Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಪ್ರವಾಹ ಪೀಡಿತ ಪ್ರದೇಶಗಳಿಗೆ...

ಬೆಳ್ತಂಗಡಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಮಾಧುಸ್ವಾಮಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ26 Oct 2019 10:19 PM IST
share
ಬೆಳ್ತಂಗಡಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಮಾಧುಸ್ವಾಮಿ ಭೇಟಿ

ಬೆಳ್ತಂಗಡಿ: ಪಶ್ವಿಮ ಘಟ್ಟದ ಭೂಕುಸಿತದಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶವನ್ನು ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಶನಿವಾರ ವೀಕ್ಷಿಸಿ, ಸ್ಥಳೀಯ ನಿವಾಸಿಗಳಿಂದ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಸ್ಥಳದಲ್ಲಿಯೇ  ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಕುರಿತು ಸೂಚನೆಗಳನ್ನು ನೀಡಿದರು. 

ಪ್ರವಾಹ ಪೀಡಿತ ಮಿತ್ತಬಾಗಿಲಿನ ಕುಕ್ಕಾವು ಪ್ರದೇಶಕ್ಕೆ ತೆರಳಿದ ಸಚಿವರು ಇಲ್ಲಿನ ಪ್ರದೇಶವನ್ನು ವೀಕ್ಷಿಸಿದರು. ಬಳಿಕ ಚಾರ್ಮಾಡಿ ಗ್ರಾಮದ ಅಂತರ ಹಾಗೂ ಅರಣೆಪಾದೆ ಪ್ರದೇಶ ತೆರಳಿದರು. ನೆರೆಯಿಂದ ಹಾನಿಗೊಳಗಾದ ಸೇತುವೆ, ನದಿಗಳಲ್ಲಿ ತುಂಬಿಕೊಂಡಿದ್ದ ಹೂಳು, ಮರಗಳ ರಾಶಿ, ಹಾನಿಗೊಳಗಾದ ಮನೆಗಳು, ಕೃಷಿಯ ಕುರಿತು, ನದಿ ಪಾತ್ರ ಬದಲಾಯಿಸಿದ್ದರಿಂದ, ನದಿಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ ತೋಟಗಳಿಗೆ, ಮನೆಗಳಿಗೆ ಆಗಾಗ್ಗೆ ನೀರು ನುಗ್ಗುತಿದೆ. ಇಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡಿದರೆ ಮತ್ತೆ ಕೃಷಿಯನ್ನು ಮಾಡಿಕೊಳ್ಳಲು ಸಾಧ್ಯ.  ಸ್ಥಳೀಯರು ಸಚಿವರಿಗೆ ತಿಳಿಸಿದರು. ನದಿಗಳಲ್ಲಿರುವ ಹೂಳನ್ನು ತೆಗದು ಪ್ರವಾಹದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಪ್ರದೇಶದ ನಿವಾಸಿಗಳು ಸಚಿವರಲ್ಲಿ ಮನವಿ ಮಾಡಿಕೊಂಡರು.

ಸಚಿವರ ಜೊತೆ ಶಾಸಕ ಹರೀಶ ಪೂಂಜಾ, ಸಣ್ಣ ನೀರಾವರಿ ಇಲಾಖೆಯ ಸರಕಾರದ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸೂಪರ್‍ಡೆಂಟ್ ಎಂಜಿನಿಯರ್ ರಾಜಶೇಖರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣ ಕುಮಾರ್, ಸಹಾಯಕ ಎಂಜಿನಿಯರ್‍ರಾದ ಪ್ರಸನ್ನ ಹಾಗೂ ಶಿವಪ್ರಸನ್ನ, ಕಿರಿಯ ಎಂಜಿನಿಯರ್ ರಾಕೇಶ್, ತಹಸೀಲ್ದಾರ ಗಣಪತಿ ಶಾಸ್ರ್ತಿ, ಇ.ಒ ಕೆ.ಇ ಜಯರಾಂ, ಜಿ.ಪಂ ಸದಸ್ಯೆ ಸೌಮ್ಯಲತಾ, ತಾ.ಪಂ ಸದಸ್ಯ ಕೊರಗಪ್ಪ ಗೌಡ ಅರಣಪಾದೆ, ಗ್ರಾ.ಪಂ ಚಾರ್ಮಾಡಿ ಅಧ್ಯಕ್ಷೆ ಶೈಲಜಾ, ಸದಸ್ಯರಾದ ಉಮೇಶ್ ಗೌಡ, ಗೋಪಾಲಕೃಷ್ಣ, ರವಿ, ವಿನೋದ, ಕೇಶವತಿ, ಓಬಯ್ಯ, ಸರೋಜಿನಿ, ಮಾಜಿ ಅಧ್ಯಕ್ಷೆ ಶಾರದ, ಹಾಗೂ ಇತರರು ಇದ್ದರು. 

ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕಾಗಿ 30 ಕೋ.ರೂ.ಗಳನ್ನು ಬಿಡುಗಡೆ ಮಾಧುಸ್ವಾಮಿ

ಬೆಳ್ತಂಗಡಿ ತಾಲೂಕಿನಲ್ಲಿ ಆ.9 ರಂದು ಸಂಭವಿಸಿದ ಪ್ರವಾಹದಿಂದ ಹಾನಿಯಾಗಿರುವ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕಾಗಿ 30 ಕೋ.ರೂ.ಗಳನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಕಾಮಗಾರಿಯನ್ನು ಮಳೆ ನಿಂತ ತತ್‍ಕ್ಷಣ ಆರಂಭಿಸುವ ಕುರಿತು ಎಂಜಿನಿಯರ್‍ಗಳ ಜತೆ ಚರ್ಚಿಸಲಾಗಿದೆ. ಇಲಾಖೆ ವ್ಯಾಪ್ತಿಯ ಇನ್ನಿತರ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ರಾಜ್ಯ ಕಾನೂನು ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಸಂಪುಟದ ಸಭೆಯಲ್ಲಿ ಚರ್ಚೆ ಮಾಡುವಂತೆ ರಾಜ್ಯ ಮುಖ್ಯಮಂತ್ರಿಗಳು ಎಲ್ಲಾ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ. ಏನು ಅನಾಹುತಗಳು ಸಂಭವಿಸಿದೆ, ಜನರಿಗೆ ಏನು ನೆರವು ಬೇಕು ಎಂಬುದರ ಕುರಿತು ಸಭೆಯಲ್ಲಿ ಅಭಿಪ್ರಾಯ ತಿಳಿಸುತ್ತೇವೆ ಎಂದು ಸಚಿವರು ತಿಳಿಸಿದರು.

ನದಿ ಪಾತ್ರಗಳ ಪ್ರದೇಶದಲ್ಲಿ ಕೆಲವೊಂದೆಡೆ ಕೃಷಿ ತೋಟಗಳಿಗೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಾಣಕ್ಕೆ ಮನವಿ ಬಂದಿದ್ದು, ಹೀಗಾಗಿ ಅದರ ಕುರಿತು ಅಧ್ಯಯನ ನಡೆಸಲು ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್‍ನ ಶ್ರೀನಿವಾಸ್ ಅವರನ್ನು ಕಳುಹಿಸಿ ಅವರು ನೀಡಿದ ವರದಿಯ ಆಧಾರದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುತ್ತೇವೆ. ಅರಣೆಪಾದೆ ಪ್ರದೇಶದಲ್ಲಿ ಸುತ್ತಮುತ್ತ ಸುಮಾರು 100 ಎಕರೆ ಗಿಂತಲೂ ಅಧಿಕ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಕಾಲುವೆ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ಅದರ ದುರಸ್ಥಿಗಾಗಿ ಕ್ರಿಯಾಯೋಜನೆ ತಯಾರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇವೆ ಎಂದರು.

ನದಿಗಳ ಹೂಳು ತೆಗೆಯುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನದಿಯಿಂದ ತೆಗೆದ ಹೂಳುಗಳನ್ನು ತೆಗೆದು ಏನು ಮಾಡಬಹುದು ಎಂಬ ಸಮಸ್ಯೆಯೂ ಎದುರಾಗುತ್ತದೆ. ಹೂಳು ತೆಗೆಯುವ ಕುರಿತು ಎನ್‍ಡಿಆರ್‍ಎಫ್‍ನಲ್ಲಿ ಈಗಾಗಲೇ ಡಿಸಿಗಳಿಗೆ ಅನುದಾನ ನೀಡಲಾಗಿದೆ ಎಂದರು. ಜತೆಗೆ ಪರಂಬೋಕು ಸ್ಥಳದಲ್ಲಿ ಕೃಷಿ ಹಾನಿಯಾಗಿದ್ದರೆ ಅದರ ಪರಿಹಾರಕ್ಕೆ ಏನೂ ಮಾಡುವಂತಿಲ್ಲ ಎಂದು ತಿಳಿಸಿದರು.

ಹೂತು ಹೋದ ಕಾರು

ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚಾರ್ಮಾಡಿ ಗ್ರಾಮದ ಅಂತರ ಹಾಗೂ ಅರಣಪಾದೆ ಪ್ರದೇಶಕ್ಕೆ ಭೇಟಿ ನೀಡಿ ಹಿಂತಿರುಗುವ ಸಮಯದಲ್ಲಿ ಸಚಿವರ ಜತೆ ಆಗಮಿಸಿದ್ದ ಸರಕಾರಿ ಅಧಿಕಾರಿಯ ಕಾರನ್ನು ಚಾಲಕ ತಿರುಗಿಸುವ ವೇಳೆ ಇಲ್ಲಿನ ತೋಟಗಳಲ್ಲಿ ಹೂಳು ತುಂಬಿದ್ದರಿಂದ ಹೂತು ಹೋದ ಘಟನೆ ನಡೆಯಿತು. ಮಳೆಯೂ ಇದ್ದ ಕಾರಣ ತೋಟಗಳಲ್ಲಿ ಹೂಳು ತುಂಬಿದ್ದರಿಂದ ಕಾರನ್ನು ತೆಗೆಯಲು ಕಷ್ಟವಾಯಿತು. ಬಳಿಕ ಸ್ಥಳೀಯರು ಕೆಸರಿಗೆ ಕಲ್ಲುಗಳನ್ನು ಹಾಕಿದರು ಬಳಿಕ ಕಾರನ್ನು ದೂಡಿ ಮೇಲೆ ತರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X