Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.29: 'ಪೆನ್ಸಿಲ್ ಬಾಕ್ಸ್' ಕನ್ನಡ...

ನ.29: 'ಪೆನ್ಸಿಲ್ ಬಾಕ್ಸ್' ಕನ್ನಡ ಚಲನಚಿತ್ರ ಕರಾವಳಿ ಭಾಗದಲ್ಲಿ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ30 Oct 2019 6:34 PM IST
share
ನ.29: ಪೆನ್ಸಿಲ್ ಬಾಕ್ಸ್ ಕನ್ನಡ ಚಲನಚಿತ್ರ ಕರಾವಳಿ ಭಾಗದಲ್ಲಿ ತೆರೆಗೆ

ಪುತ್ತೂರು: ದೃಶ್ಯ ಮೂವೀಸ್ ಬ್ಯಾನರಿನಡಿಯಲ್ಲಿ ಉದ್ಯಮಿ ದಯಾನಂದ ಎಸ್ ರೈ ಅವರ ನಿರ್ಮಾಣದಲ್ಲಿ ತಯಾರಾದ ಮಕ್ಕಳ ಕಥಾನಕವನ್ನೊಳಗೊಂಡ ಸದಭಿರುಚಿಯ ಮನರಂಜನೆಯ 'ಪೆನ್ಸಿಲ್ ಬಾಕ್ಸ್' ಕನ್ನಡ ಚಲನಚಿತ್ರ ನ.29 ರಂದು ರಾಜ್ಯದಾದ್ಯಂತ ತೆರೆ ಕಾಣಲಿದ್ದು, ಕರಾವಳಿ ಭಾಗದ ಎಲ್ಲಾ ಕಡೆಗಳ ಥಿಯೇಟರ್‍ಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಚನಲಚಿತ್ರದ ನಿರ್ಮಾಪಕ ದಯಾನಂದ ಎಸ್.ರೈ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 'ಪೆನ್ಸಿಲ್ ಬಾಕ್ಸ್'  ಚಲನಚಿತ್ರದ  ಚಿತ್ರೀಕರಣ ಸಂಪೂರ್ಣಗೊಂಡಿದ್ದು, ಈ ಚಲನಚಿತ್ರದಲ್ಲಿ ಸ್ಟಾರ್ ಸುವರ್ಣ ಡ್ಯಾನ್ಸ್ ಸೀಸನ್-2 ಹಾಗೂ ಕಾಮಿಡಿ ರಿಯಾಲಿಟಿ ಶೋ ಮೂಲಕ ಕರ್ನಾಟಕದಲ್ಲಿ ಮನೆಮಾತಾದ ಪುತ್ತೂರಿನ  ದೀಕ್ಷಾ ಡಿ. ರೈ  ಹಾಗೂ ಮಂಗಳೂರಿನ ಸಮೃದ್ದ್ ಆರ್. ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರಾವಳಿಯ ಖ್ಯಾತ ನಟರಾದ ಅರವಿಂದ್ ಬೋಳಾರ್ ಮತ್ತು ಭೋಜರಾಜ್ ವಾಮಂಜೂರು ವಿಶೇಷ ಪಾತ್ರದ ಮೂಲಕ ಕನ್ನಡದಲ್ಲಿ ತಮ್ಮ ಝಲಕ್ ತೋರಿಸಲಿದ್ದಾರೆ. ರಮೇಶ್ ರೈ ಕುಕ್ಕುವಳ್ಳಿ ಗಮನಾರ್ಹ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರನಟಿ ನಿರೀಕ್ಷಾ ಶೆಟ್ಟಿ ಮತ್ತು ಆರ್ಯನ್ ಅವರು ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ. ದಿವ್ಯಾಶ್ರೀ ಹಾಗೂ ಪುಷ್ಪ ಆರ್ ನಟಿಸಿದ್ದಾರೆ  ಎಂದು ಹೇಳಿದರು. 

