Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಣ್ಣಿನ ಹಣತೆಗೆ ಬೇಡಿಕೆ ಕುಸಿತ: ಕುಂಬಾರರ...

ಮಣ್ಣಿನ ಹಣತೆಗೆ ಬೇಡಿಕೆ ಕುಸಿತ: ಕುಂಬಾರರ ಬದುಕಿನಲ್ಲಿ ಕತ್ತಲ ಛಾಯೆ

- ಬಾಬುರೆಡ್ಡಿ ಚಿಂತಾಮಣಿ- ಬಾಬುರೆಡ್ಡಿ ಚಿಂತಾಮಣಿ20 Oct 2019 11:56 PM IST
share
ಮಣ್ಣಿನ ಹಣತೆಗೆ ಬೇಡಿಕೆ ಕುಸಿತ: ಕುಂಬಾರರ ಬದುಕಿನಲ್ಲಿ ಕತ್ತಲ ಛಾಯೆ

ಬೆಂಗಳೂರು, ಅ.20: ದೀಪಗಳ ಹಬ್ಬದಲ್ಲಿ ಹಣತೆಗಳ ಕಾರು ಬಾರು ಬಲು ಜೋರು. ಆದರೆ ಇಂದಿನ ಆಧುನಿಕ ಬದುಕಿನಲ್ಲಿ ಕುಂಬಾರ ನಲುಗಿ ಹೋಗಿದ್ದಾನೆ. ಆಧುನಿಕತೆಯ ಬಿರುಗಾಳಿಗೆ ಸಿಲುಕಿ ಕುಂಬಾರರ ಮಣ್ಣಿನ ಹಣತೆ ಆರುತ್ತಿದ್ದು, ಕುಂಬಾರರ ಬದುಕು ಕತ್ತಲಾಗುತ್ತಿದೆ.

ಕತ್ತಲೆಯ ತೊರೆದು ಬೆಳಕು ಹರಡುವ ದೀಪಾವಳಿ ಹಬ್ಬಕ್ಕೆ ವಾರವಷ್ಟೇ ಬಾಕಿ ಇದೆ. ಹಬ್ಬಕ್ಕೆ ಹಣತೆಗಳೇ ಪ್ರಮುಖ ಆಕರ್ಷಣೆ. ಆದರೆ, ಹಣತೆ ತಯಾರಿಗೆ ಕತ್ತಲು ಕವಿದಿದ್ದು, ಮಾರುಕಟ್ಟೆಯಲ್ಲಿ ತಕ್ಕಮಟ್ಟಿಗೆ ಬೇಡಿಕೆ ಇದ್ದರೂ ಪೂರೈಕೆ ಇಲ್ಲದೆ ಬೆಳಗಿನ ಹಬ್ಬದ ಸಂಭ್ರಮ ಸೊರಗಿದೆ. ಜೇಡಿ ಮಣ್ಣಿನಿಂದ ತಯಾರಿಸಿದ ಹಣತೆಗಳ ಬಳಕೆ ಕಡಿಮೆಯಾದಂತೆ, ತಯಾರಿಕೆಯೂ ಕಡಿಮೆಯಾಗಿದ್ದು, ಅಗತ್ಯವಿದ್ದಷ್ಟೂ ಸಿಗುತ್ತಿಲ್ಲ. ದಶಕದ ಹಿಂದಿನವರೆಗೂ ಹಣತೆ ಮಾಡುವ ಕುಂಬಾರರ ಕುಟುಂಬಗಳಿಗೆ ದೀಪಾವಳಿ ಬಂತೆಂದರೆ ಅದೊಂದು ಅಕ್ಷರಶಃ ಅವರ ಬದುಕಿನ ಬೆಳಕಿನ ಹಬ್ಬವೇ ಆಗಿತ್ತು. ದೀಪಾವಳಿಗೆ ಎರಡು ತಿಂಗಳು ಮುಂಚೆಯೇ ಲಾರಿಗಟ್ಟಲೆ ಜೇಡಿ ಮಣ್ಣನ್ನು ತಂದು ಹದ ಮಾಡಿ ಮನೆಯೊಳಗೆ, ಅಂಗಳ, ಖಾಲಿ ಜಾಗ ಇದ್ದಲ್ಲೆಲ್ಲ ಲಕ್ಷ ಲಕ್ಷ ಸಂಖ್ಯೆಯಲ್ಲಿ ಹಣತೆಗಳನ್ನು ಮಾಡಿ ಆರಲು ಇಡುತ್ತಿದ್ದರು. ಬಳಿಕ ಅದನ್ನು ಚೆನ್ನಾಗಿ ಸುಟ್ಟು ಮಾರುಕಟ್ಟೆಗೆ ತರುತ್ತಿದ್ದರು.

