Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನೆರಡು ದಿನ ಕರಾವಳಿಯಲ್ಲಿ ‘ಮಹಾ’...

ಇನ್ನೆರಡು ದಿನ ಕರಾವಳಿಯಲ್ಲಿ ‘ಮಹಾ’ ಚಂಡಮಾರುತದ ಭೀತಿ!

ವಾರ್ತಾಭಾರತಿವಾರ್ತಾಭಾರತಿ31 Oct 2019 7:50 PM IST
share
ಇನ್ನೆರಡು ದಿನ ಕರಾವಳಿಯಲ್ಲಿ ‘ಮಹಾ’ ಚಂಡಮಾರುತದ ಭೀತಿ!

ಮಂಗಳೂರು, ಅ.31:ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ಮಹಾ’ ಚಂಡಮಾರುತ ಇನ್ನೂ ಎರಡು ದಿನ (ನ.1,ನ.2)ರವರೆಗೆ ತನ್ನ ಆರ್ಭಟ ತೋರಿಸುವ ಸಾಧ್ಯತೆ ಇದ್ದು, ಕರಾವಳಿ ತೀರದ ಜನತೆಗೆ ಮತ್ತೆ ಭೀತಿ ಶುರುವಾಗಿದೆ.

‘ಮಹಾ’ ಎಂದು ಗುರುತಿಸಲಾದ ಈ ಚಂಡಮಾರುತವು ಉತ್ತರ-ವಾಯವ್ಯದತ್ತ ಮುನ್ನಡೆದು, ಆಗ್ನೇಯ ಅರಬ್ಬಿ ಸಮುದ್ರ ಪ್ರವೇಶಿಸಿ ಲಕ್ಷದ್ವೀಪ ಬಳಿ ವಾಯಭಾರ ಕುಸಿತವಾಗಿ ಪರಿವರ್ತನೆಗೊಂಡಿದೆ. ಅದರ ನೇರ ಪರಿಣಾಮ ಇದೀಗ ಪಶ್ಚಿಮ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಮೇಲೆ ಆಗಿದೆ. ಹಾಗಾಗಿ ಗುರುವಾರ ಮುಂಜಾನೆಯಿಂದ ಮೋಡ ಮುಸುಕಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಭಾರೀ ಮಳೆಯಾಗಿದೆ.
ಕಳೆದೊಂದು ವಾರದಿಂದ ಕರಾವಳಿ ತೀರದಲ್ಲಿ ಗಾಳಿ-ಮಳೆಯೊಂದಿಗೆ ಅಬ್ಬರಿಸಿದ್ದ ‘ಕ್ಯಾರ್’ ಚಂಡಮಾರುತವು ಒಮನ್‌ನತ್ತ ದಿಕ್ಕು ಹಾಯಿಸಿದೆ. ಇದೀಗ ‘ಮಹಾ’ ಕೂಡಾ ಅದೇ ಹಾದಿಯಲ್ಲಿ ಸಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

►ನಾಲ್ಕನೇ ಚಂಡಮಾರುತ: ಅಂದಹಾಗೆ ಈ ಬಾರಿಯ ಮಳೆಗಾಲದಲ್ಲಿ ಕಾಣಿಸಿಕೊಂಡ ನಾಲ್ಕನೇ ಚಂಡಮಾರುತ ಇದಾಗಿದೆ. ಮೊದಲು ಅರಬಿ ಸಮುದ್ರದಲ್ಲಿ ‘ವಾಯು’ ಚಂಡಮಾರುತ ಕಾಣಿಸಿಕೊಂಡರೆ ಬಳಿಕ ‘ಹಿಕ್ಕಾ’ ಕಾಣಿಸಿಕೊಂಡು ಗುಜರಾತ್ ಭಾಗದಲ್ಲಿ ಭಾರಿ ಮಳೆಯಾಗಿ, ಕೊನೆಗೆ ಒಮನ್ ತೀರ ಪ್ರವೇಶಿಸಿತ್ತು. ‘ಕ್ಯಾರ್’ ಮೂರನೇ ಚಂಡಮಾರುತವಾಗಿದೆ. ಇದೀಗ ‘ಮಹಾ’ ಅಪ್ಪಳಿಸಿದೆ. ಸಾಮಾನ್ಯವಾಗಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವುದು ಗಮನಾರ್ಹ.

ಭಾರಿ ಮಳೆ-ಕಡಲು ಪ್ರಕ್ಷುಬ್ಧ: ‘ಮಹಾ’ ಚಂಡಮಾರುತದಿಂದ ಜಿಲ್ಲಾದ್ಯಂತ ಗುರುವಾರ ಭಾರೀ ಮಳೆಯಾಗಿದೆ. ಅರಬಿ ಸಮುದ್ರವು ಗುರುವಾರವೂ ಪ್ರಕ್ಷುಬ್ಧಗೊಂಡಿದೆ. ಸಮುದ್ರದಿಂದ ತೀರಕ್ಕೆ ಭಾರಿ ಅಲೆಗಳು ಅಪ್ಪಳಿಸುತ್ತಿದ್ದು, ಮೀನುಗಾರರು ಕಡಲ ತೀರಕ್ಕೆ ಇಳಿಯದಂತೆ ಮತ್ತು ಕಡಲ ತೀರದ ಜನರು ಎಚ್ಚರದಿಂದ ಇರುವಂತೆ ಕರಾವಳಿ ಕಾವಲು ಪಡೆ ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ರಸ್ತೆ ಬ್ಲಾಕ್: ಒಂದೇ ಒಂದು ಮಳೆಗೆ ಗುಂಡಿಯಿಂದ ಆವೃತಗೊಂಡಿರುವ ಪ್ರಮುಖ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಅದರ ಪರಿಣಾಮ ಸಂಚಾರ ದಟ್ಟಣೆಯ ಮೇಲಾಗುತ್ತಿವೆ. ಗುರುವಾರವೂ ನಗರದ ಹಲವು ಕಡೆ ರಸ್ತೆ ಬ್ಲಾಕ್ ಆಗಿದೆ. ಇದರಿಂದ ವಾಹನ ಸವಾರರು ಸಕಾಲಕ್ಕೆ ಮನೆ, ಅಂಗಡಿ ಮುಂಗಟ್ಟು, ಕಚೇರಿ ಮತ್ತಿತರ ಕಡೆಗೆ ತೆರಳಲು ಹರಸಾಹಸ ಪಡಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X