Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ​ಆಯುಷ್ಮಾನ್ ಯೋಜನೆಯ...

ಉಡುಪಿ: ​ಆಯುಷ್ಮಾನ್ ಯೋಜನೆಯ ಸರಳೀಕರಣಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ30 Oct 2019 5:36 PM IST
share
ಉಡುಪಿ: ​ಆಯುಷ್ಮಾನ್ ಯೋಜನೆಯ ಸರಳೀಕರಣಕ್ಕೆ ಒತ್ತಾಯ

ಉಡುಪಿ, ಅ. 30: ಕೇಂದ್ರ ಸರಕಾರ ಬಡವರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಇನ್ನಷ್ಟು ಸರಳೀಕರಿಸಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆ ಫಲಾನುಭವಿಗಳೊಂದಿಗೆ ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರ ಸೂಚನೆಯಂತೆ ಫಲಾನುಭವಿಗಳೊಂದಿಗೆ ಈ ಸಂವಾದ ನಡೆಯುತ್ತಿದೆ ಎಂದರು.

ಹಿಂದಿನ ಕರ್ನಾಟಕ ಸರಕಾರ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯನ್ನು ಒಟ್ಟಿಗೆ ಸೇರಿಸಿ ಕಗ್ಗಂಟು ಮಾಡಿದರು. ಕ್ಯಾನ್ಸರ್, ಕಿಡ್ನಿ, ಹೃದಯ ಮೊದಲಾದ ಕಾಯಿಲೆಗಳು ಇರುವ 3ಎ ವರ್ಗದ ರೋಗಿಗಳು ಸರಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿಂದ ಶಿಫಾರಸು ಪತ್ರ ಪಡೆದು ಖಾಸಗಿ ಆಸ್ಪತ್ರೆಗೆ ಹೋಗಬೇಕಾಗಿದೆ. ಇದನ್ನು ರದ್ದುಪಡಿಸಿ ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ ಸೇವೆ ಪಡೆಯುವ ವ್ಯವಸ್ಥೆ ಮಾಡಬೇಕಾಗಿದೆ ಎಂದು ಶೋಭಾ ಹೇಳಿದರು.

3ಎ ವರ್ಗದ ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದರೆ ಅವ್ಯವಹಾರವಾಗುವ ಸಾಧ್ಯತೆ ಇದೆ. ಚಿಕಿತ್ಸೆ ಇಲ್ಲದೆ ಬಿಲ್ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳುತಿದ್ದಾರೆ. ಯೋಜನೆಗೆ ಸಂಬಂಧಿಸಿದ ನೋಡಲ್‌ಅಧಿಕಾರಿಗಳಿರುವಾಗ ಅವ್ಯವಹಾರವಾಗದೆ ನಿಜವಾದ ರೋಗಿಗಳಿಗೆ ಅನುಕೂಲ ಸಿಗಬೇಕಾಗಿದೆ ಎಂದು ಮುಖ್ಯಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ರಘುಪತಿ ಭಟ್ ವಿವರಿಸಿದರು.

ಆಯುಷ್ಮಾನ್ ಯೋಜನೆ ಜಾರಿಗೆ ಬಂದ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಭಟ್ ಹೇಳಿದರು.

ಯೋಜನೆಯ ಫಲಾನುಭವಿಗಳು ಆಯುಷ್ಮಾನ್ ಯೋಜನೆಯಿಂದ ತಮಗಾದ ಪ್ರಯೋಜನವನ್ನು ತಿಳಿಸಿದರು. ರಾತ್ರಿ ವೇಳೆ ಅಪಘಾತವಾದರೆ ಬೆಳಗಿನವರೆಗೆ ಕಾಯಲು ಆಸ್ಪತ್ರೆಯಲ್ಲಿ ತಿಳಿಸುತ್ತಿದ್ದಾರೆ ಎಂದವರು ದೂರಿದರು. ಇಂತಹ ಯೋಜನೆಗಳನ್ನು ಮನೆ ಮನೆಗೆ ತಿಳಿಸಬೇಕು ಎಂದು ಸಲಹೆಗಳನ್ನು ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಆಯೋಜಿಸಿದ ಯೋಜನೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯದಿಂದ ಪಾಲ್ಗೊಂಡ ಏಕೈಕ ಫಲಾನುಭವಿ ಹಿರಿಯಡಕದ ಗಜಾನನ ನಾಯಕ್ ಅವರು ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯರಾದ ಶಿಲ್ಪಾಸುವರ್ಣ, ಗೀತಾಂಜಲಿ ಸುವರ್ಣ, ಸುಮಿತ್ ಬೈಲೂರು, ರೇಶ್ಮಾ ಉದಯಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X