Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಪಟಾಕಿ...

ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಪಟಾಕಿ ತ್ಯಾಜ್ಯ ಸೃಷ್ಟಿ

ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದ ವಿಲೇವಾರಿ

ವಾರ್ತಾಭಾರತಿವಾರ್ತಾಭಾರತಿ29 Oct 2019 11:13 PM IST
share
ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಪಟಾಕಿ ತ್ಯಾಜ್ಯ ಸೃಷ್ಟಿ

ಬೆಂಗಳೂರು, ಅ.29: ಮೂರು ದಿನಗಳ ದೀಪಾವಳಿ ಆಚರಣೆಯಿಂದಾಗಿ ನಗರದಲ್ಲಿ ಭಾರೀ ಪ್ರಮಾಣದ ಪಟಾಕಿ ತ್ಯಾಜ್ಯ ಸೃಷ್ಟಿಯಾಗಿದ್ದು, ಸಾರ್ವಜನಿಕರು ಎಲ್ಲೆಂದರಲ್ಲಿ ಅದಕ್ಕೆ ಬೆಂಕಿ ಹಚ್ಚುತ್ತಿರುವುದು ಕಂಡು ಬರುತ್ತಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಮೂರು ದಿನಗಳಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಸಿಡಿಸಿದ್ದು ಇದರಿಂದಾಗಿ ಭಾರಿ ಪ್ರಮಾಣದ ಒಣ ತ್ಯಾಜ್ಯ ಸೃಷ್ಟಿಯಾಗಿದೆ. ಬಿಬಿಎಂಪಿಯಿಂದ ರಸ್ತೆಗಳ ಸ್ವಚ್ಛತಾ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದಾಗಿ ನಗರದ ಹಲವೆಡೆ ತ್ಯಾಜ್ಯಕ್ಕೆ ಬೆಂಕಿ ಹಚ್ಚಿರುವ ದೃಶ್ಯಗಳು ಕಂಡು ಬಂದರೆ, ಹಲವೆಡೆ ರಸ್ತೆಗಳಲ್ಲಿಯೇ ತ್ಯಾಜ್ಯ ಹರಡಿಕೊಂಡಿದೆ.

ಇದರ ನಡುವೆ, ದಸರಾ ಹಬ್ಬದಂದು ವಾಹನಗಳಿಗೆ ಪೂಜೆ ಸಲ್ಲಿಸದವರು ದೀಪಾವಳಿ ಹಬ್ಬದ ದಿನ ಪೂಜೆ ಸಲ್ಲಿಸಿದ್ದಾರೆ. ಆ ಹಿನ್ನೆಲೆಯಲ್ಲಿ ರೈತರು ಮಾರಾಟಕ್ಕಾಗಿ ತೆಗೆದುಕೊಂಡು ಬರಲಾಗಿದ್ದ ಬಾಳೆಕಂದು, ಮಾವಿನ ಎಲೆ ಹಾಗೂ ಬೂದು ಕುಂಬಳ ಕಾಯಿಗಳನ್ನು ಎಲ್ಲೆಂದರಲ್ಲಿ ಬಿಟ್ಟು ಹೋಗಿದ್ದಾರೆ. ಪರಿಣಾಮ ನಿಗದಿಗಿಂತಲೂ ಹೆಚ್ಚಿನ ಪ್ರಮಾಣ ತ್ಯಾಜ್ಯ ಸೃಷ್ಟಿಯಾಗಿದ್ದು, ವಿಲೇವಾರಿ ಪಾಲಿಕೆಗೆ ತಲೆನೋವಾಗಿ ಪರಿಣಮಿಸಲಿದೆ.

