Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನ ವಾಯುಪ್ರದೇಶದ ಮೂಲಕ ಪ್ರಧಾನಿ...

ತನ್ನ ವಾಯುಪ್ರದೇಶದ ಮೂಲಕ ಪ್ರಧಾನಿ ಮೋದಿಯವರ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಿಸಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ27 Oct 2019 6:36 PM IST
share
ತನ್ನ ವಾಯುಪ್ರದೇಶದ ಮೂಲಕ ಪ್ರಧಾನಿ ಮೋದಿಯವರ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಿಸಿದ ಪಾಕ್

ಇಸ್ಲಾಮಾಬಾದ್ , ಅ.27: ಜಮ್ಮು ಮತ್ತು ಕಾಶ್ಮೀರದಲ್ಲಿ "ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ" ನಡೆಯುತ್ತಿದೆ ಎಂದು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿ.ವಿ.ಐ.ಪಿ ವಿಮಾನವನ್ನು ತನ್ನ ವಾಯುಪ್ರದೇಶದ ಮೂಲಕ ಹಾರಲು ಅನುಮತಿ ನೀಡುವ ಮನವಿಯನ್ನು ಪಾಕಿಸ್ತಾನ ಶನಿವಾರ ತಿರಸ್ಕರಿಸಿದೆ.

ಕಾಶ್ಮೀರದ  ವಿಚಾರದಲ್ಲಿ ಎರಡು ಪರಮಾಣು-ಸಶಸ್ತ್ರ ಎದುರಾಳಿ ರಾಷ್ಟ್ರಗಳ  ನಡುವೆ ಉದ್ವಿಗ್ನತೆ ಶಮನವಾಗಿಲ್ಲ. ಇದೀಗ ಪಾಕಿಸ್ತಾನ ಈ ನಿರ್ಧಾರ ಕೈಗೊಳ್ಳುವುದರೊಂದಿಗೆ  ಎರಡೂ ರಾಷ್ಟ್ರಗಳ ನಡುವೆ ಮತ್ತೆ ವಿವಾದ ಹುಟ್ಟಿಕೊಂಡಿದೆ.

ಕಳೆದ ವಾರ ಅಧ್ಯಕ್ಷ ರಾಮನಾಥ್ ಕೋವಿಂದ್ ಮತ್ತು ಮೋದಿ ಅವರ ಮನವಿಗಳನ್ನು ತಿರಸ್ಕರಿಸಿತ್ತು.  ಇದೀಗ ಮತ್ತೊಮ್ಮೆ  ಭಾರತೀಯ ನಾಯಕರು ತನ್ನ ವಾಯುಪ್ರದೇಶವನ್ನು ಬಳಸಲು ಇಸ್ಲಾಮಾಬಾದ್ ನಿರಾಕರಿಸಿದ್ದು ಇತ್ತೀಚಿಗೆ ಇದು ಮೂರನೇ ಬಾರಿಯಾಗಿದೆ.

"ಭಾರತದ ಪ್ರಧಾನಿ ನಮ್ಮ ವಾಯುಪ್ರದೇಶವನ್ನು ಬಳಸಲು ಬಯಸಿದ್ದರು. ಆದರೆ ಭಾರತೀಯ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಆಕ್ರಮಣ ಮತ್ತು ನಡೆಯುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಲು ಕಾಶ್ಮೀರಿಗಳು ಇಂದು ಆಚರಿಸುತ್ತಿರುವ ಕಪ್ಪು ದಿನದ ಹಿನ್ನೆಲೆಯಲ್ಲಿ  ನಾವು ಅನುಮತಿಯನ್ನು ನಿರಾಕರಿಸಿದ್ದೇವೆ" ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಹೇಳಿದ್ದಾರೆ ಈ ನಿರ್ಧಾರದ ಬಗ್ಗೆ ಭಾರತೀಯ ಹೈಕಮಿಷನರ್ (ರಾಯಭಾರಿ) ಗೆ ತಿಳಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಸೋಮವಾರ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಅವರು ಅಂತರರಾಷ್ಟ್ರೀಯ ವ್ಯಾಪಾರ ವೇದಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸೌದಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಭೇಟಿಗಾಗಿ ಮೋದಿಯ ವಿಮಾನವನ್ನು ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿಸಬೇಕೆಂಬ ಭಾರತದ ಮನವಿಯನ್ನು ಸೆಪ್ಟೆಂಬರ್ ನಲ್ಲಿ ಪಾಕಿಸ್ತಾನ ತಿರಸ್ಕರಿಸಿತು. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ಅದೇ ತಿಂಗಳಲ್ಲಿ ಐಸ್ಲ್ಯಾಂಡ್ಗೆ ಹಾರಾಟಕ್ಕಾಗಿ ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನೀಡುವ ಭಾರತದ ಮನವಿಯನ್ನು ಅದು ನಿರಾಕರಿಸಿತ್ತು.

ಬಾಲಕೋಟ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಶಿಬಿರದ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ನಂತರ ಫೆಬ್ರವರಿಯಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಿತ್ತು. ಮಾರ್ಚ್ 27 ರಂದು ಹೊಸದಿಲ್ಲಿ , ಬ್ಯಾಂಕಾಕ್ ಮತ್ತು ಕೌಲಾಲಂಪುರ ಹೊರತುಪಡಿಸಿ ಎಲ್ಲಾ ವಿಮಾನಗಳಿಗಾಗಿ ದೇಶವು ತನ್ನ ವಾಯುಪ್ರದೇಶವನ್ನು ತೆರೆಯಿತು.

ಮೇ 15 ರಂದು ಪಾಕಿಸ್ತಾನವು ಭಾರತಕ್ಕೆ ವಿಮಾನಯಾನ ನಿಷೇಧವನ್ನು ಮೇ 30 ರವರೆಗೆ ವಿಸ್ತರಿಸಿತು. ಇದು ಜುಲೈ 16 ರಂದು ಎಲ್ಲಾ ನಾಗರಿಕರ ಸಂಚಾರಕ್ಕಾಗಿ ತನ್ನ ವಾಯುಪ್ರದೇಶವನ್ನು ಸಂಪೂರ್ಣವಾಗಿ ತೆರೆಯಿತು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸುವ ಭಾರತದ ಆಗಸ್ಟ್ 5 ರ ನಿರ್ಧಾರವನ್ನು ವಿರೋಧಿಸಿ ಪಾಕಿಸ್ತಾನ ಈಗಾಗಲೇ ಭಾರತದೊಂದಿಗಿನ ತನ್ನ ವಹಿವಾಟನ್ನು ಸ್ಥಗಿತಗೊಳಿಸಿದೆ ಮತ್ತು ರೈಲು ಮತ್ತು ಬಸ್ ಸೇವೆಗಳನ್ನು ನಿಲ್ಲಿಸಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳಲು ಸಂವಿಧಾನದ 370 ನೇ ವಿಧಿಯನ್ನು ಭಾರತ ರದ್ದುಪಡಿಸಿ ಅದನ್ನು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.  ಇದರಿಂದಾಗಿ  ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಯಿತು. 370 ನೇ ವಿಧಿಯನ್ನು ರದ್ದುಗೊಳಿಸುವುದು ಆಂತರಿಕ ವಿಷಯ ಎಂದು ಭಾರತವು ಅಂತರ್ ರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟವಾಗಿ ತಿಳಿಸಿದೆ ಮತ್ತು ವಾಸ್ತವವನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X