Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನನ್ನ ಕಪಾಳಕ್ಕೆ ಹೊಡೆದದ್ದು ನಿಜ: ಮಾಜಿ...

ನನ್ನ ಕಪಾಳಕ್ಕೆ ಹೊಡೆದದ್ದು ನಿಜ: ಮಾಜಿ ಶಾಸಕ ಮೊಯ್ದಿನ್ ಬಾವ

ವಾರ್ತಾಭಾರತಿವಾರ್ತಾಭಾರತಿ1 Nov 2019 6:49 PM IST
share
ನನ್ನ ಕಪಾಳಕ್ಕೆ ಹೊಡೆದದ್ದು ನಿಜ: ಮಾಜಿ ಶಾಸಕ ಮೊಯ್ದಿನ್ ಬಾವ

ಮಂಗಳೂರು, ನ. 1: ಮನಪಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಪ್ರಕಟದ ದಿನ ರಾತ್ರಿ ನಡೆದ ಅಹಿತಕರ ಘಟನೆಯ ಸಂದರ್ಭ ನನ್ನ ಕಪಾಳಕ್ಕೆ ಹೊಡೆದದ್ದು ನಿಜ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿರೀಕ್ಷಿತವಾಗಿ ನನಗೆ ಅರಿವಿಲ್ಲದೆ ನಡೆದ ಘಟನೆ ಅದಾಗಿತ್ತು ಎಂದು ಹೇಳಿದರು.

ಈ ಹಿಂದೆ ಎಂದೂ ಇಂತಹ ಘಟನೆ ನಡೆದಿಲ್ಲ. ಈ ರೀತಿಯಲ್ಲಿ ನನ್ನ ಚಾರಿತ್ರಹರಣವೂ ಆಗಿಲ್ಲ. ನಾನು ಟಿಕೆಟ್‌ಗಾಗಿ 10 ಲಕ್ಷ ರೂ. ಪಡೆದಿದ್ದೇನೆಂಬ ಸುಳ್ಳು ಆರೋಪವನ್ನೂ ಮಾಡಲಾಗಿದೆ. ನಾನು ವಿಧಾನಸಭೆಗೆ ಚುನಾವಣೆಗೆ ಸ್ಪರ್ಧಿಸಿದ ವೇಳೆಯಲ್ಲೂ ಯಾರಲ್ಲೂ ಹಣ ದೇಣಿಗೆ ಕೇಳಿಲ್ಲ. ಪಕ್ಷದಿಂದಲೂ ಹಣ ಪಡೆಯದೆ ನಾನೇ ಖರ್ಚು ಮಾಡಿದ್ದೇನೆ. ಇದೀಗ ನಾನು ಟಿಕೆಟ್‌ಗಾಗಿ 10 ರೂ. ಕೂಡಾ ಪಡೆದಿದ್ದರೆ ನಾನು ನೇರವಾಗಿ ಮನೆ ಮುಟ್ಟಲಿಕ್ಕಿಲ್ಲ. ಈಗಷ್ಟೇ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಂದಿದ್ದೇನೆ ಎಂದು ಅವರು ಹೇಳಿದರು.

ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪೆಟ್ಟು ತಿನ್ನುವುದಲ್ಲದೆ ಲಂಚ ಪಡೆದಿದ್ದೇನೆಂಬ ಆರೋಪವನ್ನೂ ಕೇಳಬೇಕಾಗಿರುವುದು ಬೇಸರ ಮೂಡಿಸಿದೆ. ಹಾಗಿದ್ದರೂ ನಾನು ಪ್ರಕರಣದ ಬಗ್ಗೆ ದೂರು ನೀಡಿರಲಿಲ್ಲ. ಆದರೆ ರಾತ್ರಿ ಹೊತ್ತು ಕಿವಿಯಲ್ಲಿ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದೆ. ಆ ಸಂದರ್ಭ ಪೊಲೀಸರು ಬಂದು ಮಾಹಿತಿ ಪಡೆದುಕೊಂಡು ಹೋಗಿದ್ದಾರೆ.  ಹಲ್ಲೆ ಘಟನೆ ನಡೆದ ದಿನದಂದು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರನ್ನು ಯಾವುದೇ ರೀತಿಯಲ್ಲಿ ಹಾನಿ ಮಾಡದಂತೆ ಸಮಾಧಾನ ಮಾಡಿ ಕಳುಹಿಸಿದ್ದೆ. ನಾನು ಗಾಂಧಿ ತತ್ವವನ್ನು ಅನುಸರಿಸುವವ. ಹಾಗಾಗಿ ನಾನು ಯಾವುದೇ ದೂರು ನೀಡಲು ಹೋಗಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.

