ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ಇಬ್ಬರ ಸೆರೆ
ಮಂಗಳೂರು, ನ.1: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದಲ್ಲಿ ಮೈಸೂರು ಮೂಲದ ಶಿವಕುಮಾರ್ ಯಾನೆ ಶಿವು (26) ಮತ್ತು ಕುಮಾರ್ ಎಸ್ (23) ಎಂಬವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಗಳಿಂದ 240 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಟಿ.ಕೋದಂಡರಾಮ, ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್ ಪಿ., ಎಸ್ಸೈ ಐ. ಪ್ರದೀಪ್ ಟಿ.ಆರ್ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Next Story





