Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಜಯ್ ದಿವಸದಂದು ಉದ್ಘಾಟನೆಗೆ...

ವಿಜಯ್ ದಿವಸದಂದು ಉದ್ಘಾಟನೆಗೆ ಸಿದ್ಧಗೊಳ್ಳುತ್ತಿರುವ ರಾಷ್ಟ್ರೀಯ ಸೈನಿಕ ಸ್ಮಾರಕ

ವಾರ್ತಾಭಾರತಿವಾರ್ತಾಭಾರತಿ18 Oct 2019 11:28 PM IST
share

ಬೆಂಗಳೂರು, ಅ.18: ಮುಖ್ಯಮಂತ್ರಿ ಯಡಿಯೂರಪ್ಪ ನಿರ್ದೇಶನದಂತೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ನಗರಾಭಿವೃದ್ಧಿ ಇಲಾಖೆಯ ರಜನೀಶ್ ಗೋಯೆಲ್ ಮತ್ತು ಇನ್ನಿತರ ಹಿರಿಯ ಅಧಿಕಾರಿಗಳು, ಸ್ಮಾರಕ ಟ್ರಸ್ಟ್ ಸದಸ್ಯರು ಭೇಟಿ ನೀಡಿ, ಬೃಹತ್ ವೀರಗಲ್ಲು ಸ್ಥಾಪನೆ ಸೇರಿದಂತೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. 

ಇದೇ ಡಿ.16ರ ವಿಜಯ್ ದಿವಸ್ ಆಚರಣೆ ವೇಳೆಗೆ ಬೆಂಗಳೂರಿನ ಹೆಮ್ಮೆಯ ರಾಷ್ಟ್ರೀಯ ಸೈನಿಕ ಸ್ಮಾರಕ ಉದ್ಘಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿರುವುದರಿಂದ, ಸ್ಮಾರಕದ ಬಾಕಿಯುಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕೆಲಸಕ್ಕೆ ವೇಗ ದೊರಕಿದೆ. ಈ ನಿಟ್ಟಿನಲ್ಲಿ ಇಂದು ಸ್ಮಾರಕದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಬೃಹತ್ 80 ಅಡಿ ಎತ್ತರದ ವೀರಗಲ್ಲು, ಮೋಟಿವೇಶನ್ ಹಾಲ್, ಪ್ರದರ್ಶಿತ ಸೇನಾಪಡೆ ವಸ್ತುಗಳು ಸೇರಿದಂತೆ ಪ್ರಮುಖ ಸ್ಥಳಗಳ ಪರಿವೀಕ್ಷಣೆ ನಡೆಸಲಾಯಿತು. ವಿಜಯ್ ದಿವಸ್ ವೇಳೆಗೆ ಸ್ಮಾರಕ ಸಂಪೂರ್ಣ ಸಿದ್ಧಗೊಂಡು ಉದ್ಘಾಟನೆಗೆ ಸಿದ್ಧವಾಗುವ ನಿಟ್ಟಿನಲ್ಲಿ ಬಾಕಿಯುಳಿದಿರುವ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ನ.20ರಂದು ಸ್ಮಾರಕದ ಪರಿವೀಕ್ಷಣೆ ನಡೆಸಲಾಗುವುದು. ಆ ವೇಳೆಗೆ ವೀರಗಲ್ಲು ಸ್ಥಾಪನೆ, ಸ್ಮಾರಕದ ಸೌಂದರ್ಯೀಕರಣ, ಪ್ರದರ್ಶಿತ ವಸ್ತುಗಳ ಸುಸ್ಥಿತಿ, ರಕ್ಷಣೆ ಸೇರಿದಂತೆ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ 2009ರ ಫೆಬ್ರವರಿ ತಿಂಗಳಿನಲ್ಲಿ ಸ್ಮಾರಕದ ಶಂಕುಸ್ಥಾಪನೆ ನೆರವೇರಿಸಿದ್ದರು. 2-3 ವರ್ಷಗಳಲ್ಲಿ ಸ್ಮಾರಕ ಸಿದ್ಧಗೊಂಡು ಲೋಕಾರ್ಪಣೆಗೊಳ್ಳಬೇಕಿತ್ತು. ಆದರೆ ನಾನಾ ಕಾರಣಗಳಿಂದ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಶಂಕರಗೌಡ್ ಪಾಟೀಲ್, ಮುಖ್ಯಮಂತ್ರಿ ತಮಗೆ ನೀಡಿದ ಮೊದಲ ಜವಾಬ್ದಾರಿ ಇದಾಗಿದ್ದು, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಸ್ಮಾರಕ ಲೋಕಾರ್ಪಣೆಗೊಂಡು ದಕ್ಷಿಣ ಭಾರತದ ಹೆಮ್ಮೆಯ ಸ್ಮಾರಕ ಎನಿಸಿಕೊಳ್ಳಬೇಕು ಎನ್ನುವುದು ನನ್ನ ಆಸೆಯಾಗಿದೆ ಎಂದು ಅವರು ಹೇಳಿದರು.

10 ವರ್ಷಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪಇದರ ಶಂಕುಸ್ಥಾಪನೆ ನಡೆಸಿದ್ದು, ನಮ್ಮ ಹುತಾತ್ಮ ವೀರಯೋಧರ ಗೌರವಾರ್ಥ ನಿರ್ಮಿಸಲಾಗಿರುವ ಈ ಹೆಮ್ಮೆಯ ಸ್ಮಾರಕವನ್ನು ಆದಷ್ಟು ಶೀಘ್ರದಲ್ಲಿ ಲೋಕಾರ್ಪಣೆ ಮಾಡಬೇಕು ಎನ್ನುವುದು ಅವರ ಇಚ್ಛೆಯಾಗಿದೆ. ಇನ್ನೊಂದು ತಿಂಗಳಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X