ಸ್ಯಾನ್ ಫ್ರಾನ್ಸಿಸ್ಕೊ: ಹ್ಯಾಲೋವೀನ್ ಪಾರ್ಟಿಯಲ್ಲಿ ಗುಂಡು ಹಾರಾಟ; 4 ಸಾವು
ಲಾಸ್ ಏಂಜಲಿಸ್, ನ. 1: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ನಗರದ ಸಮೀಪ ನಡೆದ ಹ್ಯಾಲೋವೀನ್ ಪಾರ್ಟಿಯಲ್ಲಿ ನಡೆದ ಗುಂಡು ಹಾರಾಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒರಿಂಡ ಎಂಬಲ್ಲಿನ ಮನೆಯೊಂದರಲ್ಲಿ ಗುರುವಾರ ರಾತ್ರಿ ಗುಂಡು ಹಾರಾಟ ನಡೆಯಿತು.
ಲಾಸ್ ಏಂಜಲಿಸ್ನಲ್ಲಿ ಮಂಗಳವಾರ ರಾತ್ರಿ ನಡೆದ ಇನ್ನೊಂದು ಹ್ಯಾಲೋವೀನ್ ಪಾರ್ಟಿಯಲ್ಲಿ ಮೂವರು ಮೃತಪಟ್ಟಿದ್ದರು ಹಾಗೂ 9 ಮಂದಿ ಗಾಯಗೊಂಡಿದ್ದರು.
Next Story