Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜ್ಪೆ: ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ...

ಬಜ್ಪೆ: ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Oct 2019 8:25 PM IST
share
ಬಜ್ಪೆ: ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಬಜ್ಪೆ, ಅ.19: ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನ ಸಾಮಾನ್ಯರಿಗೆ ವಿಶ್ವಾಸಾರ್ಹವಾಗಿರಬೇಕು. ಆಧುನಿಕ ಕಟ್ಟಡಕ್ಕಿಂತಲೂ ಮುಖ್ಯವಾಗಿ ಕೇಂದ್ರದಲ್ಲಿರುವ ವೈದ್ಯರು ಮತ್ತು ಸಿಬ್ಬಂದಿ ವರ್ಗ ಕರ್ತವ್ಯನಿಷ್ಠರಾಗಬೇಕು. ರೋಗಿಗಳಿಗೆ ನೆಮ್ಮದಿಯ ವಾತಾವರಣದೊಂದಿಗೆ ಉತ್ತಮ ಚಿಕಿತ್ಸೆ ಸಿಗಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಜ್ಪೆಯಲ್ಲಿ ನಿರ್ಮಿಸಲಾದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಉಸ್ತುವಾರಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ದೇಶದಲ್ಲೇ ಅತಿ ಹೆಚ್ಚು ವೇತನ ಪಡೆಯುತ್ತಿ ದ್ದಾರೆ. ಇಲ್ಲಿ ಸಣ್ಣಪುಟ್ಟ ರೋಗಗಳಿಗೆ ಔಷಧಿ ಇಲ್ಲ ಎಂದಾಗಬಾರದು. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಆಗಬೇಕು. ರೋಗ ಬರದಂತೆ ಜನಜಾಗೃತಿಗೆ ಹೆಚ್ಚು ಮಹತ್ವ ನೀಡಬೇಕು. ವೈದ್ಯರು ಮತ್ತು ಸಿಬ್ಬಂದಿ ವರ್ಗದ ‘ಟೆನ್ಶನ್’ ರೋಗಿಗಳ ಮೇಲೆ ಹೇರಬಾರದು ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಆರೋಗ್ಯ ಕೇಂದ್ರದಲ್ಲಿ ಅತ್ಯಾಧುನಿಕ ಸವಲತ್ತು ಇರುವಂತೆ ನೋಡಿಕೊಳ್ಳಬೇಕು. ಭವಿಷ್ಯದಲ್ಲಿ ಇದು ‘ಸಮುದಾಯ ಕೇಂದ್ರ’ವಾಗಿ ಮೇಲ್ದರ್ಜೆಗೇರಬೇಕು ಮತ್ತು 24*7 ತಾಸುಗಳಲ್ಲಿ ಸೇವೆ ಸಿಗುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ವೈದ್ಯರೆಂಬುದು ಹುದ್ದೆಯಲ್ಲ, ಅದು ಪ್ರಾಮಾಣಿಕ ಸೇವೆಗೆ ಹೆಸರಾದ ಸೇವಕ ಎಂಬ ಭಾವನೆ ವೈದ್ಯರಲ್ಲಿರಬೇಕು. ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ವರ್ಗ ಪ್ರಾಮಾಣಿಕ ಹಾಗೂ ಪಕ್ಷಪಾತರಹಿತ ಕರ್ತವ್ಯ ನಿರ್ವಹಿಸಬೇಕು. ಯಾಕೆಂದರೆ, ಇಲ್ಲಿಗೆ ಬರುವವರು ಬಡವರು, ಅಶಕ್ತರಾಗಿರುತ್ತಾರೆ ಎಂದರು.

ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಉಪ ವಿಭಾಗ (ಮಂಗಳೂರು) ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಪಂ ಸದಸ್ಯರಾದ ಜನಾರ್ದನ ಗೌಡ, ವಸಂತಿ ಕಿಶೋರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ತಾಪಂ ಸದಸ್ಯರಾದ ಉಷಾ ಸುವರ್ಣ, ವಿಶ್ವನಾಥ ಶೆಟ್ಟಿ, ಶಶಿಕಲಾ ಶೆಟ್ಟಿ, ಬಜ್ಪೆ ಗ್ರಾಪಂ ಅಧ್ಯಕ್ಷೆ ರೋಝಿ ಮಥಾಯಿಸ್,ಕಂದಾವರ ಗ್ರಾಪಂ ಅಧ್ಯಕ್ಷ ವಿಜಯಾ ಗೋಪಾಲ ಸುವರ್ಣ, ಪಡುಪೆರಾರ ಗ್ರಾಪಂ ಅಧ್ಯಕ್ಷೆ ಶಾಂತಾ ಎಂ., ಜೋಕಟ್ಟೆ ಗ್ರಾಪಂ ಅಧ್ಯಕ್ಷೆ ಪ್ರೆಸಿಲ್ಲಾ ಮೊಂತೆರೆ, ಪೆರ್ಮುದೆ ಗ್ರಾಪಂ ಅಧ್ಯಕ್ಷೆ ಸರೋಜಾ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ ರಾಮಕೃಷ್ಣ ಸ್ವಾಗತಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾದಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

ಬಜ್ಪೆಪ್ರಾಥಮಿಕ ಕೇಂದ್ರದ ಕಟ್ಟಡದಲ್ಲಿ ಔಷಧಿ ಉಗ್ರಾಣ, ಔಷಧಿ ವಿತರಣಾ ವಿಭಾಗ, ಹೆರಿಗೆ ವಿಭಾಗ, ಶುಶ್ರೂಷಕಿ ಕೊಠಡಿ, ಶೀತಲೀಕರಣ ಕೊಠಡಿ, ತ್ಯಾಜ್ಯ ನಿರ್ವಹಣಾ ಕೊಠಡಿ, ಶಸ್ತ್ರಚಿಕಿತ್ಸಾ ವಿಭಾಗದಂತಹ ಮಹತ್ವದ ವಿಭಾಗಗಳು ಇವೆ. ಸುಮಾರು 2.20 ಎಕರೆ ಜಮೀನಿನಲ್ಲಿ 1.45 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X