ಎರಡನೇ ಟ್ವೆಂಟಿ-20: ಇಂಗ್ಲೆಂಡ್ ವಿರುದ್ಧ ನ್ಯೂಝಿಲ್ಯಾಂಡ್‌ಗೆ ರೋಚಕ ಜಯ
ಮಿಂಚಿದ ಮಿಚೆಲ್ ಸ್ಯಾಂಟ್ನರ್ ಪಂದ್ಯಶ್ರೇಷ್ಠ

ವೆಲ್ಲಿಂಗ್ಟನ್, ನ.3: ಆಲ್‌ರೌಂಡ್ ಪ್ರದರ್ಶನ ನೀಡಿದ ಆತಿಥೇಯ ನ್ಯೂಝಿಲ್ಯಾಂಡ್ ತಂಡ ಇಂಗ್ಲೆಂಡ್ ವಿರುದ್ಧ ರವಿವಾರ ನಡೆದ ಎರಡನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನು 21 ರನ್‌ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕಿವೀಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 176 ರನ್ ಗಳಿಸಿತು. ಆರಂಭಿಕ ಬ್ಯಾಟ್ಸ್‌ಮನ್ ಗಪ್ಟಿಲ್(41) ಹಾಗೂ ಆಲ್‌ರೌಂಡರ್ ನೀಶಾಮ್(42)ಕಿವೀಸ್ ಸ್ಪರ್ಧಾತ್ಮಕ ಮೊತ್ತ ಗಳಿಸಲು ನರೆವಾದರು.
ಗೆಲ್ಲಲು 177 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್(3-25)ನೇತೃತ್ವದ ಬೌಲರ್‌ಗಳ ದಾಳಿಗೆ ತತ್ತರಿಸಿ 19.5 ಓವರ್‌ಗಳಲ್ಲಿ 155 ರನ್‌ಗಳಿಗೆ ಸರ್ವಪತನವಾಗಿದೆ.
ಇಂಗ್ಲೆಂಡ್‌ನ ಪರ ಆರಂಭಿಕ ಆಟಗಾರ ಡೇವಿಡ್ ಮಲಾನ್(39), ಜೋರ್ಡನ್(36) ಹಾಗೂ ನಾಯಕ ಇಯಾನ್ ಮೊರ್ಗನ್(32) ಎರಡಂಕೆಯ ಸ್ಕೋರ್ ಗಳಿಸಿದರು. ಇನ್ನೋರ್ವ ಆರಂಭಿಕ ಬ್ಯಾಟ್ಸ್‌ಮನ್ ಬೈರ್‌ಸ್ಟೋವ್(0)ಶೂನ್ಯಕ್ಕೆ ಔಟಾದರು. ಕಿವೀಸ್ ಪರ ಸ್ಯಾಂಟ್ನರ್ ಯಶಸ್ವಿ ಬೌಲರ್ ಎನಿಸಿಕೊಂಡರು. ಹಂಗಾಮಿ ನಾಯಕ ಟಿಮ್ ಸೌಥಿ(2-25), ಫರ್ಗ್ಯುಸನ್(2-34) ಹಾಗೂ ಸೋಧಿ(2-37)ತಲಾ ಎರಡು ವಿಕೆಟ್‌ಗಳನ್ನು ಪಡೆದರು.
4 ಓವರ್‌ಗಳಲ್ಲಿ 25 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದ ಸ್ಯಾಂಟ್ನರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.