ಸಾಮಾನ್ಯ ದಿನಗಳಲ್ಲಿ ನಗರದಲ್ಲಿ ನಾಲ್ಕೂವರೆ ಸಾವಿರ ಟನ್ ತ್ಯಾಜ್ಯ ಸೃಷ್ಟಿಯಾಗುತ್ತದೆ. ಆದರೆ, ನಗರದಲ್ಲಿ ಕಳೆದೆರಡು ದಿನಗಳಿಂದ ಪೂರ್ಣ ಪ್ರಮಾಣದ ತ್ಯಾಜ್ಯ ವಿಲೇವಾರಿ ಕಾರ್ಯ ನಡೆದಿಲ್ಲ. ಇದರೊಂದಿಗೆ ಪಟಾಕಿ ತ್ಯಾಜ್ಯ ಶೀಘ್ರ ವಿಲೇವಾರಿ ಮಾಡದಿದ್ದರೆ ಗಾಳಿಗೆ ಬೇರೆಡೆಗೆ ಹಾರುವ ಸಾಧ್ಯತೆಯಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಮಾತ್ರ ಪಟಾಕಿ ತ್ಯಾಜ್ಯ ವಿಲೇವಾರಿಗೆ ಕ್ರಮಕೈಗೊಳ್ಳಲು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ನಿರ್ವಹಣೆಗೆ ಸೂಚನೆ: ಪಟಾಕಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಈಗಾಗಲೇ ಸಿಬ್ಬಂದಿಗೆ ಸೂಚಿಸಲಾಗಿದೆ. ಜತೆಗೆ ಪಟಾಕಿ ತ್ಯಾಜ್ಯಕ್ಕೆ ಯಾವುದೇ ಕಾರಣಕ್ಕೂ ಬೆಂಕಿ ಹಾಕದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ದೀಪಾವಳಿ ಸಂಭ್ರಮ ಸಿಲಿಕಾನ್ ಸಿಟಿಯ ಜನತೆಯಲ್ಲಿ ಹರ್ಷ ತಂದಿದ್ದರೆ, ಪೌರ ಕಾರ್ಮಿಕರಿಗೆ ಹೆಚ್ಚಿನ ಹೊರೆ ಹೊರಿಸಿದೆ. ಮನೆ ಮನೆಯಿಂದ ಸಂಗ್ರಹವಾಗುವ ಕಸದೊಂದಿಗೆ ಪಟಾಕಿ ರಾಶಿ ಪೌರ ಕಾರ್ಮಿಕರಿಗೆ ಫಜೀತಿ ತಂದಿದೆ. ಕೇವಲ ಮೂರು ದಿನಗಳಲ್ಲಿ ಪ್ರತಿ ಮನೆಯಿಂದ ಸಂಗ್ರಹವಾಗುವ ಕಸದ ರಾಶಿ ಪ್ರಮಾಣ, ಎರಡು ಪಟ್ಟು ಹೆಚ್ಚಾಗಿದೆ.

ಎಲ್ಲೆಲ್ಲೂ ಪಟಾಕಿ ರಾಶಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ, ಬಿಬಿಎಂಪಿ ಹಾಗೂ ಹಲವು ಸಂಘ-ಸಂಸ್ಥೆಗಳು ಬೆಳಕಿನ ಹಬ್ಬ ದೀಪಾವಳಿ ಹಬ್ಬದಂದು ಪರಿಸರ ಸ್ನೇಹಿ ಹಬ್ಬವಾಗಿ ಆಚರಿಸುವಂತೆ ಮನವಿ ಮಾಡಿದ್ದರು. ಆದರೆ, ಇದ್ಯಾವುದರ ಬಗೆಯೂ ಚಿಂತಿಸದ ಬೆಂಗಳೂರು ಜನತೆ ತಮ್ಮ ಮನೆ ಮುಂದಿನ ರಸ್ತೆಗಳಲ್ಲಿ ಪಟಾಕಿಯನ್ನು ಸಿಡಿಸುವುದರ ಮೂಲಕ ಕಸದ ರಾಶಿಯನ್ನೇ ಸೃಷ್ಟಿಸಿದ್ದಾರೆ.

ಕಸದ ರಾಶಿಗೆ ಜನರೇ ಕಾರಣ: ನಗರದಲ್ಲಿ ನಿರಂತರ ಮಳೆಯಿಂದಾದ ಅನಾಹುತಗಳಿಗೆ ಪಾಲಿಕೆ ಹಾಗೂ ಸರಕಾರವನ್ನು ದೂಷಣೆ ಮಾಡಲಾಗುತ್ತಿದೆ. ಆದರೆ, ಕಳೆದ ಎರಡು-ಮೂರು ದಿನಗಳಿಂದ ಪಟಾಕಿ ಸಿಡಿತದಿಂದಾಗಿರುವ ಕಸದ ರಾಶಿಗೆ ಬೆಂಗಳೂರು ಜನತೆಯೇ ಕಾರಣ ಎಂದು ನಾಗರಿಕರು ಆರೋಪಿಸುತ್ತಿದ್ದಾರೆ.

ಪೌರ ಕಾರ್ಮಿಕರ ಪಾಡು ಹೇಳತೀರದು: ನಗರದಾದ್ಯಂತ ರವಿವಾರ ಹಾಗೂ ಸೋಮವಾರ ಜನತೆ ಹೊಸ ಉಡುಗೆ ತೊಟ್ಟು, ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು ಸವಿದು ಹಬ್ಬದ ಸಂಭ್ರಮದಲ್ಲಿ ಮೈ ಮರೆತಿದ್ದರು. ಆದರೆ, ಇವರು ಮಾಡಿರುವ ಕಸವನ್ನು ಶುಚಿ ಮಾಡುವಲ್ಲಿ ತಮ್ಮ ಇಡೀ ದಿನವನ್ನು ವ್ಯಯಿಸುತ್ತಿರುವ ಪೌರ ಕಾರ್ಮಿಕರ ಪಾಡನ್ನು ಕೇಳುವವರೇ ಇಲ್ಲವಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ ಪಟಾಕಿಯ ಸದ ರಾಶಿಯನ್ನು ತೆಗೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X