Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ...

ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕನ್ನಡಪರ ಸಂಘಟನೆಗಳ ಒಕ್ಕೂಟ ಆಗ್ರಹ

"ಸಚಿವರ ಕನ್ನಡ ವಿರೋಧಿ ನಡೆ ಖಂಡಿಸಿ ನ.6ಕ್ಕೆ ಪ್ರತಿಭಟನೆ"

ವಾರ್ತಾಭಾರತಿವಾರ್ತಾಭಾರತಿ2 Nov 2019 4:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕನ್ನಡಪರ ಸಂಘಟನೆಗಳ ಒಕ್ಕೂಟ ಆಗ್ರಹ

ಚಿಕ್ಕಮಗಳೂರು, ನ.2: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕನ್ನಡ ಧ್ವಜಾರೋಹಣ ಮಾಡದೇ ಉದ್ಧಟತನ ಪ್ರದರ್ಶಿಸಿದ್ದಾರೆ. ಈ ಮೂಲಕ ಅವರು ನಾಡು ನುಡಿಗೆ ದ್ರೋಹ ಬಗೆದಿದ್ದಾರೆ. ಇಂತಹ ಮನಸ್ಥಿತಿಯವರು ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವರಾಗಿರಲು ಯಾವುದೇ ಅರ್ಹತೆ ಇಲ್ಲವಾಗಿದ್ದು, ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡ ಹಾಗೂ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಆಗ್ರಹಿಸಿದ್ದಾರೆ.

ಶನಿವಾರ ನಗರದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರಕಾರದ ವತಿಯಿಂದ ಆಚರಿಸಲಾದ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ಧ್ವಜಾರೋಹಣ ಮಾಡಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಬೆಂಗಳೂರಿನಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ್ದಾರೆ. ಆದರೆ ಚಿಕ್ಕಮಗಳೂರಿನವರೇ ಆಗಿರುವ ಸಿ.ಟಿ.ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವನಾಗಿದ್ದರೂ ಕನ್ನಡ ಧ್ವಜಾರೋಹಣ ಮಾಡದೇ ಕನ್ನಡ ನಾಡು, ನುಡಿಗೆ ಅವಮಾನ ಮಾಡಿದ್ದಾರೆ. ಕನ್ನಡದ ಬಗ್ಗೆ ಎಳ್ಳಷ್ಟು ಅಭಿಮಾನ, ಪ್ರೀತಿ, ಗೌರವ ಇಲ್ಲದವರು, ಕನ್ನಡದ ಸಂಸ್ಕೃತಿ ಇಲ್ಲದವರು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವನಾಗರಲು ಯಾವುದೇ ಅರ್ಹತೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸಿ.ಟಿ.ರವಿ ಅವರು ಹೋದಲ್ಲೆಲ್ಲಾ ಏಕಭಾಷೆ, ಏಕ ಸಂಸ್ಕೃತಿ ಎಂಬ ಆಮದು ವಿಚಾರಗಳನ್ನು ಮುನ್ನಲೆಗೆ ತರುವ ಸಂಚು ರೂಪಿಸುತ್ತಿದ್ದಾರೆ. ಈ ಮೂಲಕ ಅವರು ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ ರಾಜೇಗೌಡ, ಭಾರತ ದೇಶ ಬಹುಭಾಷೆ, ಬಹುಸಂಸ್ಕೃತಿಯ ಗಣತಂತ್ರ ವ್ಯವಸ್ಥೆಯನ್ನು ಒಪ್ಪಿಕೊಂಡು ಅದರಂತೆ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಡಿರುವ ದೇಶವಾಗಿದೆ. ಇದನ್ನು ಸಚಿವ ಸಿ.ಟಿ.ರವಿ ಮರೆತಿದ್ದು, ಈ ಮೂಲಕ ಸಚಿವರಿಗೆ ನೆನಪು ಮಾಡುತ್ತಿದ್ದೇವೆ. ದೇಶದಲ್ಲಿ ಏಕಭಾಷೆ ಎಂಬುದು ಯಾವುದೂ ಇಲ್ಲ. ಏಕಭಾಷೆ, ಏಕ ಸಂಸ್ಕೃತಿಯನ್ನು ಕನ್ನಡಿಗರಾದಿಯಾಗಿ ಯಾರೂ ಒಪ್ಪಲೂ ಸಿದ್ಧರಿಲ್ಲ ಎಂಬುದನ್ನು ಸಚಿವ ರವಿ ಅರಿತುಕೊಳ್ಳಬೇಕು ಎಂದು ಅವರು ಹೇಳಿದರು. 

