Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರನೇ ಟೆಸ್ಟ್: ರೋಹಿತ್ ಶತಕ, ಭಾರತ...

ಮೂರನೇ ಟೆಸ್ಟ್: ರೋಹಿತ್ ಶತಕ, ಭಾರತ 224/3

ವಾರ್ತಾಭಾರತಿವಾರ್ತಾಭಾರತಿ19 Oct 2019 11:36 PM IST
share
ಮೂರನೇ ಟೆಸ್ಟ್: ರೋಹಿತ್ ಶತಕ, ಭಾರತ 224/3

ರಾಂಚಿ, ಅ.19: ಆರಂಭಿಕ ಬ್ಯಾಟ್ಸ್‌ಮನ್ ಆಗಿ ಸರಣಿಯಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದ ರೋಹಿತ್ ಶರ್ಮಾ ಅವರ ಶತಕದ ನೆರವಿನಿಂದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 224 ರನ್ ಗಳಿಸಿತು.

ಶನಿವಾರ ಆರಂಭವಾದ ಮೂರನೇ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ಒಂದು ಹಂತದಲ್ಲಿ 39 ರನ್‌ಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.ಆಗ ಉಪ ನಾಯಕ ಅಜಿಂಕ್ಯ ರಹಾನೆ(ಔಟಾಗದೆ 83, 135 ಎಸೆತ, 11 ಬೌಂಡರಿ, 1 ಸಿಕ್ಸರ್)ಅವರೊಂದಿಗೆ ಮೂರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 185 ರನ್ ಸೇರಿಸಿದ ರೋಹಿತ್(ಔಟಾಗದೆ 117, 164 ಎಸೆತಗಳು)ಆತಿಥೇಯ ತಂಡ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ನೆರವಾದರು.

ಕೊನೆಯ ಸೆಶನ್‌ನಲ್ಲಿ ಮಂದ ಬೆಳಕು ಹಾಗೂ ಮಳೆಯಿಂದಾಗಿ ಕೇವಲ ಆರು ಓವರ್‌ಗಳನ್ನು ಆಡಲು ಸಾಧ್ಯವಾಗಿದ್ದು, ಪಂದ್ಯ ಬೇಗನೆ ಕೊನೆಗೊಂಡಾಗ ಭಾರತ 3 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತ್ತು. ರೋಹಿತ್ ಟೆಸ್ಟ್ ಸರಣಿಯೊಂದರಲ್ಲಿ ಮೂರು ಹಾಗೂ ಅದಕ್ಕಿಂತ ಹೆಚ್ಚು ಶತಕ ಸಿಡಿಸಿದ ಭಾರತದ ಎರಡನೇ ಆರಂಭಿಕ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾದರು. 1970ರ ದಶಕದಲ್ಲಿ ಸುನೀಲ್ ಗವಾಸ್ಕರ್ ಮೂರು ವಿವಿಧ ಸರಣಿಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾದ ಬೌಲರ್ ಪೀಟ್ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದ ರೋಹಿತ್ 130 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ ವೃತ್ತಿಜೀವನದ ಆರನೇ ಶತಕ ಪೂರೈಸಿದರು. ಮತ್ತೊಂದೆಡೆ ರೋಹಿತ್‌ಗೆ ಉತ್ತಮ ಸಾಥ್ ನೀಡಿದ ರಹಾನೆ ಕೇವಲ 70 ಎಸೆತಗಳಲ್ಲಿ 21ನೇ ಅರ್ಧಶತಕ ಪೂರೈಸಿದರು.