ಗ್ರಾಹಕರಂತೂ ಮುಗಿಬಿದ್ದು ಮಣ್ಣಿನ ಹಣತೆಗಳನ್ನು ಒಬ್ಬೊಬ್ಬರು 30-40 ಹಣತೆಗಳನ್ನು ಒಯ್ಯುತ್ತಿದ್ದರು. ಈಗ ಅದೆಲ್ಲವೂ ಇತಿಹಾಸವಾಗಿದೆ. ಬೆರಳೆಣಿಕೆ ಸಂಖ್ಯೆಯಲ್ಲಿ ಮಣ್ಣಿನ ಹಣತೆ ಒಯ್ಯುವರ ಸಂಖ್ಯೆಯೂ ವಿರಳವಾಗುತ್ತಿದೆ. ಹೀಗಾಗಿ ಕುಂಬಾರರ ಬಾಳಿಗೆ ದೀಪಾವಳಿ ಬೆಳಕು ನೀಡುವ ಹಬ್ಬವಾಗಿ ಉಳಿದಿಲ್ಲ.

ಎಲ್ಇಡಿ ದೀಪದ ಮೆರಗು: ಆಧುನಿಕತೆ ಎಷ್ಟು ವೇಗವಾಗಿ ಸಾಗಿದೆ ಎಂದರೆ ಇಲ್ಲಿಯವರೆಗೂ ಮಣ್ಣಿನ ಹಣತೆ ಯಾಗವನ್ನು ಆವರಿಸಿದ್ದ ಪಿಂಗಾಣಿ ದೀಪಗಳೂ ಈಗ ಮರೆಯಾಗುತ್ತಿದ್ದು ಗ್ರಾಹಕರು ಎಲ್ಇಡಿ ದೀಪಗಳಿಗೆ ಮೋರೆ ಹೋಗುತ್ತಿದ್ದಾರೆ. ಮಾರುಕಟ್ಟೆಗೆ ಎಲ್ಸಿಡಿ ದೀಪಗಳು ಬಂದಿದ್ದು ಕಡಿಮೆ ವಿದ್ಯುತ್ ನಿಂದ ಹೆಚ್ಚು ಪ್ರಕಾಶಮಾನವಾಗಿ ದೀರ್ಘ ಕಾಲದವರೆಗೆ ಬೆಳಕು ನೀಡಲು ಮುಂದಾಗಿದ್ದು, ಇವುಗಳಿಗೆ ಈಗ ಗ್ರಾಹಕರು ಮುಗಿಬೀಳುತ್ತಿದ್ದಾರೆ.

ಆಧುನಿಕತೆಯ ಭರಾಟೆಯ ಕಾರಣದಿಂದ ಈ ಮಣ್ಣಿನ ಹಣತೆ ಮೂಲೆ ಸೇರಿದರೆ, ಕೆಲವೇ ಕೆಲವು ಕಟ್ಟಾ ಸಂಪ್ರದಾಯಸ್ಥರಷ್ಟೇ ಮಣ್ಣಿನ ಹಣತೆ ಖರೀದಿಸುವಂತಾಗಿದೆ. ಹಲವಾರು ವರ್ಷಗಳಿಂದ ಕಂಬಾರಿಕೆ ವೃತ್ತಿ ಮಾಡಿಕೊಂಡು ಬಂದವರು ಈಗ ಬೇರೆ ವೃತಿಯತ್ತ ಮುಖ ಮಾಡಿದ್ದಾರೆ. ಆದರೆ, ಕುಂಬಾರಿಕೆಯಿಂದ ಕುಟುಂಬ ನಿರ್ವಹಣೆ ಹೊರತುಪಡಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಆಗುತ್ತಿಲ್ಲ.

