ಡಿಕೆಶಿಯನ್ನು ಭೇಟಿಯಾದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು, ಅ. 27: ಈಡಿ ದಾಳಿ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ರನ್ನು ಈಡಿ ಬಂಧಿಸಿದ್ದರೂ ಅವರು ವಿಚಲಿತರಾಗಿಲ್ಲ. ಧೈರ್ಯದಿಂದ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ರವಿವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಧೈರ್ಯವಾಗಿದ್ದಾರೆ. ಅವರನ್ನು ವಶಕ್ಕೆ ತೆಗೆದುಕೊಂಡು ಸಂದರ್ಭದಲ್ಲಿ ನಾನು ದೆಹಲಿಗೆ ತೆರಳಿದ್ದೆ. ಆದರೆ ಅವರ ಭೇಟಿಗೆ ಈಡಿ ಅವಕಾಶ ನೀಡಲಿಲ್ಲ ಎಂದು ತಿಳಿಸಿದರು.
ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಕುರಿತು ಚರ್ಚೆ ಮಾಡಿಲ್ಲ ಎಂದು ಹೇಳಿದರು.
Next Story





