Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿ ವಿದ್ಯಾರ್ಥಿಗಳ ಸಹಯೋಗದಲ್ಲಿ...

ವಿವಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಗ್ರಾಮಗಳ ಅಧ್ಯಯನ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ23 Oct 2019 10:44 PM IST
share
ವಿವಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಗ್ರಾಮಗಳ ಅಧ್ಯಯನ: ಸಿ.ಟಿ.ರವಿ

ಧಾರವಾಡ, ಅ.23: ಧಾರವಾಡ ಜಿಲ್ಲೆಯ 359 ಕಂದಾಯ ಗ್ರಾಮಗಳೂ ಸೇರಿ ರಾಜ್ಯದ ಎಲ್ಲ ಗ್ರಾಮಗಳ ಅಧ್ಯಯನ ಕಾರ್ಯವನ್ನು ವಿಶ್ವವಿದ್ಯಾಲಯ, ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಕೈಗೊಂಡು ಗ್ರಾಮದ ಇತಿಹಾಸ, ಸಂಸ್ಕೃತಿ, ಪರಂಪರೆಯ ಸಮಗ್ರ ಮಾಹಿತಿಯನ್ನು ವಿಕಿಪೀಡಿಯ ಮಾದರಿಯಲ್ಲಿ ಅಂತರ್ಜಾಲಕ್ಕೆ ಅಳವಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದರು.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ನಾಲ್ಕು ಗೋಡೆಯ ಆಚೆಗೂ ಶಿಕ್ಷಣ, ಸಂಶೋಧನೆ ಕೈಗೊಳ್ಳಲು ಅವಕಾಶ ಕಲ್ಪಿಸುವ ಆಶಯದೊಂದಿಗೆ ಬರುವ ಡಿಸೆಂಬರ್ ತಿಂಗಳಿನಲ್ಲಿ ಶನಿವಾರ ಹಾಗೂ ರವಿವಾರಗಳಂದು ವಿದ್ಯಾರ್ಥಿಗಳ ಸಹಯೋಗದಲ್ಲಿ ಈ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಗೆಜೆಟಿಯರ್‌ನಲ್ಲಿ ಬಿಟ್ಟು ಹೋಗಿರುವ ಅಂಶಗಳನ್ನು ಸಂಗ್ರಹಿಸಿ ವಿಕಿಪೀಡಿಯ ಮಾದರಿಯಲ್ಲಿ ಅಂತರ್ಜಾಲಕ್ಕೆ ಅಳವಡಿಸಲಾಗುವುದು, ಹಿರಿಯರು, ಅನುಭವಿಗಳು, ತಜ್ಞರು ಆ ಮಾಹಿತಿಗಳನ್ನು ಸಂಪಾದನೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಸಿ.ಟಿ.ರವಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ, ಗಂಗೂಬಾಯಿ ಹಾನಗಲ್ ಸ್ಮಾರಕ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡದಲ್ಲಿರುವ ಟ್ರಸ್ಟುಗಳ ಕಾರ್ಯಚಟುವಟಿಕೆಗಳನ್ನು ಇದೇ ಅವರು ಪರಿಶೀಲನೆ ನಡೆಸಿದರು.

ಧಾರವಾಡದಲ್ಲಿರುವ ಥ್ಯಾಕರೆ ಸಮಾಧಿ ಸೇರಿದಂತೆ ಜಿಲ್ಲೆಯಲ್ಲಿ ಸಂರಕ್ಷಣೆಯ ಅಗತ್ಯವಿರುವ ಸಮಗ್ರ ಪಾರಂಪರಿಕ ಸ್ಥಳಗಳ ಅಭಿವೃದ್ಧಿಗೆ ಯೋಜನೆ ಮತ್ತು ಅಂದಾಜು ವೆಚ್ಚದ ಪ್ರಸ್ತಾವನೆ ಸಲ್ಲಿಸಬೇಕು. ಮತ್ತು ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ.ಗಂಗೂಬಾಯಿ ಹಾನಗಲ್ ಹುಟ್ಟಿದ ಮನೆಯನ್ನು ಜೀರ್ಣೋದ್ಧಾರ ಮಾಡಿ ಆಸಕ್ತರಿಗೆ ನಿರ್ವಹಣೆಗಾಗಿ ದತ್ತು ನೀಡಲು ಯೋಜನೆ ರೂಪಿಸಬೇಕೆಂದು ಅವರು ತಿಳಿಸಿದರು. ರಾಜ್ಯ ಪ್ರವಾಸೋದ್ಯಮ ಪಟ್ಟಿಯಲ್ಲಿ ಜಿಲ್ಲೆಯ 4 ಪ್ರವಾಸಿ ಸ್ಥಳಗಳಿದ್ದು, 2ಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರೊಂದಿಗೆ ಚರ್ಚಿಸಿ, ಜಿಲ್ಲೆಯ ಜನಪ್ರತಿನಿಧಿಗಳ, ಅನುಭವಿಗಳ ಸಭೆ ಜರುಗಿಸಿ ಹೆಚ್ಚಿನ ಸ್ಥಳಗಳನ್ನು ರಾಜ್ಯ ಪ್ರವಾಸೋದ್ಯಮ ಪಟ್ಟಿಗೆ ಸೇರಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಜನಪ್ರತಿನಿಧಿಗಳು, ತಜ್ಞರು, ಸಾರ್ವಜನಿಕರನ್ನೊಳಗೊಂಡ ಜಿಲ್ಲಾ ಪ್ರವಾಸೋದ್ಯಮ ಸಮಿತಿಯನ್ನು ಪುನರ್ ರಚಿಸಬೇಕು. ಜಿಲ್ಲೆಯ ಸಾಂಸ್ಕೃತಿಕ ಹಿನ್ನೆಲೆ ಬಿಂಬಿಸುವ 2020ರ ಕ್ಯಾಲೆಂಡರ್ ಅನ್ನು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ರೂಪಿಸುವಂತೆ ಅವರು ತಿಳಿಸಿದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಜಿಲ್ಲೆಯ ಅನೇಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಮೂಲಸೌಕರ್ಯಗಳ ಅಗತ್ಯವಿದೆ. ಥ್ಯಾಕರೆ ಸಮಾಧಿ, ಕೆಲಗೇರಿ ಕೆರೆ, ಧಾರವಾಡ ಕೋಟೆ ಸೇರಿದಂತೆ ಪ್ರಮುಖ ಸ್ಥಳಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯಾಗಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಪ್ರವಾಸೋದ್ಯಮ ಪ್ರೋತ್ಸಾಹ ದೃಷ್ಟಿಯಿಂದ ಜಿಲ್ಲೆಯ 62 ಪ್ರಮುಖ ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಪ್ರವಾಸ ತಾಣ, ಕಲೆ, ಸಾಹಿತ್ಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಬಿಂಬಿಸುವ ಕಾಪಿಟೇಬಲ್ ಪುಸ್ತಕವನ್ನು ಬರುವ ನವೆಂಬರ್‌ನಲ್ಲಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ನ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ರಾಜ್ಯ ಪತ್ರಗಾರ ಇಲಾಖೆಯ ನಿರ್ದೇಶಕ ಸಿ.ಗಂಗಾಧರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X