ಮನಪಾ ಚುನಾವಣೆ: ಅ.24ರಿಂದ ನಾಮಪತ್ರ ಸಲ್ಲಿಕೆ- ಜಿಲ್ಲಾಧಿಕಾರಿ
ಮಂಗಳೂರು, ಅ.23: ಮಂಗಳೂರು ಮಹಾನಗರ ಪಾಲಿಕೆಗೆ ನವೆಂಬರ್ 12ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯು ಅ.24ರಿಂದ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆಯಿಂದ ಅ. 31ರವರೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು, ನವೆಂಬರ್ 2ರವರೆಗೆ ನಾಮಪತ್ರಗಳನ್ನು ಪರಿಶೀಲಿಸಲಾಗುವುದು ಎಂದರು.
ನ.4ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ನ. 12ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನ.14ರಂದು ಮತಗಳ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯು ಮನಪಾ ವ್ಯಾಪ್ತಿಯಲ್ಲಿ ನವೆಂಬರ್ 14ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಸ್ಟರಿಂಗ್, ಡಿ ಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯವು ಪಾಂಡೇಶ್ವರದ ರೊಸಾರಿೂ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.
ಚುನಾವಣೆಯಲ್ಲಿ ನೋಟಾ ಚಲಾವಣೆಗೆ ಅವಕಾಶವಿರುತ್ತದೆ. ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಇತ್ತೀಚಿನ ಭಾವಚಿತ್ರವನ್ನು ಮುದ್ರಿಸಲಾಗುವುದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಲಾ 3 ಲಕ್ಷ ರೂ. ಚುನಾವಣಾ ವೆಚ್ಚ ಮಾಡಬಹುದಾಗಿದೆ ಎಂದು ಅವರು ವಿವರ ನೀಡಿದರು.
ಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಚುನಾವಣಾ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು.
* ಒಟ್ಟು ವಾರ್ಡ್‌ಗಳ ಸಂಖ್ಯೆ 60
* ಒಟ್ಟು ಮತಗಟ್ಟೆಗಳು- 448
* ಒಟ್ಟು ಮತದಾರರು- 387517 (199989 ಪುರುಷರು- 187465 ಮಹಿಳೆಯರು- ಇತರೆ- 63)