Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ರಾ.ಪಂ.ಪೌರಕಾರ್ಮಿಕರ ಸಂಬಳ ನೇರವಾಗಿ...

ಗ್ರಾ.ಪಂ.ಪೌರಕಾರ್ಮಿಕರ ಸಂಬಳ ನೇರವಾಗಿ ಖಾತೆಗೆ ಜಮೆ: ಉಮಾ ಮಹಾದೇವನ್

ಐಪಿಡಿ ಸಾಲಪ್ಪ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ3 Nov 2019 10:47 PM IST
share
ಗ್ರಾ.ಪಂ.ಪೌರಕಾರ್ಮಿಕರ ಸಂಬಳ ನೇರವಾಗಿ ಖಾತೆಗೆ ಜಮೆ: ಉಮಾ ಮಹಾದೇವನ್

ಬೆಂಗಳೂರು, ನ.3: ಗ್ರಾ.ಪಂ.ಗಳಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು, ಬಿಲ್ ಕಲೆಕ್ಟರ್ ಸೇರಿದಂತೆ ಕೆಳಹಂತದ ಸಿಬ್ಬಂದಿಗಳ ಸಂಬಳವನ್ನು ಆನ್‌ಲೈನ್ ಮೂಲಕ ನೇರವಾಗಿ ಅವರ ಖಾತೆಗೆ ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಿದ್ದೇವೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ತಿಳಿಸಿದ್ದಾರೆ.

ರವಿವಾರ ಕರ್ನಾಟಕ ರಾಜ್ಯ ಪಂಚಾಯತ್ ನೌಕರರ ಸಂಘ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಐಪಿಡಿ ಸಾಲಪ್ಪನವರ ವರದಿಯ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಕಸಗುಡಿಸುವವರ ಹಾಗೂ ಸ್ವಚ್ಚತಾಗಾರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ಗಳಲ್ಲಿ ಕೆಳ ಹಂತದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಪ್ರತಿ ತಿಂಗಳು ಸಂಬಳ ನೀಡುತ್ತಿಲ್ಲವೆಂಬ ದೂರುಗಳು ಬಂದಿವೆ. ಹೀಗಾಗಿ ಆನ್‌ಲೈನ್ ಮೂಲಕವೇ ಸಿಬ್ಬಂದಿಗಳಿಗೆ ನಿಗಧಿತ ಸಮಯದಲ್ಲಿ ಅವರ ಬ್ಯಾಂಕ್ ಖಾತೆಗಳಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲವೆಂದು ಅವರು ಭರವಸೆ ನೀಡಿದರು.

ಪಂಚಾಯತ್ ಸಿಬ್ಬಂದಿಗಳೇ ಪಂಚಾಯತ್ ಇಲಾಖೆಯ ಆಧಾರ ಸ್ಥಂಭಗಳು. ಇವರ ಸಮಸ್ಯೆಗಳನ್ನು ಬಗೆ ಹರಿಸುವುದು ಇಲಾಖೆ ಅಧಿಕಾರಿಗಳ ಕರ್ತವ್ಯವಾಗಿದೆ. ಹೀಗಾಗಿ ಒಂದೊಂದೇ ಸಮಸ್ಯೆಗಳನ್ನು ಹಂತ, ಹಂತವಾಗಿ ಬಗೆ ಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪಂಚಾಯತ್‌ರಾಜ್ ಇಲಾಖೆಯ ಸಲಹೆಗಾರ ಎಂ.ಕೆ.ಕೆಂಪೇಗೌಡ ಮಾತನಾಡಿ, ಪಂಚಾಯತ್ ಸಿಬ್ಬಂದಿಗಳ ಸಮಸ್ಯೆಗಳನ್ನು ಇಲಾಖೆಯ ಆದ್ಯತೆಯ ಮೇರೆಗೆ ಪರಿಗಣಿಸಿದ್ದು, ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಗ್ರಾ.ಪಂ. ನೌಕರರ ಸಂಘದ ಜೊತೆಗೂಡಿ ಬಗೆಹರಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದೇನೆ. ಹಲವು ಸಮಸ್ಯೆಗಳನ್ನು ಈಗಾಗಲೇ ಬಗೆಹರಿಸುವ ಹಂತಕ್ಕೆ ಮುಟ್ಟಿದ್ದೇವೆಂದು ತಿಳಿಸಿದರು.

ಗ್ರಾ.ಪಂ.ನೌಕರರನ್ನು ಖಾಯಂಗೊಳಿಸುವುದು, ವೇತನ ಹೆಚ್ಚಳ, ನಿವೃತ್ತಿ ವೇತನ, ಆರೋಗ್ಯವಿಮೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಜಾರಿಗೆ ತಂದಿದ್ದೇವೆ. ಆದರೆ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ವಿಳಂಬವಾಗುತ್ತಿದೆ. ಇದನ್ನು ಹಂತ, ಹಂತವಾಗಿ ಶೀಘ್ರವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ಗ್ರಾ.ಪಂ.ಗಳಲ್ಲಿ ಕಸ ಗುಡಿಸುವವರು, ಚರಂಡಿ ಸ್ವಚ್ಚ ಮಾಡುವವರು ಹಲವು ದಶಕಗಳಿಂದ ಕೇವಲ 50, 100ರೂ.ಗೆ ಕೆಲಸ ಮಾಡಿದ್ದಾರೆ. ನಿರಂತರವಾದ ಹೋರಾಟದ ಫಲವಾಗಿ ವೇತನ ಹೆಚ್ಚಳವಾಗಿದೆ. ಆದರೆ, ಪಂಚಾಯತ್ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸ್ವಾರ್ಥದಿಂದಾಗಿ ಸಂಬಳಗಳು ಸರಿಯಾಗಿ ಆಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಐಪಿಡಿ ಸಾಲಪ್ಪ ವರದಿ ಪ್ರಕಾರ 500ಮಂದಿಗೆ ಒಬ್ಬ ಪೌರಕಾರ್ಮಿಕ ಇರಬೇಕೆಂದು ಇದೆ. ಆದರೆ, ಈಗ ಐದು ಸಾವಿರಕ್ಕೆ ಒಬ್ಬರ ಸಿಬ್ಬಂದಿಗಳನ್ನು ಮಾತ್ರ ನೇಮಿಸುವಂತಹ ನಿಯಮವಿದೆ. ಇದು ಕೂಡಲೇ ಬದಲಾಗಬೇಕು. ಹಾಗೂ ಗ್ರಾಮಪಂಚಾಯತ್ ಪೌರ ಕಾರ್ಮಿಕರಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್‌ರಾಜ್ ಇಲಾಖೆಯ ನಿರ್ದೇಶಕ ಅಶ್ರಫ್ ಉಲ್ ಹಸನ್, ದಲಿತ ಹಕ್ಕುಗಳ ಸಮಿತಿಯ ಸಂಚಾಲಕ ಗೋಪಾಲಕೃಷ್ಣ ಅರಳಹಳ್ಳಿ, ಗ್ರಾಮ ಪಂಚಾಯತ್ ನೌಕರರ ಸಂಘದ ಕಾರ್ಯದರ್ಶಿ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X