ರೊಝಾರಿಯೊದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಮಂಗಳೂರು, ಅ.31: ನಗರದ ರೊಝಾರಿಯೊ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ವೃತ್ತಿಮಾರ್ಗದರ್ಶನ ಶಿಬಿರವು ಬುಧವಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ರೊನಾಲ್ಡ್ ಪಿಂಟೊ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಮುಖ್ಯ ಶಿಕ್ಷಕ ಅಲೋಶಿಯಸ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಜೆಸಿಂತಾ ಮೊರಾಸ್ ಉಪಸ್ಥಿತರಿದ್ದರು. ಶಿಕ್ಷಕಿ ಆಲಿಸ್ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.
Next Story