ಚೊಕ್ಕಬೆಟ್ಟು ಕ್ಷೇತ್ರದಲ್ಲಿ ಮೂರು ಬಾರಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುಲ್ಝಾರ್‌ ಬಾನು ಎರಡು ಬಾರಿ ಗೆದ್ದು, ಮೇಯರ್ ಆಗಿದ್ದರು. ಕಳೆದ ಸಂದರ್ಭ ಮೀಸಲಾತಿಯಡಿ ಸಾಮಾನ್ಯ ಅಭ್ಯರ್ಥಿಗೆ ಅವಕಾಶವಿದ್ದರೂ ಮತ್ತೆ ಅವರಿಗೇ ನೀಡಿದ್ದರಿಂದ ಸೋಲಬೇಕಾಯಿತು. ಆಕಾಂಕ್ಷಿಗಳಿಗೆ ತಮಗೆ ಟಿಕೆಟ್ ಸಿಗಬೇಕೆಂಬ ಆಶಯವಿರುತ್ತದೆ. ಕಾಂಗ್ರೆಸ್ ಪಕ್ಷ ನಿಂತ ನೀರಾಗಬಾರದು. ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ವೀಕ್ಷಕರು ಈ ಬಾರಿಯೂ ಕ್ಷೇತ್ರಲ್ಲಿ ಅಹವಾಲುಗಳನ್ನು ಕೇಳಿದ್ದರು. ಸಾರ್ವಜನಿಕವಾಗಿ ಚೊಕ್ಕಬೆಟ್ಟುವಿನಲ್ಲಿ ನಾನು ವಿವರ ನೀಡಿದ್ದೆ. ಗೆಲ್ಲುವ ಅಭ್ಯರ್ಥಿಯನ್ನು ಈ ಬಾರಿ ಈ ಕ್ಷೇತ್ರದಲ್ಲಿ ಆಯ್ಕೆ ಮಾಡುವುದು ಅನಿವಾರ್ಯವಾಗಿತ್ತು. ಅದರಂತೆ ಮಾಜಿ ಶಾಸಕ ಬಿ ಎ ಉಮರಬ್ಬ ಅವರ ಪುತ್ರಿ ಉನ್ನತ ಶಿಕ್ಷಣ ಪಡೆದವರಾಗಿದ್ದು, ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಅವರು ಹೇಳಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಗುಲ್ಝಾರ್‌ ಬಾನು ನನ್ನ ಜತೆ ದುಡಿದಿದ್ದಾರೆ. ಅವರ ಬಗ್ಗೆ ಅಪಾರ ಗೌರವವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚೊಕ್ಕಬೆಟ್ಟು ಕ್ಷೇತ್ರದಲ್ಲಿ 2800 ಮತಗಳಿಂದ ಲೀಡ್ ಇದ್ದೆ. ಲೋಕಸಭಾ ಚುನಾವಣೆಯಲ್ಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಲೀಡ್ ಪಡೆದಿತ್ತು. ಆದರೆ ಕಳೆದ ಮನಪಾ ಚುನಾವಣೆಯಲ್ಲಿ ಆ ಕ್ಷೇತ್ರದಲ್ಲಿ ಎಸ್‌ಡಿಪಿಐಯ ಅಯಾಝ್ ಜಯಗಳಿಸಿದ್ದರು. ಆ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿದ್ದ ಗುಲ್ಝಾರ್‌ ಬಾನು ಅವರಿಗೆ ಕಳೆದ ಬಾರಿ ಆ ಕ್ಷೇತ್ರ ಸಾಮಾನ್ಯ ಮೀಸಲಾತಿ ಬಂದಿದ್ದರೂ ಟಿಕೆಟ್ ನೀಡಲಾಗಿತ್ತು. ಆದರೆ ಸಾಮಾನ್ಯ ಕ್ಷೇತ್ರದಲ್ಲಿ ಮತ್ತೆ ಮಹಿಳೆಗೆ ನೀಡಿದ ಕಾರಣಕ್ಕೆ ಗುಲ್ಝಾರ್‌ ಬಾನು ಜತೆಗಿದ್ದ ಅಯಾಝ್ ಅಸಮಾಧಾನಗೊಂಡು ಎಸ್‌ಡಿಪಿಐಯಿಂದ ಸ್ಪರ್ಧಿಸಿದ್ದರು. ಹಾಗಾಗಿ ಈ ಬಾರಿ ಆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಹೊಸ ಅಭ್ಯರ್ಥಿ ಸ್ಪರ್ಧೆ ಅನಿವಾರ್ಯ ಎಂದು ಮೊಯ್ದಿನ್ ಬಾವ ಹೇಳಿದರು.

ಮಂಗಳೂರು ಉತ್ತರ ವಿಧಾನಸಭಾ ವ್ಯಾಪ್ತಿಗೆ ಮನಪಾದ 23 ವಾರ್ಡ್‌ಗಳು ಒಳಪಡುತ್ತವೆ. ಕಳೆದ ಅವಧಿಯಲ್ಲಿ ಮನಪಾದ 60 ವಾರ್ಡ್‌ಗಳಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು, ಇದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾರಣ. ವಿಧಾನಸಭೆಯಲ್ಲಿ ಬಿಜೆಪಿ ಕೋಮು ಭಾವನೆಯನ್ನು ಕೆರಳಿಸಿದ್ದರಿಂದ ಪಕ್ಷಕ್ಕೆ ಸೋಲಾಗಿರಬಹುದು. ಈ ಬಾರಿ ಮನಪಾದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸದಾಶಿವ ಶೆಟ್ಟಿ, ಸಾಮಾಜಿಕ ಜಾಲತಾಣದ ಶರಲ್, ನಿತ್ಯಾನಂದ ಹಾಗೂ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X