ಸಂಪೂರ್ಣವಾಗಿ ಕರಾವಳಿಯ ಕಲಾವಿದರು ಹಾಗೂ ತಂತ್ರಜ್ಞರು ಸೇರಿ ನಿರ್ಮಾಣ ಮಾಡಿರುವ ಕನ್ನಡ ಚಿತ್ರ ಇದಾಗಿದೆ. ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಯ ವಸ್ತುಸ್ಥಿತಿ, ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗೆ ಸೇರಿಸಬೇಕೆಂಬ ಹೆತ್ತವರ ಬಯಕೆ, ಅದಕ್ಕಾಗಿ ಅವರು ಪಡುವ ಪಾಡು, ಇದಾವುದರ ಪರಿವೆಯೇ ಇಲ್ಲದ ಮುದ್ದು ಮಕ್ಕಳ ಮುಗ್ಧ ಪ್ರಪಂಚ, ನಗುವಿನ ಲೋಕದಲ್ಲಿ ತೇಲಿಸುವ ಹಾಸ್ಯ ಸನ್ನಿವೇಶಗಳು, ಮನಕಲಕುವ ಸೆಂಟಿಮೆಂಟ್ಸ್, ಗಂಭೀರ ಕಥಾನಕವನ್ನೊಳಗೊಂಡು ಸಮಾಜಕ್ಕೆ ಉತ್ತಮ ಸಂದೇಶ ರವಾನಿಸುವ ಮನರಂಜನೆಯ ಪಾಕವೇ ಪೆನ್ಸಿಲ್ ಬಾಕ್ಸ್ ಎಂದು ಅವರು ತಿಳಿಸಿದರು. 

ಚಿತ್ರದಲ್ಲಿ ಮಕ್ಕಳೇ ಹೆಚ್ಚಾಗಿ ಅಭಿನಯಿಸಿದ್ದರೂ ಇದು ಕೇವಲ ಮಕ್ಕಳ ಚಿತ್ರವಾಗಿರದೆ ಎಲ್ಲಾ ವಯಸ್ಸಿನ,ಎಲ್ಲಾ ವರ್ಗದ ಪ್ರೇಕ್ಷಕರು ನೋಡಬೇಕಾದ ಶುದ್ಧ ಕೌಟುಂಬಿಕ ಚಿತ್ರ ಇದಾಗಿದೆ. ಈ ಚಿತ್ರ ಸೆನ್ಸಾರ್ ಮಂಡಳಿಯ ಮೆಚ್ಚುಗೆಗೂ ಪಾತ್ರವಾಗಿದೆ. ಚಿತ್ರವನ್ನು ಸಂಪೂರ್ಣವಾಗಿ ಕರಾವಳಿ ಭಾಗದಲ್ಲಿ ಚಿತ್ರೀಕರಿಸಲಾಗಿದ್ದು, ಸುಂದರ ಛಾಯಾಗ್ರಹಣ , ಇಂಪಾದ ಸಂಗೀತ , ದೇಶಭಕ್ತಿಗೀತೆ, ಮೆಲೋಡಿ ಸೇರಿದಂತೆ ಮೂರು ಅರ್ಥಪೂರ್ಣವಾದ ಸುಮಧುರ ಹಾಡುಗಳು, ಚಿತ್ರದ ಕೊನೆಯಲ್ಲಿ ಬರುವ ಅದ್ಭುತ ನೃತ್ಯ ವೈಭವ ಚಿತ್ರದ ಆಕರ್ಷಣೆಯಾಗಿದೆ ಎಂದು ಅವರು ತಿಳಿಸಿದರು.  ನ.14 ಮಕ್ಕಳ ದಿನಾಚರಣೆಯಂದು ಟ್ರೈಲರ್ ಬಿಡುಗಡೆಗೊಳ್ಳಲಿದ್ದು, ಅಂದು ಪುತ್ತೂರಿನ ಸುದಾನ ಶಾಲೆ ಬಳಿ ಪ್ರಚಾರ ವಾಹನಕ್ಕೆ  ಚಾಲನೆ ನೀಡಲಾಗುವುದು ಎಂದು ಹೇಳಿದರು. 

ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು ಅವರೇ ಹಾಡಿಗೆ ಸಾಹಿತ್ಯ ಬರೆದಿದ್ದು, ಸರಿಗಮಪ ಖ್ಯಾತಿಯ ಡಾ.ಅಭಿಷೇಕ್ ರಾವ್, ವೈಷ್ಣವಿ ಮಣಿಪಾಲ್, ಕ್ಷಿತಿ ಕೆ ರೈ ಧರ್ಮಸ್ಥಳ, ಕನ್ನಡ ಕೋಗಿಲೆ ಖ್ಯಾತಿಯ ಅಪೇಕ್ಷಾ ಪೈ ಹಾಗೂ ಜನ್ಯ ಪ್ರಸಾದ್ ಅವರು ಹಾಡಿದ್ದಾರೆ. ಚಿತ್ರದ ಕ್ಲೈಮಾಕ್ಸ್‍ನಲ್ಲಿ ಬರುವ ಅದ್ಭುತ ನೃತ್ಯ ವೈಭವ ಚಿತ್ರದ ಹೈಲೆಟ್ ಆಗಲಿದ್ದು, ಮೋಹನ್ ಪಡ್ರೆ ಅವರ ಕ್ಯಾಮರ ಕೈಳಕ, ಡಿಪಿನ್ ದಿವಾಕರ್ ಸಂಕಲನ ಈ ಚಿತ್ರಕ್ಕೆ ಇದೆ. ಜಯಕಾರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ನಿತಿನ್ ಕುಮಾರ್ ಅವರು ಹಿನ್ನಲೆ ಸಂಗೀತ ಒದಗಿಸಿದ್ದಾರೆ.ಎಸ್.ಪಿ.ಸೆಲ್ವಂ, ಸುಜಿತ್ ಎಸ್.ಪಾಟಾಳಿ, ಅಕ್ಷತ್  ವಿಟ್ಲ  ಅವರು ಸಹನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ತಿಳಿಸಿದರು. 

ಅದೃಷ್ಟ ಕೂಪನ್ ಸ್ಕಾಲರ್‍ಶಿಪ್
ಈ ಚಿತ್ರ ತಂಡದಿಂದ ತಲಾ ರೂ.1ಸಾವಿರದಂತೆ 50 ವಿದ್ಯಾರ್ಥಿಗಳಿಗೆ ಅದೃಷ್ಟ ಕೂಪನ್ ಸ್ಕಾಲರ್‍ಶಿಪ್ ನೀಡಲು ತೀರ್ಮಾನಿಸಲಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲಿ ಚಿತ್ರ ವೀಕ್ಷಿಸಲು ಬರುವ ಮಕ್ಕಳಿಗೆ ಕೂಪನ್ ವಿತರಿಸಲಾಗುವುದು. ಅದನ್ನು ಭರ್ತಿ ಮಾಡಿ ಟಿಕೆಟ್‍ನೊಂದಿಗೆ ಅಲ್ಲಿ ಇಡಲಾಗುವ ಪೆಟ್ಟಿಗೆಗೆ ಹಾಕಬೇಕು. ಮೂರು ದಿನಗಳ ಬಳಿಕ ಸಂಗ್ರಹವಾದ ಕೂಪನ್‍ಗಳಲ್ಲಿ 50 ಚೀಟಿಗಳನ್ನು ಎತ್ತಿ ಅದೃಷ್ಟವಂತ 50 ಮಂದಿಗೆ ತಲಾ ರೂ.1ಸಾವಿರದಂತೆ ನೀಡಲಾಗುವುದು ಎಂದು ಅವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಪೆನ್ಸಿಲ್ ಬಾಕ್ಸ್ ಚಿತ್ರದ ನಿದೇಶಕ ರಝಾಕ್ ಪುತ್ತೂರು, ಚಿತ್ರದ ನಾಯಕಿ ದೀಕ್ಷಾ ಡಿ. ರೈ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್ ಕೊಲ್ಯ, ಹಂಚಿಕೆದಾರ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X