ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ: ಸಿಎಂ
ಬೆಂಗಳೂರು, ಅ.23: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರದ ಪರಿಸರ ಇಲಾಖೆ ಅನುಮತಿ ನೀಡಿದೆ. ಆ ಮೂಲಕ ಯೋಜನೆ ಆರಂಭಿಸಲು ಶೇ. 90ರಷ್ಟು ದಾರಿ ಸುಗಮ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲನಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ವಿವಾದ ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಪ್ರಧಾನಿ ಯೋಜನೆ ಆರಂಭಕ್ಕೆ ಅವಕಾಶ ಮಾಕೊಟ್ಟಿದ್ದಾರೆ. ಪರಿಸರ ಇಲಾಖೆಯ ಅನುಮತಿ ವಿಚಾರ ನ್ಯಾಯಾಲಯದ ಗಮನಕ್ಕೆ ತರಲಾಗುವುದು. ಯೋಜನೆ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
Next Story