BREAKING NEWS: ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ವರ್ಗಾವಣೆ

ಹೊಸದಿಲ್ಲಿ: ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಲಿಕ್ ಅವರ ಸ್ಥಾನಕ್ಕೆ ಯಾರು ಬರಲಿದ್ದಾರೆ ಎಂದು ಇನ್ನೂ ತಿಳಿದು ಬಂದಿಲ್ಲ. ಸಂವಿಧಾನದ 370ನೇ ವಿಧಿ ರದ್ದು ಮಾಡುವಾಗ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿಯೂ ಬದಲಾಯಿಸಿರುವುದರಿಂದ ಹೊಸ ರಾಜ್ಯಪಾಲರು ಲೆಫ್ಟಿನೆಂಟ್ ಗವರ್ನರ್ ಆಗಿರಲಿದ್ದಾರೆ.
Next Story





