Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತ ನರಸಿಂಹಮೂರ್ತಿ ಬಂಧನ ಖಂಡಿಸಿ...

ಪತ್ರಕರ್ತ ನರಸಿಂಹಮೂರ್ತಿ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 Oct 2019 10:38 PM IST
share
ಪತ್ರಕರ್ತ ನರಸಿಂಹಮೂರ್ತಿ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ, ಅ.31: ಪ್ರಗತಿಪರ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿ ಗುರುವಾರ ಪ್ರೆಸ್ ಟ್ರಸ್ಟ್ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು. ತತ್‍ಕ್ಷಣವೇ ಪತ್ರಕರ್ತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಅರ್ಪಿಸಿತು.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಕಳೆದ ಹಲವಾರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಪತ್ರಕರ್ತರಾಗಿ, ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಪ್ರಗತಿಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡು, ಜನರ ನೋವಿಗೆ ಸ್ಪಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಪ್ರಸಕ್ತ ನ್ಯಾಯಪಥ ಪತ್ರಿಕೆಯನ್ನು ಹೊರತರುವಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಇವರ ವಿರುದ್ಧ ಸಲ್ಲದ ಆರೋಪಗಳನ್ನು ಹೊರಿಸಿ, ಎರಡು ದಶಕಗಳ ಹಿಂದಿನ ನಾನಾ ಆರೋಪ ಮುಂದಿಟ್ಟುಕೊಂಡು ದಿಢೀರ್ ಆಗಿ ಪೊಲೀಸರು ಬಂಧಿಸಿರುವುದು ಅಕ್ಷಮ್ಯ ಅಪರಾಧ. ಪತ್ರಕರ್ತರ ಮುಕ್ತ ಕಾರ್ಯನಿರ್ವಹಣೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ. ಜನಪರ ಹೋರಾಟದ ಧ್ವನಿ ಹತ್ತಿಕ್ಕುವ ವ್ಯವಸ್ಥಿತ ಹುನ್ನಾರವಾಗಿರುವ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾರಣದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕೂಲಂಕಷ ಪರಿಶೀಲನೆ ನಡೆಸಬೇಕು. ನರಸಿಂಹಮೂರ್ತಿಯವರ ಮೇಲೆ ಹೊರಿಸಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತವಾದ ತನಿಖೆ, ವಿಚಾರಣೆ ನಡೆಸಲು ಪೊಲೀಸ್ ಇಲಾಖೆಗೆ ಸೂಚಿಸಬೇಕು. ತಕ್ಷಣವೇ ಅವರನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಹಿರಿಯ ಪತ್ರಕರ್ತರಾದ ಎನ್.ಮಂಜುನಾಥ್, ಹುಲಿಮನೆ ತಿಮ್ಮಪ್ಪ, ಗೋಪಾಲ್ ಯಡೆಗೆರೆ, ಗಿರೀಶ್ ಉಮ್ರಾಯ್, ಗಜೇಂದ್ರಸ್ವಾಮಿ, ಸೂರ್ಯನಾರಾಯಣ್, ಶೃಂಗೇಶ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X