Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟಿಪ್ಪು ಕುರಿತ ಪಠ್ಯ ತೆಗೆಯಲು ಚಿಂತನೆ:...

ಟಿಪ್ಪು ಕುರಿತ ಪಠ್ಯ ತೆಗೆಯಲು ಚಿಂತನೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ30 Oct 2019 12:31 PM IST
share
ಟಿಪ್ಪು ಕುರಿತ ಪಠ್ಯ ತೆಗೆಯಲು ಚಿಂತನೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಅ.30: ಈಗಾಗಲೇ ಟಿಪ್ಪು ಜಯಂತಿಯನ್ನು ರದ್ದು ಮಾಡಿ ಆದೇಶಿಸಲಾಗಿದೆ. ಅಲ್ಲದೆ, ಶಾಲಾ-ಕಾಲೇಜು ಪಠ್ಯ ಪುಸ್ತಕದಿಂದಲೂ ಟಿಪ್ಪುಸುಲ್ತಾನ್ ಕುರಿತ ಪಠ್ಯಗಳನ್ನು ತೆಗೆಯಲು ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟ ಜಂಟಿಯಾಗಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸುವುದಿಲ್ಲ. ಶಾಲಾ ಪುಸ್ತಕಗಳಲ್ಲಿನ ಟಿಪ್ಪು ಕುರಿತ ಪಠ್ಯಗಳನ್ನು ತೆಗೆಯಲು ಚರ್ಚಿಸಿದ್ದೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಯಾವುದೇ ವಿಚಾರ ಪಠ್ಯ ಪುಸ್ತಕಗಳಲ್ಲಿ ಇರಬಾರದು. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಈ ಕುರಿತು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಸರಕಾರದ ಮುಖ್ಯ ಕಾರ್ಯದರ್ಶಿ, ಹಿರಿಯ ಅಧಿಕಾರಿಗಳ ಜತೆಗೂ ಆರಂಭದಲ್ಲೇ ಸರಕಾರದ ಧ್ಯೇಯೋದ್ದೇಶ ತಿಳಿಸಲಾಗಿದೆ. ಎಲ್ಲ ಜಿಲ್ಲೆಗಳ ಡಿಸಿಗಳ ಜತೆಗೆ ಸಭೆ ಮಾಡಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ದುರಾದೃಷ್ಟವಶಾತ್ ರಾಜ್ಯದಲ್ಲಿ ನೆರೆ, ಬರ ಬಂತು. ಎರಡನ್ನೂ ಎದುರಿಸಲು ಅಧಿಕಾರಿಗಳು ಹಗಲು, ರಾತ್ರಿ ದುಡಿಯುತ್ತಿದ್ದಾರೆ. 22 ಜಿಲ್ಲೆಗಳಲ್ಲಿ ನೆರೆ, 5 ಜಿಲ್ಲೆಗಳಲ್ಲಿ ಬರ ಇದೆ ಎಂದು ತಿಳಿಸಿದರು.

ಎನ್‌ಡಿಆರ್‌ಎಫ್ ನಿಯಮದಡಿ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಪರಿಹಾರ ಕೊಡುತ್ತಿದ್ದೇವೆ. ಸ್ವಾತಂತ್ರ ನಂತರ ಯಾವುದೇ ಸರಕಾರ ಎನ್‌ಡಿಆರ್‌ಎಫ್ ನಿಯಮ ಮೀರಿ ಪರಿಹಾರ ಘೋಷಣೆ ಮಾಡಿರಲಿಲ್ಲ. ಪ್ರವಾಹಕ್ಕೆ ಕೇಂದ್ರದಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಮಧ್ಯಂತರ ಪರಿಹಾರವಾಗಿ ಕೇಂದ್ರ 1,200 ಕೋಟಿ ರೂ. ರಾಜ್ಯದಿಂದ 2,969 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ. ತೆರಿಗೆ ಸಂಗ್ರಹದಲ್ಲಿ ಸರಕಾರ ನಿಗದಿತ ಗುರಿ ಸಾಧಿಸಿದೆ. ನಿರುದ್ಯೋಗ ಪ್ರಮಾಣ ರಾಜ್ಯದಲ್ಲಿ ಶೇ.0.7ರಷ್ಟು ಇದೆ ಎಂದು ತಿಳಿಸಿದರು.

