ನಾವು ಸಮರ್ಥ ಪ್ರತಿಪಕ್ಷದ ಪಾತ್ರ ನಿರ್ವಹಿಸುತ್ತೇವೆ: ಶರದ್ ಪವಾರ್
ಬಾರಾಮತಿ(ಮಹಾರಾಷ್ಟ್ರ),ಅ.25: ತನ್ನ ಪಕ್ಷವು ಸಮರ್ಥ ಪ್ರತಿಪಕ್ಷದ ಪಾತ್ರವನ್ನು ನಿರ್ವಹಿಸಲಿದೆ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಇಲ್ಲಿ ಹೇಳಿದರು.
ಜನರು ನಮಗೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಿದ್ದಾರೆಯೇ ಹೊರತು ಸರಕಾರ ರಚಿಸಲು ಅಲ್ಲ. ನಾವು ನಮ್ಮ ಕೆಲಸವನ್ನು ದಕ್ಷತೆಯಿಂದ ನಿರ್ವಹಿಸುತ್ತೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ತಿಳಿಸಿದರು.
288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಬಿಜೆಪಿ 105 ಸ್ಥಾನಗನ್ನು ಮತ್ತು ಅದರ ಮಿತ್ರಪಕ್ಷ ಶಿವಸೇನೆ 56 ಸ್ಥಾನಗಳನ್ನು ಗೆದ್ದಿವೆ. ಕಾಂಗ್ರೆಸ್ 44 ಮತ್ತು ಮಿತ್ರಪಕ್ಷ ಎನ್‌ಸಿಪಿ 54 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.
Next Story