ಸೇನುರನ್ ಮುತ್ತುಸ್ವಾಮಿ ಅನುಪಸ್ಥಿತಿಯಲ್ಲಿ ಆಡುವ ಬಳಗವನ್ನು ಸೇರಿಕೊಂಡ ಪೀಟ್ ಆರು ಓವರ್‌ಗಳಲ್ಲಿ 43 ರನ್ ನೀಡಿ ದುಬಾರಿ ಬೌಲರ್ ಎನಿಸಿಕೊಂಡರು. ಗಾಯಗೊಂಡಿರುವ ಕೇಶವ ಮಹಾರಾಜ್ ಬದಲಿಗೆ ಚೊಚ್ಚಲ ಪಂದ್ಯ ಆಡಿದ ಎಡಗೈ ಸ್ಪಿನ್ನರ್ ಜಾರ್ಜ್ ಲಿಂಡೆ 11 ಓವರ್‌ಗಳಲ್ಲಿ ಒಂದು ಮೇಡನ್ ಓವರ್ ಸಹಿತ 40 ರನ್ ನೀಡಿದರು. ವಿಕೆಟ್ ಪಡೆಯಲು ವಿಫಲರಾದರು. ಮೊದಲ ಸ್ಪೆಲ್‌ನಲ್ಲಿ 7 ಓವರ್‌ಗಳಲ್ಲಿ 15 ರನ್‌ಗೆ 2 ವಿಕೆಟ್ ಪಡೆದಿದ್ದ ವೇಗದ ಬೌಲರ್ ರಬಾಡ ತನ್ನ ಎರಡನೇ ಸ್ಪೆಲ್‌ನಲ್ಲಿ 4 ಓವರ್‌ಗಳಲ್ಲಿ 30 ರನ್ ನೀಡಿದರು.

ಏಳು ರನ್ ಗಳಿಸಿದ್ದಾಗ ಎಲ್‌ಬಿಡಬ್ಲು ಬಲೆಗೆ ಬಿದ್ದಿದ್ದ ರೋಹಿತ್ ಅಂಪೈರ್ ತೀರ್ಪು ಪರಾಮರ್ಶೆ ಪದ್ಧತಿಯ ಮೊರೆ ಹೋಗಿ ಔಟ್ ಆಗುವುದರಿಂದ ಪಾರಾದರು. ಒಂದು ಬಾರಿ ರನೌಟ್ ಆಗುವುದರಿಂದಲೂ ಬಚಾವಾದರು.

ಬೆಳಗ್ಗಿನ ಅವಧಿಯಲ್ಲಿ ಭಾರತದ ಆರಂಭಿಕ ಆಟಗಾರರು ಅಸಾಮಾನ್ಯ ಬೌನ್ಸ್ ಎದುರಿಸಿದರು. ರಬಾಡ ಹಾಗೂ ಲುಂಗಿ ಗಿಡಿ ಈ ವಾತಾವರಣದ ಸಂಪೂರ್ಣ ಲಾಭ ಪಡೆದು ಪ್ರವಾಸಿ ತಂಡಕ್ಕೆ ಸರಣಿಯಲ್ಲಿ ಉತ್ತಮ ಆರಂಭ ಒದಗಿಸಿದರು. ರಬಾಡ ಆರಂಭಿಕ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್(10) ಹಾಗೂ ಚೇತೇಶ್ವರ ಪೂಜಾರ(0)ವಿಕೆಟನ್ನು ಉರುಳಿಸಿದರು. ರಬಾಡ ತನ್ನ ಮೂರನೇ ಓವರ್‌ನಲ್ಲಿ ಸ್ವಿಂಗ್ ಎಸೆತದ ಮೂಲಕ ಅಗರ್ವಾಲ್ ವಿಕೆಟನ್ನು ಕೆಡವಿದರು. ರಬಾಡ ತನ್ನ 5ನೇ ಓವರ್‌ನಲ್ಲಿ ಪೂಜಾರ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು.