ಕನ್ನಡಿಗರ ಹಬ್ಬವಾಗಿರುವ ರಾಜ್ಯೋತ್ಸವ ಸಮಾರಂಭ ಸಾವಿರಾರು ಕನ್ನಡ ಪ್ರೇಮಿಗಳ, ಸಾಹಿತಿಗಳ, ಹೋರಾಟಗಾರರ ತ್ಯಾಗದ ಫಲವಾಗಿದೆ. ಇಂತಹ ಐತಿಹಾಸಿಕ ಹಿನ್ನೆಲೆ ಇರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನ್ನಡ ಬಾವುಟ ಹಾರಿಸುವುದಕ್ಕೆ ರಾಜ್ಯ ಸರಕಾರ ಕಡಿವಾಣ ಹಾಕಿದೆ. ಈ ಮೂಲಕ ಪರೋಕ್ಷವಾಗಿ ಏಕಭಾಷೆ, ಏಕಸಂಸ್ಕೃತಿಯನ್ನು ಕನ್ನಡಿಗರ ಮೇಲೆ ಹೇರಲು ತೆರೆಮರೆಯಲ್ಲಿ ಹುನ್ನಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ನಾಡ ಧ್ವಜಕ್ಕೆ ಅಪಮಾನ ಮಾಡುವವರು ಯಾರೇ ಆಗಿದ್ದರೂ ಸರಿ ಅವರಿಗೆ ಕನ್ನಡಾಭಿಮಾನಿಗಳು ತಕ್ಕ ಬುದ್ಧಿ ಕಲಿಸಲಿದ್ದಾರೆ. ಸಿಎಂ ನಾಡ ಧ್ವಜಾರೋಹಣ ಮಾಡಿ, ಅವರ ಸಚಿವ ಸಂಪುಟದ ಇತರ ಸಚಿವರು ನಾಡ ಧ್ವಜಾರೋಹಣ ಮಾಡದೇ ನಿರ್ಲಕ್ಷ್ಯ ವಹಿಸಿರುವುದನ್ನು ಗಮನಿಸಿದರೆ ಬಿಜೆಪಿ ಮುಖಂಡರಲ್ಲಿ, ಸಚಿವ ಸಂಪುಟದ ಸದಸ್ಯರಲ್ಲಿ ಗೊಂದಲ ಇರುವಂತಿದ್ದು, ಕನ್ನಡ ಭಾಷೆ, ಧ್ವಜ, ಸಂಸ್ಕೃತಿ ಮೇಲೆ ದಬ್ಬಾಳಿಕೆ ಮಾಡುವವರನ್ನು ಸಹಿಸಿಕೊಳ್ಳುವುದಿಲ್ಲ, ಕ್ಷಮಿಸುವುದೂ ಇಲ್ಲ. ಕನ್ನಡ ರಾಜ್ಯೋತ್ಸವ ದಿನದಂದು ನಾಡಧ್ವಜ ಹಾರಿಸದ ನಾಡದ್ರೋಹಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದರು. 

ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಸಂಬಂಧಿಸಿದ ಎಲ್ಲ ಸಂಭ್ರಮಾಚರಣೆ, ಉತ್ಸವಗಳಲ್ಲಿ ಕನ್ನಡ ಧ್ವಜ ರಾರಾಜಿಸಬೇಕು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳಲ್ಲೂ ರಾಷ್ಟ್ರ ದ್ವಜದೊಂದಿಗೆ, ನಾಡ ಧ್ವಜಾರೋಹಣವೂ ನಡೆಯಬೇಕು. ಈ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಸಚಿವ ಸಿ.ಟಿ.ರವಿ ಅವರ ಕನ್ನಡ ವಿರೋಧಿ ನಿಲುವು, ಮಾತು, ನಡವಳಿಕೆಯಿಂದಾಗಿ ಅವರು ಕನ್ನಡಿಗ ಹೌದೋ, ಅಲ್ಲವೋ ಎಂಬ ಅನುಮಾನ ಕಾಡುತ್ತಿದೆ. ಅವರ ಕನ್ನಡ ವಿರೋಧಿ ನಡೆಯನ್ನು ಖಂಡಿಸಿ ನ.6ರಂದು ನಗರದ ಆಝಾದ್ ಪಾರ್ಕ್ ನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು, ಕನ್ನಡಾಭಿಮಾನಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜೇಗೌಡ ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನವ ಕರ್ನಾಟಕ ಯುವಶಕ್ತಿ ಸಂಘದ ರಘು, ಕರವೇ ಸಂಘಟನೆಯ ಮನೋಜ್ ಶೆಟ್ಟಿ, ಕಸ್ತೂರಿ ಕರ್ನಾಟಕದ ನಿಂಗೇಗೌಡ, ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳ ಮುಂದಿರುವ ನಾಮಫಲಕಗಳು ಕನ್ನಡದಲ್ಲೇ ಇರಬೇಕೆಂದು ಈ ಹಿಂದೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿತ್ತು. ಆದರೆ ಜಿಲ್ಲಾದ್ಯಂತ ಇರುವ ಬಹುತೇಕ ಅಂಗಡಿ ಮುಂಗಟ್ಟುಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಇಂಗ್ಲೀಷ್‌ನಲ್ಲೇ ನಾಮಫಲಕಗಳನ್ನು ಹಾಕಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಾರಿ ಜಿಲ್ಲಾಡಳಿತ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮ ನೀರಸವಾಗಿತ್ತು. ಕನ್ನಡದ ಹಬ್ಬದ ಬಗ್ಗೆ ಸರಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ.
- ಪಿ.ಸಿ.ರಾಜೇಗೌಡ, ಜಿಲ್ಲಾಧ್ಯಕ್ಷ, ಕನ್ನಡಸೇನೆ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X