ಭಾರೀ ಮಳೆ: ಅ. 26ರಂದು ಉಡುಪಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

ಉಡುಪಿ: ಕಳೆದ ಮೂರು ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಅ.26 (ಶನಿವಾರ)ಯೂ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ರಜೆ ಘೋಷಿಸಿದ್ದಾರೆ.
ಅ.26ರಂದೂ ಭಾರೀ ಮಳೆ ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಭಾರೀ ಗಾಳಿ ಬೀಸುವ ಸಂಭವಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶನಿವಾರವೂ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ-ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಇಂದು ಸಹ ಕೊನೆಯ ಕ್ಷಣದಲ್ಲಿ ರಜೆಯನ್ನು ನೀಡಲಾಗಿತ್ತು.
Next Story





