Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ: ತುಂಬು ಗರ್ಭಿಣಿ ಪೊಲೀಸ್...

ಮುಲ್ಕಿ: ತುಂಬು ಗರ್ಭಿಣಿ ಪೊಲೀಸ್ ಸಿಬ್ಬಂದಿಯನ್ನು ಹೆದ್ದಾರಿಯಲ್ಲಿ ಗಸ್ತಿಗೆ ನಿಲ್ಲಿಸಿದ ಇನ್ಸ್ ಪೆಕ್ಟರ್ ?; ಆರೋಪ

► ಸಾಮಾಜಿಕ ಜಾಲತಾಣದಲ್ಲಿ ವೈರಲ್ ► ವರದಿ ಕೇಳಿದ ಮಂಗಳೂರು ಪೊಲೀಸ್ ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ27 Oct 2019 3:27 PM IST
share
ಮುಲ್ಕಿ: ತುಂಬು ಗರ್ಭಿಣಿ ಪೊಲೀಸ್ ಸಿಬ್ಬಂದಿಯನ್ನು ಹೆದ್ದಾರಿಯಲ್ಲಿ ಗಸ್ತಿಗೆ ನಿಲ್ಲಿಸಿದ ಇನ್ಸ್ ಪೆಕ್ಟರ್ ?; ಆರೋಪ

ಮುಲ್ಕಿ: ಇಲ್ಲಿನ ಪೊಲೀಸ್ ಠಾಣೆಯ ತುಂಬು ಗರ್ಭಿಣಿ ಸಿಬ್ಬಂದಿಯನ್ನು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಸ್ಸು ನಿಲ್ದಾಣದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳ ಬಂದೋಬಸ್ತಿಗಾಗಿ ನೇಮಿಸಿದ್ದು, ವಿವಾದಕ್ಕೀಡಾಗಿದೆ. 

ಈ ಬಗ್ಗೆ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಗಮನಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಡಾ. ಹರ್ಷ ಅವರು ವಿವರಣೆ ಕೊಡಬೇಕಾಗಿ ಮುಲ್ಕಿ ಠಾಣೆ ಇನ್ಸ್ ಪೆಕ್ಟರ್ ರವಿ ಅವರಿಗೆ ಸೂಚನೆ ನೀಡಿದ್ದಾರೆ.

''ಅ.25ರಂದು ಮಧ್ಯಾಹ್ನ ಮುಲ್ಕಿ ಬಸ್ಸು ನಿಲ್ದಾಣದಲ್ಲಿ ತುಂಬು ಗರ್ಭಿಣಿಯೊಬ್ಬರು ಲಾಠಿ ಹಿಡಿದು ಉಪಮುಖ್ಯಮಂತ್ರಿಯವರ ಬಂಧೋಬಸ್ತಿಗಾಗಿ ಉರಿ ಬಿಸಿಲಿನಲ್ಲಿ ನಿಂತಿರುವುದನ್ನು ನೋಡಿದಾಗ ಕರುಳು ಹಿಡಿದಂತಾಯ್ತು. ಹತ್ತಿರ ಹೋಗಿ ಎಷ್ಟು ತಿಂಗಳು ಎಂದು ಕೇಳಿದಾಗ ಅವರು 9 ತಿಂಗಳು ಎಂದು ಹೇಳಿದಾಗ ತಲೆ ಗಿರ್ರ್ ಎಂದಿತು ಎಂದು ವ್ಯಕ್ತಿಯೋರ್ವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರಾದ ಹರ್ಷ ಅವರು ಪ್ರತಿಕ್ರಿಯಿಸಿ ಒಂಬತ್ತು ತಿಂಗಳ ಗರ್ಭಿಣಿ ಪೊಲೀಸ್ ಸಿಬ್ಬಂದಿ ಹೆದ್ದಾರಿ ಬದಿಯಲ್ಲಿ ಗಂಟೆಗಟ್ಟಲೆ ಕರ್ತವ್ಯಕ್ಕೆ ಹಾಕಿರುವುದನ್ನು ಒಪ್ಪಲು ಸಾದ್ಯವಿಲ್ಲ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮೂಲಕ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಪ್ರಕರಣವನ್ನು ಮುಚ್ಚಿಹಾಕಲು ಮುಲ್ಕಿ ಪೊಲೀಸರ ಯತ್ನ: ಆರೋಪ

ತುಂಬು ಗರ್ಭಿಣಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಕರ್ತವ್ಯ ನಿರ್ವಹಿಸಲು ನಿಲ್ಲಿಸಿದ ಬಗ್ಗೆ ಮುಲ್ಕಿ ನಾಗರಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಮುಲ್ಕಿ ಠಾಣೆ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಯತ್ನದಲ್ಲಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಮಹಿಳೆಯ ಪತಿ ಅದೇ ಠಾಣೆಯಲ್ಲಿ ಸಿಬ್ಬಂದಿಯಾಗಿದ್ದು ಅವರಿಗೆ ಊಟ ಕೊಡಲು ಬರುವಾಗ ಹೆದ್ದಾರಿಯಲ್ಲಿ ನಿಂತಿದ್ದನ್ನು ಗಮನಿಸಿ ವಿನಾ ಕಾರಣ ಪೊಲೀಸ್ ವರಿಷ್ಠರ ಮೇಲೆ ಆರೋಪ ಮಾಡಲಾಗಿದೆ ಎಂದು ಹೇಳಿಕೆಯನ್ನು ಗರ್ಭಿಣಿ ಪೊಲೀಸ್ ಸಿಬ್ಬಂದಿಯಿಂದ ಬರೆಯಿಸಿಕೊಳ್ಳಲಾಗಿದೆ ಎಂಬ ಮಾಹಿತಿ ದೊರಕಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X