನ್’ ಆಶ್ರಮದ ಮೇಲೆ ನಡೆಸಿದ ದಾಳಿಯಲ್ಲಿ 93 ಕೋಟಿ ರೂ. ನಗದು ಸೇರಿದಂತೆ 409 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಬುಧವಾರ ಆರಂಭವಾಗಿರುವ ದಾಳಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದ. ಆಂಧ್ರಪ್ರದೇಶ, ತಮಿಳುನಾಡು ರಾಜ್ಯ ಸೇರಿದಂತೆ ‘ಕಲ್ಕಿ ಭಗವಾನ್’ ಹಾಗೂ ಪುತ್ರ ಕೃಷ್ಣನ ಒಡೆತನದಲ್ಲಿರುವ 40 ಕಟ್ಟಡಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚೆನ್ನೈ, ಹೈದರಾಬಾದ್, ಬೆಂಗಳೂರು, ತಮಿಳುನಾಡಿನ ಗಡಿಯಲ್ಲಿರುವ ಚಿಟ್ಟೂರುಗಳಲ್ಲಿರುವ ಆಶ್ರಮದ ಮೇಲೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆಧ್ಯಾತ್ಮಿಕ ಗುರು ಎಂದು ಕರೆಸಿಕೊಳ್ಳುವ ಕಲ್ಕಿ ಭಗವಾನ್ ಭಾರತದ ಜೊತೆಗೆ ವಿದೇಶದಲ್ಲೂ ರಿಯಲ್ ಎಸ್ಟೇಟ್, ನಿರ್ಮಾಣ, ಕ್ರೀಡಾಕ್ಷೇತ್ರ ಹೀಗೆ ಹಲವು ಕ್ಷೇತ್ರಗಳಲ್ಲಿ ಪ್ರತಿಷ್ಠಾನ ಮತ್ತು ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಈ ಪ್ರತಿಷ್ಠಾನ ಮತ್ತು ಸಂಸ್ಥೆಗಳ ಒಕ್ಕೂಟ ವರ್ಷವಿಡೀ ವಸತಿ ಸಮುಚ್ಛಯಗಳಲ್ಲಿ ಜೀವನಕ್ರಮ, ಆಧ್ಯಾತ್ಮಿಕತೆ ಮತ್ತಿತರ ವಿಷಯಗಳಲ್ಲಿ ತರಬೇತಿ ಮತ್ತು ಶಿಬಿರಗಳನ್ನು ಹಮ್ಮಿಕೊಳ್ಳುತ್ತದೆ. ಇದಕ್ಕೆ ವಿದೇಶದಿಂದಲೂ ಜನರು ಬರುತ್ತಿದ್ದಾರೆ.

ಸಂಸ್ಥೆ ತನ್ನ ಆದಾಯವನ್ನು ಮರೆಮಾಚಿ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಆಸ್ತಿ ಖರೀದಿಸಿದೆ ಮತ್ತು ವಿದೇಶದಲ್ಲೂ ಹೂಡಿಕೆ ಮಾಡಿದೆ ಎಂಬ ಗುಪ್ತಚರ ವಿಭಾಗದ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಐಟಿ ಇಲಾಖೆಯ ಮೂಲಗಳು ತಿಳಿಸಿವೆ. ಆಶ್ರಮಕ್ಕೆ ನೀಡಲಾಗುವ ದೇಣಿಗೆಗೆ ರಶೀದಿ ನೀಡುವುದಿಲ್ಲ. ಅಲ್ಲದೆ ಅನುಯಾಯಿಗಳು ನೀಡುವ ಹಣವನ್ನು ಲೆಕ್ಕಪುಸ್ತಕದಲ್ಲಿ ಉಲ್ಲೇಖಿಸುವುದಿಲ್ಲ. ಆಸ್ತಿಗಳನ್ನು ದಾಖಲಿತ ಮೌಲ್ಯಕ್ಕಿಂತ ಅಧಿಕ ದರದಲ್ಲಿ ಮಾರಿ ಕಪ್ಪುಹಣ ಸಂಗ್ರಹಿಸಲಾಗುತ್ತಿದೆ. ಆಶ್ರಮದಲ್ಲಿ 43 ಕೋಟಿ ರೂ. ನಗದಿನ ಜೊತೆಗೆ ಭಾರೀ ಪ್ರಮಾಣದ ವಿದೇಶಿ ಕರೆನ್ಸಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಇಲಾಖೆ ತಿಳಿಸಿದೆ.

ಸುಮಾರು 18 ಕೋಟಿ ರೂ. ಮೊತ್ತದ ಅಮೆರಿಕನ್ ಡಾಲರ್ ವಶಕ್ಕೆ ಪಡೆಯಲಾಗಿದೆ. ಲೆಕ್ಕಪತ್ರದಲ್ಲಿ ತೋರಿಸದ 88 ಕಿ.ಗ್ರಾಂ ಚಿನ್ನದ ಆಭರಣಗಳು(26 ಕೋಟಿ ರೂ.ಮೌಲ್ಯ), 5 ಕೋಟಿ ರೂ. ಮೌಲ್ಯದ ವಜ್ರಾಭರಣ ಸೇರಿದ್ದು ಅಕ್ರಮ ಆಸ್ತಿಗಳ ವೌಲ್ಯ ಸುಮಾರು 500 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಎಲ್‌ಐಸಿಯಲ್ಲಿ ಓರ್ವ ಸಾಮಾನ್ಯ ಕ್ಲರ್ಕ್ ಆಗಿದ್ದ ವಿಜಯ್ ಕುಮಾರ್ 1980ರ ಮಧ್ಯಭಾಗದಲ್ಲಿ ಜೀವನಾಶ್ರಮ ಶಾಲೆ ಎಂಬ ಸಂಸ್ಥೆಯನ್ನು ಆರಂಭಿಸಿದ್ದ. ಬಳಿಕ ಚಿಟ್ಟೂರು ಕ್ಯಾಂಪಸ್‌ನಲ್ಲಿ ಏಕತೆಯ ವಿವಿ ಎಂಬ ಸಂಸ್ಥೆಯನ್ನು ಪ್ರಾರಂಭಿಸಿ ಅದನ್ನು ಬೆಳೆಸಿದ್ದ.

1990ರಲ್ಲಿ ತನ್ನನ್ನು ‘ಕಲ್ಕಿ’ ಎಂದು ಕರೆಸಿಕೊಂಡ ವಿಜಯ್ ಕುಮಾರ್, ತಾನು ವಿಷ್ಣುವಿನ ದಶಾವತಾರ ಎಂದು ಘೋಷಿಸಿಕೊಂಡ. ಈತನ ಪತ್ನಿ ಪದ್ಮಾವತಿ ಮತ್ತು ಮಗ ಕೃಷ್ಣ ತಂದೆ ಕಟ್ಟಿ ಬೆಳೆಸಿದ ಹಲವು ಆಶ್ರಮ, ಸಂಸ್ಥೆಗಳ ಆಡಳಿತವನ್ನು ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X