ನೊರ್ಟ್ಜೆ ಪುಣೆ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದ ನಾಯಕ ವಿರಾಟ್ ಕೊಹ್ಲಿ ವಿಕೆಟನ್ನು ಪಡೆದು ದೊಡ್ಡ ಬೇಟೆಯಾಡಿದರು. ಕೊಹ್ಲಿ ಡಿಆರ್‌ಎಸ್ ಮೊರೆ ಹೋದರೂ ಯಾವುದೇ ಪ್ರಯೋಜನವಾಗಲಿಲ್ಲ. ಗಾಯಗೊಂಡಿರುವ ಕುಲದೀಪ್ ಯಾದವ್ ಬದಲಿಗೆ ತಂಡಕ್ಕೆ ಸೇರ್ಪಡೆಯಾಗಿ 24 ಗಂಟೆಯೊಳಗೆ 30ರ ಹರೆಯದ ಎಡಗೈ ಸ್ಪಿನ್ನರ್ ಶಹಬಾಝ್ ನದೀಂ ಚೊಚ್ಚಲ ಟೆಸ್ಟ್ ಕ್ರಿಕೆಟ್ ಆಡುವ ಅವಕಾಶ ಪಡೆದರು.

3-0 ಅಂತರದಿಂದ ವೈಟ್‌ವಾಶ್‌ನಿಂದ ಪಾರಾಗುವ ಯತ್ನದಲ್ಲಿರುವ ದ.ಆಫ್ರಿಕಾದ ನಾಯಕ ಡು ಪ್ಲೆಸಿಸ್ ತಂಡದಲ್ಲಿ ಐದು ಬದಲಾವಣೆ ಮಾಡಿದರು. ಎನ್‌ಗಿಡಿ, ಹಂಝಾ, ಹೆನ್ರಿಕ್ ಕ್ಲಾಸೆನ್, ಲಿಂಡೆ ಹಾಗೂ ಪೀಟ್ ಅವರು ಫಿಲ್ಯಾಂಡರ್, ಬ್ರೂನ್ ಹಾಗೂ ಮುತ್ತುಸ್ವಾಮಿ ಬದಲಿಗೆ ಆಡುವ 11ರ ಬಳಗ ಸೇರಿಕೊಂಡರು. ಕೇಶವ ಮಹಾರಾಜ್ ಹಾಗೂ ಏಡೆನ್ ಮರ್ಕರಮ್ ಗಾಯದ ಸಮಸ್ಯೆಯಿಂದಾಗಿ ಮೂರನೇ ಟೆಸ್ಟ್ ಪಂದ್ಯದಿಂದ ದೂರ ಉಳಿದರು.

ಟೆಸ್ಟ್ ಸರಣಿಯಲ್ಲಿ ಗರಿಷ್ಠ ಸಿಕ್ಸರ್: ಶಿಮ್ರೊನ್ ಹೆಟ್ಮೆಯರ್ ದಾಖಲೆ ಮುರಿದ ರೋಹಿತ್

ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ ಸಿಕ್ಸರ್‌ಗಳನ್ನು ದಾಖಲಿಸಿದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ದಾಖಲೆಯೊಂದನ್ನು ಮುರಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಕೊನೆಯ ಟೆಸ್ಟ್‌ನ ಮೊದಲ ದಿನದಾಟದಲ್ಲಿ ರೋಹಿತ್ ಈ ಸಾಧನೆ ಮಾಡಿದರು. ರೋಹಿತ್ ಇಡೀ ಸರಣಿಯಲ್ಲೀಗ ಒಟ್ಟು 16 ಸಿಕ್ಸರ್‌ಗಳನ್ನು ಸಿಡಿಸಿದರು. ಈ ಮೂಲಕ 2018-19ರಲ್ಲಿ ಬಾಂಗ್ಲಾದೇಶ ವಿರುದ್ಧ ಸರಣಿಯಲ್ಲಿ 15 ಸಿಕ್ಸರ್‌ಗಳನ್ನು ದಾಖಲಿಸಿದ್ದ ವಿಂಡೀಸ್ ಬ್ಯಾಟ್ಸ್‌ಮನ್ ಶಿಮ್ರೊನ್ ಹೆಟ್ಮೆಯರ್ ದಾಖಲೆಯನ್ನು ಮುರಿದರು. ಹೆಟ್ಮೆಯರ್‌ಗಿಂತ ಮೊದಲು 2010-11ರಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಹರ್ಭಜನ್ ಸಿಂಗ್ 14 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X