ಕಳೆದ ಎರಡು ತಿಂಗಳಿನಿಂದ ಉತ್ತರ ಕರ್ನಾಟಕ ಮತ್ತು ಕೊಡಗು ಇತಿಹಾಸ ಕಾಣದ ಪ್ರವಾಹಕ್ಕೆ ತುತ್ತಾಗಿದೆ. ಆದರೆ, ಈ ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರಕಾರ ಯಶಸ್ವಿಯಾಗಿ ನಿರ್ವಹಿಸಿದೆ. ರಾಜ್ಯದಲ್ಲಿ ಪ್ರವಾಹದಿಂದಾದ ಹಾನಿಯನ್ನು ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ವೆ ಮಾಡಿದ್ದಾರೆ. ಕೇಂದ್ರ, ರಾಜ್ಯ ಸರಕಾರದಿಂದ ಹಣ ಬಿಡುಗಡೆಯಾಗಿದೆ.

ಹೀಗಾಗಿ ಪರಿಹಾರ ಕಾರ್ಯಕ್ಕೆ ಬೇಕಾದಷ್ಟು ಹಣ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಕೌಂಟ್‌ನಲ್ಲಿದೆ. ಈಗಾಗಲೇ ಸಂತ್ರಸ್ತರ ಬಳಕೆಯ ವೆಚ್ಚಕ್ಕೆ 10 ಸಾವಿರ ಹಣ ನೀಡಲಾಗಿದೆ. ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೂ 10 ಸಾವಿರ ಹಣ ನೀಡಲಾಗಿದೆ. ನೆರೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಘೋಷಿಸಲಾಗಿದೆ. ನೆರೆಯಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದ್ದು, ಇದನ್ನು ಸರಿಪಡಿಸುವ ಕೆಲಸಗಳು ನಡೆಯುತ್ತಿವೆ. ಇನ್ನು ಒಂದು ವಾರದಲ್ಲಿ 18,131 ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು.

ನೆರೆ ಸಂತ್ರಸ್ತರಿಗೆ ಮನೆ ಕಟ್ಟಲು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇವೆ. ಈವರೆಗೆ ಪೂರ್ಣ ಹಾನಿಯಾದ 7,481 ಮನೆಗಳಿಗೆ 5 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ನೆರೆ ಸಂಬಂಧ ಜನರಲ್ಲಿ ಪ್ರತಿಪಕ್ಷಗಳು ಗೊಂದಲ ಹುಟ್ಟಿಸುತ್ತಿವೆ. ನಮ್ಮ ಪರಿಹಾರ ಕಾರ್ಯಗಳಲ್ಲಿ ಚ್ಯುತಿ ಆಗಿಲ್ಲ. ಪ್ರತಿ ಪಕ್ಷಗಳು ಗೊಂದಲ ಹುಟ್ಟಿಸುತ್ತಿರುವುದು ಸರಿಯಲ್ಲ. ನೆರೆ, ಬರ ಸನ್ನಿವೇಶದಲ್ಲೂ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸಿಲ್ಲ ಎಂದು ವಿವರಿಸಿದರು.

