ಆರ್‌ಬಿಐ ಕೇಂದ್ರ ಕಚೇರಿಯೆದುರು ಪಿಎಂಸಿ ಬ್ಯಾಂಕ್ ಗ್ರಾಹಕರ ಪ್ರತಿಭಟನೆ

ಮುಂಬೈ, ಅ.19: ಆರ್ಥಿಕ ಅವ್ಯವಹಾರ ನಡೆದಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್(ಪಿಎಂಸಿ)ನ ಗ್ರಾಹಕರು ದಕ್ಷಿಣ ಮುಂಬೈಯಲ್ಲಿರುವ ರಿಸರ್ವ್ ಬ್ಯಾಂಕ್ ಕೇಂದ್ರ ಕಚೇರಿಯೆದುರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಪಿಎಂಸಿ ಬ್ಯಾಂಕ್‌ನಲ್ಲಿ ಸುಮಾರು 4,355 ಕೋಟಿ ರೂ. ಮೊತ್ತದ ಅವ್ಯವಹಾರ ನಡೆದಿರುವುದಾಗಿ ವರದಿಯಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್‌ನಲ್ಲಿ ಗ್ರಾಹಕರು ಜಮೆ ಮಾಡಿರುವ ಹಣವನ್ನು ಹಿಂಪಡೆಯಲು ಆರ್‌ಬಿಐ ಮಿತಿ ವಿಧಿಸಿದೆ. ಇದನ್ನು ಬ್ಯಾಂಕ್‌ನ ಗ್ರಾಹಕರು ವಿರೋಧಿಸುತ್ತಿದ್ದಾರೆ.
ಶನಿವಾರ ಪ್ರತಿಭಟನೆ ನಡೆಸಿದ ಗ್ರಾಹಕರು ಪಿಎಂಸಿ ಮತ್ತು ಆರ್‌ಬಿಐ ವಿರುದ್ಧ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು ಎಂದು ವರದಿಯಾಗಿದೆ.
Next Story