Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ...

ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಪಿಎಫ್ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Oct 2019 11:37 AM IST
share
ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಪಿಎಫ್ಐ ಆಗ್ರಹ

ಮಂಗಳೂರು: ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ  ಬಂಧನವನ್ನು ಖಂಡಿಸಿರುವ‌ ಪಾಪ್ಯುಲರ್ ‌ಆಫ್‌ ಇಂಡಿಯಾದ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಝಾಕ್ ಕೆಮ್ಮಾರ, ಅವರ ಶೀಘ್ರ ‌ಬಿಡುಗಡೆಗೆ ಆಗ್ರಹಿಸಿದ್ದಾರೆ.

ಪೊಲೀಸರೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವ ಪ್ರಕಾರ, "25 ವರ್ಷಗಳ ಹಿಂದೆ ರಾಯಚೂರಿನ ವಿವಿಧ‌ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ  ವಿನೋದ್ ಎಂಬಾತ‌ ಆರೋಪಿಯಾಗಿದ್ದಾನೆ. 25 ವರ್ಷಗಳಿಂದ ತಲೆಮರೆಸಿಕೊಂಡಿರುವ ಆತ ನರಸಿಂಹಮೂರ್ತಿಯ‌ ಹೆಸರಿನಲ್ಲಿ ಸೆರೆಸಿಕ್ಕಿದ್ದಾನೆ."

ಪೊಲೀಸ್ ಪೇದೆಯೊಬ್ಬ ನರಸಿಂಹಮೂರ್ತಿಯವರನ್ನೇ ವಿನೋದ್ ಎಂದು ಗುರುತಿಸಿರುವುದರ ಹೊರತಾಗಿ ಬೇರೆ ಯಾವುದೇ ಸಾಕ್ಷಿ ಪೊಲೀಸರ ಬಳಿ ಇಲ್ಲ ಎಂದು ಹೇಳಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆ ಪ್ರಕರಣದ‌ ಆರೋಪಿಗಳೆಲ್ಲರೂ ಈ ಹಿಂದೆಯೇ ಖುಲಾಸೆಗೊಂಡಿದ್ದಾರೆ.

ನರಸಿಂಹಮೂರ್ತಿ ತಲೆಮರೆಸಿಕೊಂಡಿದ್ದಾರೆ ಎನ್ನುವ ಪೊಲೀಸರ ಹೇಳಿಕೆ ಇಲ್ಲಿ ಹಾಸ್ಯಾಸ್ಪದವಾಗಿದೆ. ಏಕೆಂದರೆ ನರಸಿಂಹಮೂರ್ತಿ ರಾಜ್ಯದ ಹೆಸರಾಂತ ಪತ್ರಿಕೆಯಾಗಿದ್ದ 'ಗೌರಿ ಲಂಕೇಶ್'ನಲ್ಲಿ ಸಕ್ರಿಯರಾಗಿದ್ದರು. ಅವರ ಬಹಳಷ್ಟು ಲೇಖನ, ವರದಿಗಳು ಕೂಡ ಸ್ವತಃ ಅವರ ಹೆಸರಿನಲ್ಲೇ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಮಾತ್ರವಲ್ಲದೆ, ಅವರು ಒಬ್ಬ ಸಾಮಾಜಿಕ ಹೋರಾಟಗಾರನಾಗಿ ಜನಸಾಮಾನ್ಯರೆಡೆಯಲ್ಲಿ  ಗುರುತಿಸಿಕೊಂಡ ವರು. ಆದರೂ ಇವರು ಪೊಲೀಸರ‌ ಪ್ರಕಾರ‌ 25 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯಾಗಿದ್ದಾರೆ ಎಂದು ಪಿಎಫ್ಐ ತಿಳಿಸಿದೆ.

ಪೊಲೀಸರ ಈ ದ್ವಂದ್ವ ನೀತಿಯು‌ ಪೊಲೀಸ್ ಇಲಾಖೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ಪೊಲೀಸರ ಈ ಪೂರ್ವಾಗ್ರಹಪೀಡಿತ ಕ್ರಮವು, ಜನಪರ ಹೋರಾಟ ಮತ್ತು ಸ್ವತಂತ್ರ ಮಾಧ್ಯಮ ಧ್ವನಿಯನ್ನು  ಉಡುಗಿಸುವ ಪ್ರಯತ್ನವಲ್ಲದೇ ಮತ್ತೇನಲ್ಲ. ನರಸಿಂಹಮೂರ್ತಿಯವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿರುವ ಅಬ್ದುಲ್ ರಝಾಕ್ ಕೆಮ್ಮಾರ, ಅವರ ಪರವಾಗಿ ನಡೆಯುವ ನ್ಯಾಯದ  ಹೋರಾಟದಲ್ಲಿ ಕೈಜೋಡಿಸಲಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X