Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ಸರಕಾರಿ...

ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯೋಜನೆ: ಡಾ.ಅಶ್ವಥ್ ನಾರಾಯಣ್

ವಾರ್ತಾಭಾರತಿವಾರ್ತಾಭಾರತಿ25 Oct 2019 7:56 PM IST
share
ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯೋಜನೆ: ಡಾ.ಅಶ್ವಥ್ ನಾರಾಯಣ್

ಉಡುಪಿ, ಅ.25: ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಸರಕಾರಿ ಮೆಡಿಕಲ್ ಕಾಲೇಜು ಇರಬೇಕೆಂಬುದು ಸರಕಾರದ ಉದ್ದೇಶವಾಗಿದೆ. ಅದ ರಂತೆ ಸರಕಾರಿ ಮೆಡಿಕಲ್ ಕಾಲೇಜುಗಳಿಲ್ಲದ ಉಡುಪಿ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಕಾಲೇಜು ಸ್ಥಾಪಿಸಲು ಯೋಜನೆ ರೂಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಉಡುಪಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು. ರಾಜ್ಯದ ಆರು ಜಿಲ್ಲೆಗಳಲ್ಲಿ ಮಾತ್ರ ಸರಕಾರಿ ಮೆಡಿಕಲ್ ಕಾಲೇಜುಗಳಿಲ್ಲ. ಇದರಲ್ಲಿ ಐದು ಜಿಲ್ಲೆಗಳಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿವೆ. ಆದರೆ ಒಂದು ಜಿಲ್ಲೆಯಲ್ಲಿ ಖಾಸಗಿ ಮತ್ತು ಸರಕಾರಿ ಎರಡೂ ಮೆಡಿಕಲ್ ಕಾಲೇಜಿಲ್ಲ. ಈ ನಿಟ್ಟಿನಲ್ಲಿ ಆರು ಜಿಲ್ಲೆಗಳಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸ ಬೇಕೆಂಬ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಅವಿಭಜಿತ ದ.ಕ. ಜಿಲ್ಲೆ ಹೆಚ್ಚಿನ ಮಾನ್ಯತೆ ಹಾಗೂ ಪ್ರಗತಿ ಸಾಧಿಸಲು ಶಿಕ್ಷಣವೇ ಕಾರಣ. ಆರ್ಥಿಕ, ಸಾಮಾಜಿಕವಾಗಿ ಎದುರಿಸುತ್ತಿರುವ ಎಲ್ಲ ಸಮಸ್ಯೆ ಗಳಿಗೆ ಶಿಕ್ಷಣ ಮತ್ತು ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ಕ್ಷೇತ್ರಗಳಿಗೆ ಉಡುಪಿ ಜಿಲ್ಲೆ ಹೆಚ್ಚಿನ ಒತ್ತು ನೀಡಿರು ವುದರಿಂದ ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಸಾಗುವಂತಾಗಿದೆ. ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟವನ್ನು ಇನ್ನೂ ಹೆಚ್ಚಿಸಬೇಕು ಎಂದು ಅವರು ಹೇಳಿದರು.

ನೀತಿ ಆಯೋಗವು ಅವಿಷ್ಕಾರದಲ್ಲಿ ಕರ್ನಾಟಕಕ್ಕೆ ನಂಬರ್ ಒಂದು ಸ್ಥಾನ ನೀಡಿದೆ. ಕೈಗಾರಿಕೆಗಳಿಗೆ ಬೇಕಾಗಿರುವ ಗುಣಮಟ್ಟದ ಸಂಪನ್ಮೂಲ ಗಳನ್ನು ಪೂರೈಸುವಲ್ಲಿ ನಾವು ಹಿನ್ನಡೆ ಕಂಡಿದೆ. ಆ ರೀತಿಯ ಗುಣಮಟ್ಟದ ಶಿಕ್ಷಣಗಳನ್ನು ನೀಡಲು ನಮ್ಮ ಶಿಕ್ಷಣ ಸಂಸ್ಥೆಗಳಿಗೆ ಸಾಧ್ಯವಾಗಿಲ್ಲ. ಆದುದರಿಂದ ಈ ವಿಚಾರ ದಲ್ಲಿ ಸುಧಾರಣೆ ಮಾಡಬೇಕಾಗಿದೆ. ಪ್ರಗತಿಪರ ಪಥದಲ್ಲಿರುವ ಉಡುಪಿ ಜಿಲ್ಲೆ ಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಶಿಕ್ಷಣ ಸಂಸ್ಥೆಗಳಲ್ಲಿ, ತಂತ್ರಜ್ಞಾನ, ಐಟಿ ಬಿಟಿಯಲ್ಲಿ ಸುಧಾರಣೆ ತರಲು ಎಲ್ಲ ರೀತಿಯ ಸಕಾರ ನೀಡಲಾಗುವುದು ಎಂದರು.

