Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ರಾಮೀಣ ಜನರಿಗೆ ಕೌಶಲ್ಯಾಧಾರಿತ ಸ್ವಯಂ...

ಗ್ರಾಮೀಣ ಜನರಿಗೆ ಕೌಶಲ್ಯಾಧಾರಿತ ಸ್ವಯಂ ಉದ್ಯೋಗ ಅಗತ್ಯ: ಕೇಂದ್ರ ಸಚಿವ ಸದಾನಂದ ಗೌಡ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 Nov 2019 11:36 PM IST
share
ಗ್ರಾಮೀಣ ಜನರಿಗೆ ಕೌಶಲ್ಯಾಧಾರಿತ ಸ್ವಯಂ ಉದ್ಯೋಗ ಅಗತ್ಯ: ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು, ನ.1: ಸೂಕ್ತ ತರಬೇತಿ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಕೌಶಲ್ಯಾಧಾರಿತ ಸ್ವಯಂ ಉದ್ಯೋಗ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಸದಾನಂದಗೌಡ ಹೇಳಿದ್ದಾರೆ.

ಶುಕ್ರವಾರ ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಬಡತನ ನಿವಾರಣೆ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಂಸ್ಥೆಗಳೊಂದಿಗೆ ಚರ್ಚೆ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿನ ಜನರು ದಿನವಿಡೀ ದುಡಿಯುತ್ತಿದ್ದಾರೆ. ಆದರೆ, ಅವರಿಗೆ ಭವಿಷ್ಯದ ಬಗ್ಗೆ ಮುಂದಾಲೋಚನೆ ಮಾಡಲಾಗುತ್ತಿಲ್ಲ. ಹೀಗಾಗಿ, ಜನರಿಗೆ ಹೆಚ್ಚು ಹೆಚ್ಚು ಶಿಕ್ಷಣ ನೀಡುವ ಮೂಲಕ ಸ್ವಯಂ ಉದ್ಯೋಗಿಗಳಾಗುವಂತೆ ಪ್ರೋತ್ಸಾಹ ನೀಡಬೇಕಿದೆ ಎಂದು ತಿಳಿಸಿದರು.

ದೇಶಕ್ಕೆ ಮಾದರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹಲವಾರು ಜನಪರ, ಬಡವರ ಪರವಾದ ಯೋಜನೆಗಳನ್ನು ಜಾರಿ ಮಾಡಿದೆ. ಮಹಿಳಾ ಸಬಲೀಕರಣ‌ ವಿಷಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಇದು ಇಡೀ ದೇಶಕ್ಕೆ ಒಂದು ಮಾದರಿಯಾದ ಸಂಸ್ಥೆ ಎಂದು ಸಚಿವರು ಬಣ್ಣಿಸಿದರು.

ಈ ಸಂಸ್ಥೆಯು ಕೇವಲ ಸ್ವಯಂ ಯೋಜನೆಗಳು ಅಲ್ಲದೆ, ಸರಕಾರಿ ಯೋಜನೆಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಪ್ರಧಾನಿಯ ಸ್ವಚ್ಛ ಭಾರತ್ ಯೋಜನೆ ಜತೆ ಕೈ ಜೋಡಿಸಿ ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಸುಮಾರು 10 ಸಾವಿರ ದೇವಾಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಕರೆ ನೀಡಲಾಗಿದೆ. ಇದು ನಿಜಕ್ಕೂ ಅವಿಸ್ಮರಣೀಯ ಎಂದು ಸಚಿವ ಸದಾನಂದಗೌಡ ಹೇಳಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮೂಲ ಉದ್ದೇಶ ಸಾಧಿಸುವಲ್ಲಿ ಸಫಲವಾಗಿದೆ. ಇಲ್ಲಿ ನಂಬಿಕೆ ಅಷ್ಟೇ ಅಲ್ಲದೆ, ಲೌಕಿಕ ಬದುಕಿಗೆ ಬೇಕಾದ ಸಹಕಾರವನ್ನೂ ಕಲ್ಪಿಸಿ ಕೊಡುವ ಯೋಜನೆಗಳೂ ಇವೆ. ಸಾಲದ ಸದ್ಬಳಕೆ ಮಾಡಿದರೆ ಅಪಾಯವಿಲ್ಲ. ಸಾಲ ಶೂಲವಾಗದೆ ಬಂಡವಾಳವಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಇದೇ ಸಂಸ್ಥೆಯ ಮೂಲಕ ಮದ್ಯದ ನಶೆ ಕುಟುಂಬಗಳನ್ನು ನಾಶ ಮಾಡುತ್ತಿದೆ. ಆರಂಭದಲ್ಲಿ ಶೋಕಿಗಾಗಿ ವ್ಯಸನ ಅಂಟಿಸಿಕೊಳ್ಳುವವರು ನಂತರ ಮನೆ-ಮಠಗಳನ್ನು ಮಾರಿ ಬೀದಿಗೆ ಬರುತ್ತಾರೆ. ಇದರ ಬಗ್ಗೆ ಎಚ್ಚರ ವಹಿಸಿ ಮದ್ಯ ವ್ಯಸನದಿಂದ ದೂರ ಇರಬೇಕು ಎಂದು ಜಾಗೃತಿ ಮೂಡಿಸುವ ಅಭಿಯಾನ ನಡೆಸಿದೆವು. ಅದು ಹಲವು ಕುಟುಂಬಗಳನ್ನು ಸಬಲರನ್ನಾಗಿ ಮಾಡಿದೆ ಎಂದರು.

