Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ನೀರಿನ ದರ ಏರಿಕೆ: ಬಿಲ್ ಪಾವತಿಸದೆ...

ಮನಪಾ ನೀರಿನ ದರ ಏರಿಕೆ: ಬಿಲ್ ಪಾವತಿಸದೆ ಅಸಹಕಾರ ಚಳುವಳಿ ನಡೆಸಲು ಡಿವೈಎಫ್‌ಐ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ24 Oct 2019 10:18 PM IST
share

ಮಂಗಳೂರು, ಅ.24: ಮಂಗಳೂರು ಮಹಾನಗರ ಪಾಲಿಕೆಯು ಯಾವುದೆ ಮುನ್ಸೂಚನೆ ನೀಡದೆ 2019ರ ಎಪ್ರಿಲ್ನಿಂದ ಅನ್ವಯವಾಗುವಂತೆ ಕುಡಿಯುವ ನೀರಿನ ದರವನ್ನು ಐದಾರು ಪಟ್ಟು ಏರಿಕೆ ಮಾಡಿದೆ. ಈ ರೀತಿಯ ಏರಿಕೆಯು ನಗರದ ಜನಸಾಮಾನ್ಯರ ಪಾಲಿಗೆ ದೊಡ್ಡ ಹೊರೆಯಾಗಿದೆ. ಯಾವುದೇ ಪೂರ್ವ ಸೂಚನೆಯಿಲ್ಲದ ವಿಪರೀತ ದರ ಏರಿಕೆ ಮಾಡಿರುವುದನ್ನು ಡಿವೈಎಫ್‌ಐ ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸಿದೆ. ಅಲ್ಲದೆ ಮನಪಾಕ್ಕೆ ಆರಿಸಿ ಬಂದ ಜನಪ್ರತಿನಿಧಿಗಳು ನೀರಿನ ದರ ಹೆಚ್ಚಳದ ಬಗ್ಗೆ ಸರಿಯಾದ ನಿರ್ಣಯ ಕೈಗೊಳ್ಳುವವರೆಗೂ ನೀರಿನ ಬಿಲ್ಲು ಕಟ್ಟದೆ ಅಸಹಕಾರ ಚಳುವಳಿಯನ್ನು ನಡೆಸಲು ತೀರ್ಮಾನಿಸಿದೆ.

ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದಿರುವ ಸಂದರ್ಭ ನಗರದ ಶಾಸಕರ ಗಮನಕ್ಕೂ ತಾರದೆ ಪಾಲಿಕೆ ಕಮಿಷನರ್ ಮತ್ತು ಜಿಲ್ಲಾಧಿಕಾರಿ ದರ ಏರಿಕೆಯ ಆದೇಶವನ್ನು ಹೊರಡಿಸಿರುವುದು ಸರಿಯಾದ ವಿಧಾನವಲ್ಲ. ಇದು ಜನತಂತ್ರ ವ್ಯವಸ್ಥೆಯ ಆಶಯಕ್ಕೆ ವಿರುದ್ಧವಾಗಿದೆ. ಹನ್ನೊಂದು ವರ್ಷಗಳ ಹಿಂದೆ ಪ್ರಥಮ ಬಾರಿಗೆ ಮಂಗಳೂರು ಪಾಲಿಕೆಯು ನೀರಿನ ದರವನ್ನು ದೊಡ್ಡ ಮಟ್ಟದಲ್ಲಿ ಏರಿಕೆ ಮಾಡಿ ಖಾಸಾಗೀಕರಣಕ್ಕೆ ಮುಂದಾಗಿತ್ತು. ಆ ಸಂದರ್ಭ ಡಿವೈಎಫಐ, ಸಿಪಿಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಿಂದಾಗಿ ದರ ಏರಿಕೆ, ಖಾಸಗೀಕರಣವನ್ನು ಪಾಲಿಕೆ ಹಿಂದಕ್ಕೆ ಪಡೆದಿತ್ತು. ಆ ನಂತರ ಈ ವರಗೆ ದರ ಏರಿಕೆ ಆಗಿರಲಿಲ್ಲ. ಆದರೆ ಈಗ ದರವನ್ನು ನಾಲ್ಕರಿಂದ ಐದು ಪಟ್ಟು ಏರಿಕೆ ಮಾಡಲಾಗಿದೆ. ಈ ದರ ಏರಿಕೆಯನ್ನು ಶಾಸನಬದ್ದ ಜನಪ್ರತಿನಿಧಿಗಳಾದ ಶಾಸಕರನ್ನು ಕತ್ತಲಲ್ಲಿಟ್ಟು ಎಡಿಬಿ ಮುಂತಾದ ವಿದೇಶಿ ಬ್ಯಾಂಕ್‌ಗಳ ನಿರ್ದೇಶನದ ಪ್ರಕಾರ ಮಾಡಿರಿವುದು ಖಂಡನೀಯ.

ಈ ಹಿಂದೆ ತಿಂಗಳಿಗೆ 65 ರೂ. ಕನಿಷ್ಟ ದರ ನಿಗದಿ ಮಾಡಿ 25,000 ಲೀಟರ್ ನೀರು ನೀಡಲಾಗಿತ್ತು. ಆ ನಂತರದ ಒಂದು ಸಾವಿರ ಲೀಟರ್ ನೀರಿಗೆ ಕೇವಲ 3 ರೂ. ದರ ವಿಧಿಸಲಾಗುತ್ತಿತ್ತು. ಆದರೆ ಈಗ ಕನಿಷ್ಟ ನೀರಿನ ಪ್ರಮಾಣವನ್ನು 25,000 ಸಾವಿರ ಲೀಟರ್ ನಿಂದ 8,000 ಲೀಟರ್‌ಗೆ ಇಳಿಸಲಾಗಿದೆ. ಅಲ್ಲದೆ ನಂತರದ ಬಳಕೆಗೆ ಲೀಟರ್‌ಗೆ 3 ರೂ.ನಿಂದ 9 ರೂ. ಏರಿಕೆ ಮಾಡಲಾಗಿದೆ.

ಈ ಏರಿಕೆಯು ಏಕಮುಖ ಹಾಗೂ ಜನವಿರೋಧಿಯಾಗಿದೆ. ಹಾಗಾಗಿ ಡಿವೈಎಫ್‌ಐ ನೀರಿನ ದರ ಏರಿಕೆಯನ್ನು ಖಂಡಿಸಿ ನೀರಿನ ಬಿಲ್ಲು ಪಾವತಿಸದೆ ಅಸಹಕಾರ ಚಳುವಳಿ ನಡೆಸಲಿದೆ ಎಂದು ಡಿವೈಎಫ್‌ಐ ಮಂಗಳೂರು ನಗರ ಘಟಕದ ಮುಖಂಡರಾದ ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X