ರಾಜಕೀಯ ಪಕ್ಷಗಳಲ್ಲಿರುವ ಗುಣಮಟ್ಟ ಆಧಾರದಲ್ಲಿ ಸರಕಾರ ಗುಣಮಟ್ಟ ಹೆಚ್ಚಲು ಸಾಧ್ಯವಾಗುತ್ತದೆ. ಸರಕಾರ ಬೇರೆ ರಾಜಕೀಯ ಪಕ್ಷ ಬೇರೆ ಆಗಲು ಸಾಧ್ಯ ಇಲ್ಲ. ಆದುದರಿಂದ ಪಕ್ಷದ ಕಾರ್ಯಕರ್ತರ ಚಿಂತನೆ, ಸ್ಪೂರ್ತಿ ಮತ್ತು ಮಾರ್ಗದರ್ಶನ ಅಗತ್ಯವಾಗಿದೆ. ಕಾರ್ಯಕರ್ತರ ಶ್ರಮಕ್ಕೆ ಪೂರಕವಾದ ಆಡಳಿತ ವನ್ನು ನೀಡಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮುಖಂಡ ರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಸಂಧ್ಯಾ ರಮೇಶ್ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಪ್ರಾಸ್ತಾವಿಕ ವಾಗಿ ಮಾತ ನಾಡಿದರು. ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು. ಕುತ್ಯಾರ್ ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸರಕಾರಿ ವೈದ್ಯಕೀಯ ಕಾಲೇಜಿಗೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ 25 ಎಕರೆ ಜಾಗ: ಭಟ್

ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವು ದಾದರೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿರುವ 25 ಎಕರೆ ಜಾಗವನ್ನು ನೀಡಲು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ. ಮಣಿಪಾಲದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಿಂದ ಸ್ಥಳೀಯರಿಗೆ ಯಾವುದೇ ಲಾಭ ಇಲ್ಲ. ಮುಂದೆ ಸರಕಾರಿ ಕಾಲೇಜು ಸ್ಥಾಪನೆಯಾದರೆ ಸ್ಥಳೀಯ ಯುವಕರಿಗೆ ತುಂಬಾ ಪ್ರಯೋ ಜನ ಆಗಲಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಉಡುಪಿ ಜಿಲ್ಲೆಗೆ ಅತಿ ಅಗತ್ಯವಾಗಿರುವ ಸರಕಾರಿ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾ ಮೆಡಿಕಲ್ ಕಾಲೇಜನ್ನು ತಕ್ಷಣವೇ ಮಂಜೂರು ಮಾಡಬೇಕು. ಇಲ್ಲಿ ಸಾಕಷ್ಟು ಖಾಸಗಿ ನರ್ಸಿಂಗ್ ಕಾಲೇಜುಗಳಿದ್ದರೂ ಈಗಾಗಲೇ ಅವು ಭರ್ತಿಯಾಗಿವೆ. ಸರಕಾರಿ ನರ್ಸಿಂಗ್ ಕಾಲೇಜಿನಿಂದ ಸರಕಾರಿ ಆಸ್ಪತ್ರೆಗಳಿಗೂ ಸಾಕಷ್ಟು ಸಹಾಯ ಆಗಲಿದೆ. ಇದಕ್ಕೆ ಬೇಕಾದ ಜಾಗದ ವ್ಯವಸ್ಥೆ ಜಿಲ್ಲಾಸ್ಪತ್ರೆಯಲ್ಲಿ ಇದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X