ನಮ್ಮ ಸಂಸ್ಥೆಯ ಕಾರ್ಯಕರ್ತರು ತಳಮಟ್ಟದಿಂದ ಕೆಲಸ ಮಾಡುತ್ತಿದ್ದಾರೆ. ಜನರೊಂದಿಗೆ ನಿಂತು, ಜನರ ಸಮಸ್ಯೆ ಅರಿತು, ಅಲ್ಲೇ ಪರಿಹಾರ ಮಾಡುವ ಮೂಲಕ ಎಲ್ಲರನ್ನೂ ಒಳಗೊಳ್ಳುವ ಕೆಲಸ ಮಾಡುತ್ತಿದ್ದಾರೆ. ಆರಂಭದಲ್ಲಿ ಕೇವಲ ಸಕಾರಾತ್ಮಕ ವರದಿ ನೀಡುತ್ತಿದ್ದರು. ನಾನು ಯಾಕೆ ಎಲ್ಲಿಯೂ ಸಮಸ್ಯೆಯೇ ಇಲ್ಲವಾ ಎಂದಾಗ ಅವರು ಹೆಚ್ಚು ಜನರೊಂದಿಗೆ ಬೆರೆತು ಕೆಲಸ ಮಾಡುತ್ತಿದ್ದಾರೆ ಎಂದು ವೀರೇಂದ್ರ ಹೆಗಡೆ ನುಡಿದರು.

ಕಾರ್ಯಕ್ರಮದಲ್ಲಿ ಫೈನಾನ್ಸ್ ಇಂಟಿವೇಟೀವ್ಸ್ ನ ಪ್ರಾದೇಶಿಕ ಕಾರ್ಯದರ್ಶಿ ಡಿ.ಎಸ್.ಕೆ.ರಾವ್, ಕೇಂದ್ರ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅಮರ್ ಜಿತ್ ಸಿನ್ಹಾ, ಅಲೋಸಿಸಿ ಡಿಸೋಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪಂಚಾಯತ್ ಮಟ್ಟದಿಂದಲೂ ಮಹಿಳಾ ಸ್ವ ಸಹಾಯ ಸಂಘಗಳನ್ನು ತಲುಪಲು ಸಾಧ್ಯವಾಗಿದೆ. ಕೇಂದ್ರ ಸರಕಾರದ ಜನಧನ್, ಉಜ್ವಲ, ಸ್ವಚ್ಛ ಭಾರತ್ ಹಾಗೂ ಮಹಾತ್ಮಗಾಂಧೀ ನರೇಗಾ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಸ್ವ ಸಹಾಯ ಗುಂಪುಗಳ ಮೂಲಕ ಯಶಸ್ವಿಗೊಳಿಸುವ ಕಡೆಗೆ ಸಹಕಾರಿಯಾಗಿದೆ. ಕಳೆದ ಐದೂವರೆ ವರ್ಷಗಳ ಅವಧಿಯಲ್ಲಿ ಇಡೀ ದೇಶದಾದ್ಯಂತ ಸರಿಸುಮಾರು ಎರಡೂವರೆ ಸಾವಿರ ಕೋಟಿಗೂ ಅಧಿಕ ಹಣವನ್ನು ಸಂಘಗಳಿಗೆ ಸಾಲದ ರೂಪದ ಮೂಲಕ ನೀಡಲಾಗಿದೆ. ಸರಕಾರಗಳು ಇದೇ ರೀತಿ ಹೆಚ್ಚಿನ ಸಹಕಾರ ನೀಡುತ್ತಿದ್ದರೆ ಮುಂದೊಂದು ದಿನ ಭಿನ್ನವಾದ ಸಮಾಜ ನೋಡಬಹುದು.
- ಅಮರ್ ಜಿತ್ ಸಿನ್ಹಾ, ಕೇಂದ್ರ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X