ಅಭಿವೃದ್ಧಿಯೇ ಆಡಳಿತದ ಮಂತ್ರದೊಂದಿಗೆ ಸರಕಾರ ಕಾರ್ಯಾರಂಭ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಆರಂಭದಲ್ಲೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಕೈ ಜೋಡಿಸಿತು. ಕೇಂದ್ರದ ಈ ಯೋಜನೆಯ ನೆರವಿನ ಜೊತೆಗೆ ರಾಜ್ಯದಿಂದ ಹೆಚ್ಚುವರಿ ನೆರವು ಕೊಡಲಾಗುತ್ತಿದೆ. ಮೀನುಗಾರರ, ನೇಕಾರರ ಸಾಲಮನ್ನಾ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂರು ಜನ ಉಪಮುಖ್ಯಮಂತ್ರಿಗಳ ಸೃಷ್ಟಿ ಕೇಂದ್ರದ ವರಿಷ್ಟರ ನಿರ್ಧಾರ. ಇದು ಕೇಂದ್ರದ ಸಹಜ ನಿರ್ಧಾರ. ನೂರು ದಿನದಲ್ಲಿ ನಾನು ಯಾವ ರೀತಿ ಆಡಳಿತ ಮಾಡಿದ್ದೇನೆ ಎಂದು ಜನತೆಗೆ ಗೊತ್ತು. ಉಳಿದ ಅವಧಿಯಲ್ಲೂ ಲೋಪದೋಷ ಸರಿಪಡಿಸಿಕೊಂಡು ಕೆಲಸ ಮಾಡುತ್ತೇವೆ. ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ಕೇಂದ್ರ ಸರಕಾರ ನನ್ನ ಕೈಕಟ್ಟಿ ಹಾಕಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನನಗೆ ವರಿಷ್ಠರು ಯಾವುದೇ ಅಡ್ಡಿ ಆತಂಕ ತಂದಿಲ್ಲ ಎಂದು ಹೇಳಿದರು.

ಮೂರು ತಿಂಗಳಲ್ಲಿ ಐಎಎಸ್ ಅಧಿಕಾರಿಗಳ ಬದಲಾವಣೆ ಕುರಿತು ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಕೆಲವು ತೀರ್ಮಾನ ಅನಿವಾರ್ಯ. ಹೀಗಾಗಿ ವರ್ಗಾವಣೆ ಮಾಡಲಾಗಿದೆ. ಆಡಳಿತದ ಹಿತದೃಷ್ಟಿಯಿಂದ ಕೆಲವೊಂದು ತೀರ್ಮಾನ ಮಾಡಬೇಕು. ನನ್ನ ಯಾವುದೇ ತೀರ್ಮಾನಗಳಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿಲ್ಲ. ಸಂಪುಟ ರಚನೆಯಲ್ಲೂ ಅಡ್ಡಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ಜನರಿಗೆ ಕಸದ ಸಮಸ್ಯೆ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಚಿತ್ರಣ ಬದಲಾಯಿಸುತ್ತೇನೆ. ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಿದರು.

ಯೋಗ್ಯರಿಗೆ ಪ್ರಶಸ್ತಿ!

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯನ್ನು ಪಾರದರ್ಶಕತೆಯಿಂದ ನಡೆಸಿದ್ದು, ಯೋಗ್ಯರಿಗೆ ಈ ಬಾರಿ ರಾಜ್ಯ ಪ್ರಶಸ್ತಿ ನೀಡುತ್ತಿದ್ದೇವೆ. ಪ್ರತಿಯೊಂದು ಜಿಲ್ಲೆಗೆ ಆದ್ಯತೆ ನೀಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ನಡೆದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ಮಾಧ್ಯಮ ನಿರ್ಬಂಧ ಇಲ್ಲ

ವಿಧಾನಸಭೆಯಲ್ಲಿ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದ ಕುರಿತು ನಾನು ಸ್ಪೀಕರ್ ಜತೆ ಮಾತನಾಡಿ, ಮನವರಿಕೆ ಮಾಡಿದ್ದೇನೆ. ಮುಂದಿನ ಅಧಿವೇಶನದಿಂದ ಮಾಧ್ಯಮ ನಿಬರ್ಂಧ ಇರುವುದಿಲ್ಲ. ಮುಂದಿನ ಅಧಿವೇಶನದಿಂದ ಮೊದಲಿದ್ದ ವ್ಯವಸ್ಥೆಯೇ ಬರಲಿದೆ. ಮಾಧ್ಯಮಗಳಿಗೆ ಮೊದಲಿನ ಹಾಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X