ಕೆಪಿಎಲ್ ಬೆಟ್ಟಿಂಗ್: ಬಳ್ಳಾರಿ ಟಸ್ಕರ್ಸ್ ಮಾಲಕ ಅರವಿಂದ್ ವಿಚಾರಣೆ

ಬೆಂಗಳೂರು, ಅ.22: ಕೆಪಿಎಲ್ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಬಳ್ಳಾರಿ ಟಸ್ಕರ್ಸ್ ತಂಡದ ಮಾಲಕ ಅರವಿಂದ್ ವೆಂಕಟೇಶ್ ರೆಡ್ಡಿ ಅವರನ್ನು ಸಿಸಿಬಿ ಪೊಲೀಸರು ಮಂಗಳವಾರ ವಿಚಾರಣೆ ನಡೆಸಿದರು.
ಈ ಹಿಂದೆ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಎ.ಅಲಿ ಅವರನ್ನು ಬಂಧಿಸಲಾಗಿತ್ತು. ಆರೋಪಿ ಜೊತೆ ಸಂಪರ್ಕ ಹೊಂದಿರುವ ಹಾಗೂ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ವೆಂಕಟೇಶ್ ರೆಡ್ಡಿ, ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಯಲ್ಲಿ ಭಾಗಿಯಾಗಿದ್ದು, ಅಧಿಕಾರಿಗಳಿಗೆ ಲಿಖಿತ ಹೇಳಿಕೆ ನೀಡಿದ್ದೇನೆ ಎಂದರು.
Next Story





