ಶರೀಫ್ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ: ವರದಿ
ಲಾಹೋರ್, ನ. 1: ಕಾಯಿಲೆಪೀಡಿತರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಝ್ ಶರೀಫ್ರ ಆರೋಗ್ಯ ಸ್ಥಿತಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿದೆ ಹಾಗೂ ಅವರ ರಕ್ತದ ಪ್ಲೇಟ್ಲೆಟ್ ಸಂಖ್ಯೆ ಗುರುವಾರ 40,000ಕ್ಕೆ ಏರಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
69 ವರ್ಷದ ಶರೀಫ್ ಲಾಹೋರ್ನ ಸರ್ವಿಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಐದು ದಿನಗಳಿಂದ ಅವರು ಎದೆ ನೋವಿಗೆ ಒಳಗಾಗಿಲ್ಲ ಎಂದು ವೈದ್ಯರೊಬ್ಬರನ್ನು ಉಲ್ಲೇಖಿಸಿ ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ.
ಪಾಕಿಸ್ತಾನದ ಮೂರು ಬಾರಿಯ ಪ್ರಧಾನಿಯ ರಕ್ತದ ಪ್ಲೇಟ್ಲೆಟ್ಗಳ ಸಂಖ್ಯೆ ಅತಿ ಕಡಿಮೆ 2,000ಕ್ಕೆ ಕುಸಿದಾಗ ಅವರನ್ನು ಜೈಲಿನಿಂದ ಅಕ್ಟೋಬರ್ 21ರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಭ್ರಷ್ಟಾಚಾರ ಪ್ರಕರಣವೊಂದರಲ್ಲಿ 8 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
Next Story