ಉಡುಪಿ ಜಿಪಂ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ
ಸುಮಿತ್ ಶೆಟ್ಟಿ, ಪ್ರತಾಪ ಹೆಗ್ಡೆ, ಶೋಭಾ
ಉಡುಪಿ, ಅ.23: ಉಡುಪಿ ಜಿಲ್ಲಾ ಪಂಚಾಯತ್ನ ಸ್ಥಾಯಿ ಸಮಿತಿಗಳನ್ನು 3ನೇ ಅವಧಿಗೆ ಪುನರ್ ರಚಿಸಲಾಗಿದ್ದು, ನೂತನ ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಈ ಸದಸ್ಯರು ಆಯಾ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಆಯ್ಕೆ ಮಾಡಿದ್ದಾರೆ.
ಸುಮಿತ್ ಶೆಟ್ಟಿ ಕೌಡೂರು ಇವರನ್ನು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಪ್ರತಾಪ ಹೆಗ್ಡೆ ಮಾರಾಳಿ ಇವರನ್ನು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಶೋಭಾ ಜಿ. ಪುತ್ರನ್ ಇವರನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನರ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story