Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನನ ಮರಣ ನೋಂದಣಿಗಳು ಕ್ರಮಬದ್ಧವಾಗಿರಲಿ:...

ಜನನ ಮರಣ ನೋಂದಣಿಗಳು ಕ್ರಮಬದ್ಧವಾಗಿರಲಿ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ವಾರ್ತಾಭಾರತಿವಾರ್ತಾಭಾರತಿ24 Oct 2019 10:11 PM IST
share
ಜನನ ಮರಣ ನೋಂದಣಿಗಳು ಕ್ರಮಬದ್ಧವಾಗಿರಲಿ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್

ಮಂಗಳೂರು, ಅ.24: ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಕ್ರಮಬದ್ಧವಾಗಿ ನಡೆಯುತ್ತಿರಬೇಕು. ಮಾರ್ಗಸೂಚಿಗಳ ಅನ್ವಯ ಸಂಬಂಧಪಟ್ಟ ನೋಂದಣಾಧಿಕಾರಿಗಳು ಸಕಾಲಕ್ಕೆ ಸಾರ್ವಜನಿಕರಿಗೆ ಸ್ಪಂದಿಸಿ, ನೋಂದಣಿ ಕಾರ್ಯಗಳನ್ನು ಮಾಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ದ.ಕ. ಜಿಲ್ಲಾಧಿಕಾರಿ ಕೋರ್ಟ್‌ಹಾಲ್ ನಲ್ಲಿ ಗುರುವಾರ ನಡೆದ ಜನನ ಮರಣ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತಾಡಿದರು.

ಗ್ರಾಮೀಣ ಪ್ರದೇಶ, ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ನೋಂದಣಾಧಿಕಾರಿಗಳು ಜನನ ಮರಣ ನೋಂದಣಿಯನ್ನು ನಿಯಮನುಸಾರವಾಗಿ ನಡೆಸುತ್ತಿರಬೇಕು ಎಂದು ಸಿಂಧೂ ಸೂಚಿಸಿದರು.

ಗ್ರಾಮಾಂತರ ಹಾಗೂ ನಗರಗಳ ಸಹಿತ ಜಿಲ್ಲೆಯಲ್ಲಿ 456 ನೋಂದಣಿ ಘಟಕಗಳು ಇವೆ. ಜಿಲ್ಲೆಯಲ್ಲಿ 26,423 ಜನನ ಮತ್ತು 14,904 ಮರಣ ನೋಂದಣಿಗಳು ದಾಖಲಾಗಿವೆ ಎಂದು ಸಾಂಖ್ಯಿಕ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಮನಮೋಹನ್ ಮಾಹಿತಿ ನೀಡಿದರು.

2019ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 313 ಜನನ ಮತ್ತು 398 ಮರಣ ತಡ ನೋಂದಣಿಗಳು ದಾಖಲಾಗಿದೆ. ಸೆಕ್ಷನ್ 13ರ ಅನ್ವಯ ಘಟನೆ ಸಂಭವಿಸಿದ 21 ದಿನದ ನಂತರದ ಘಟನೆಗಳನ್ನು ತಡ ನೋಂದಣಿ ಮಾಡಬಹುದಾಗಿದ್ದು, ತಡನೋಂದಣಿಗಳು ಕಡಿಮೆಗೊಳಿಸಲು ಸೂಕ್ತ ಕ್ರಮ ವಹಿಸುವುದು ಇದರ ಉದ್ದೇಶವಾಗಿದೆ. ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇ.100ರಷ್ಟು ಘಟನೆಗಳು ದಾಖಲಾತಿಯಾಗಿರುವ ಕುರಿತು ಕಂದಾಯ, ನಗರಾಭಿವೃದ್ಧಿ, ಸಾಂಖ್ಯಿಕ ಇಲಾಖೆಯ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ ಎಂದು ಮನಮೋಹನ್ ಮಾಹಿತಿ ನೀಡಿದರು.

ಸಭೆಯಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಎ.ಡಿ. ಬೋಪಯ್ಯ, ಮಾರುತಿ ಪ್ರಸಾದ್, ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X