ಜಿಎಸ್‌ಟಿ ಪ್ರಭಾವ: ಹಣತೆಗಳನ್ನು ಪಶ್ಚಿಮ ಬಂಗಾಳ, ರಾಜಸ್ತಾನ, ಗುಜರಾತ್, ತಮಿಳುನಾಡು, ಆಂದ್ರಪ್ರದೇಶಗಳಿಂದ ದೀಪಗಳನ್ನು ಆಮದು ಮಾಡಿಕೊಳ್ಳಲಾಗುತ್ತೆ. ಜೊತೆಗೆ ಕರ್ನಾಟಕದಿಂದ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹಣತೆಗಳನ್ನ ತರಿಸಿಕೊಳ್ಳಲಾಗುತ್ತೆ. ಆದರೆ ಹಲವು ರಾಜ್ಯದಲ್ಲಿ ನೆರೆಯಿಂದಾಗಿ ಬರಬೇಕಾದ ಹಣತೆಗಳು ಬರದೇ ಇರುವುದು ಕಂಡು ಬಂದಿದೆ. ಅಲ್ಲದೆ, ಈ ಬಾರಿ ಜಿಎಸ್‌ಟಿ ಕೂಡ ಸೇರಿದೆ. ಸೀಮಿತ ಹಣತೆಗಳನ್ನು ಮಾತ್ರ ಖರೀದಿ ಮಾಡಲಾಗುತ್ತಿದೆ ಎಂದು ವರ್ಣ ಸ್ಟೋರ್‌ನ ಮಾಲಕ ಅರುಣ್ ಬೇಸರ ವ್ಯಕ್ತಪಡಿಸಿದರು.

ಚೀನಿ ಮಣ್ಣಿನ ಹಣತೆಗಳು, ಹೊಳಪಿನ ಮೈಮಾಟವುಳ್ಳ, ವೈವಿಧ್ಯಮಯ ಕಲಾ ಚಿತ್ತಾರ ಹೊಂದಿರುವ ಪಿಂಗಾಣಿ ಹಣತೆಗಳಿಗೆ ಬಹುತೇಕ ಜನರು ಮಾರುಹೋಗುತ್ತಿದ್ದಾರೆ. ದಶಕದ ಹಿಂದೆ ಲಕ್ಷ ಲಕ್ಷ ಹಣತೆಗಳನ್ನು ತಮ್ಮ ಮನೆ ಮುಂದೆ ಮಾರಾಟ ಮಾಡುತ್ತಿದ್ದ ಕುಂಬಾರ ಕುಟುಂಬಗಳು ಐದಾರು ವರ್ಷಗಳಿಂದ ಸಾವಿರ ಲೆಕ್ಕದಲ್ಲಿ ಹಣತೆಗಳನ್ನು ಮಾರಾಟ ಮಾಡಿ ತಮ್ಮ ಬದುಕಿನ ಬಂಡಿ ಸಾಗಿಸುತ್ತಿವೆ. ಹಣತೆ ತಯಾರಿಸಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರು ಈಗ ಬೇರೆ ವೃತ್ತಿಯತ್ತ ಮುಖ ಮಾಡಿದ್ದಾರೆ ಎಂದು ಕುಂಬಾರ ಸಮುದಾಯದ ರವಿಕುಮಾರ್ ಸಂಕಟ ವ್ಯಕ್ತಪಡಿಸಿದ್ದಾರೆ.

ನಗರದಾದ್ಯಂತ ಬೆಳಕಿನ ಹಬ್ಬ ದೀಪಾವಳಿಗೆ ಸಿದ್ಧತೆ ನಡೆದಿದೆ. ನಾನಾ ವಿನ್ಯಾಸಗಳ ಹಣತೆ, ಬಣ್ಣ ಬಣ್ಣದ ಆಕಾಶಬುಟ್ಟಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಮಕ್ಕಳು, ಹಿರಿಯರು ಪಟಾಕಿ ಖರೀದಿಗೆ ಮುಂದಾಗಿದ್ದರೆ, ಜನತೆ ಪೂಜಾ ಸಾಮಗ್ರಿ, ಹೊಸ ಬಟ್ಟೆಗಳ ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಗಳಲ್ಲಿ ಈಗಾಗಲೇ ಜನಜಂಗುಳಿ ಮನೆ ಮಾಡಿದೆ.

share
- ಬಾಬುರೆಡ್ಡಿ ಚಿಂತಾಮಣಿ
- ಬಾಬುರೆಡ್ಡಿ ಚಿಂತಾಮಣಿ
Next Story
X