Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಡಿತರ ಪೂರೈಕೆ ನಿಲ್ಲಿಸಿದ ಕೇಂದ್ರ...

ಪಡಿತರ ಪೂರೈಕೆ ನಿಲ್ಲಿಸಿದ ಕೇಂದ್ರ ಸರಕಾರ: ತ್ರಿಪುರಾದ ಬ್ರು ಶಿಬಿರದಲ್ಲಿ ಹಸಿವೆಗೆ ಆರು ಬಲಿ

ವಾರ್ತಾಭಾರತಿವಾರ್ತಾಭಾರತಿ4 Nov 2019 8:21 PM IST
share
ಪಡಿತರ ಪೂರೈಕೆ ನಿಲ್ಲಿಸಿದ ಕೇಂದ್ರ ಸರಕಾರ: ತ್ರಿಪುರಾದ ಬ್ರು ಶಿಬಿರದಲ್ಲಿ ಹಸಿವೆಗೆ ಆರು ಬಲಿ

ಅಗರ್ತಲಾ,ನ.4: ಉತ್ತರ ತ್ರಿಪುರಾ ಜಿಲ್ಲೆಯಲ್ಲಿನ ಹಂಸಪಾರಾ ಬ್ರು ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಬೆಳಗ್ಗೆ ನಾಲ್ಕು ತಿಂಗಳ ಮಗುವೊಂದು ಸಾವನ್ನಪ್ಪಿದ್ದು,ಹಸಿವು ಇದಕ್ಕೆ ಕಾರಣವೆನ್ನಲಾಗಿದೆ. ಇದರೊಂದಿಗೆ ಗೃಹ ವ್ಯವಹಾರಗಳ ಸಚಿವಾಲಯದ ನಿರ್ದೇಶದಂತೆ ಆಡಳಿತವು ಹಂಗಾಮಿ ಶಿಬಿರಗಳಿಗೆ ಪಡಿತರ ಪೂರೈಕೆಯನ್ನು ನಿಲ್ಲಿಸಿದ ಬಳಿಕ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೇರಿದೆ. ನೈಸಿಂಗಪಾರಾ ಶಿಬಿರದಲ್ಲಿ ಗುರುವಾರ ಇಬ್ಬರು ಮತ್ತು ರವಿವಾರ ಮೂವರು ಮೃತಪಟ್ಟಿದ್ದರು.

ತನ್ಮಧ್ಯೆ ತಮಗೆ ಪಡಿತರ ಪೂರೈಕೆ ಮತ್ತು ನಗದು ನೀಡಿಕೆಯನ್ನು ನಿಲ್ಲಿಸಿರುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆಯ ಅಂಗವಾಗಿ ನಿರಾಶ್ರಿತರು ಅ.1ರಂದು ಉತ್ತರ ತಿಪುರಾದ ದಾಸ್ಡಾ ಮತ್ತು ಆನಂದನಗರ ಮಧ್ಯೆ ನಡೆಸುತ್ತಿರುವ ರಸ್ತೆ ತಡೆ ಸೋಮವಾರವೂ ಮುಂದುವರಿದಿದೆ.

ಈ ವರ್ಷದ ಅಂತ್ಯದೊಳಗೆ ಎಲ್ಲ ಬ್ರು ನಿರಾಶ್ರಿತರನ್ನು ಮಿಜೋರಮ್‌ಗೆ ವಾಪಸ್ ಕಳುಹಿಸಲು ತ್ರಿಪುರಾ ಸರಕಾರವು ಉದ್ದೇಶಿಸಿದ್ದು,ವಾಪಸಾತಿಯ ಒಂಭತ್ತನೇ ಹಂತ ಅ.3ರಿಂದ ಆರಂಭಗೊಂಡಿದೆ.

ತಮ್ಮ ಬೇಡಿಕೆಗಳು ಈಡೇರುವವರೆಗೆ ರಸ್ತೆ ತಡೆಯು ಮುಂದುವರಿಯಲಿದೆ ಎಂದು ಹೇಳಿದ ಮಿಜೋರಂ ಬ್ರು ನಿರಾಶ್ರಿತರ ವೇದಿಕೆಯ ಉಪಾಧ್ಯಕ್ಷ ಆರ್.ಡಾಂಗ್ಲಿಯಾನಾ ಅವರು,ಪಡಿತರ ಮತ್ತು ನಗದು ನೀಡಿಕೆಯನ್ನು ಅ.30ರಿಂದ ಸ್ಥಗಿತಗೊಳಿಸಲಾಗಿದೆ ಮತ್ತು ಅ.3ರಂದು ಆರಂಭಗೊಂಡಿರುವ ವಾಪಸಾತಿ ಪ್ರಕ್ರಿಯೆಯು ನ.30ರಂದು ಅಂತ್ಯಗೊಳ್ಳಲಿದೆ. ಅಲ್ಲಿಯವರೆಗೆ ನಾವು ಬದುಕುಳಿಯುವುದು ಹೇಗೆ ಎಂದು ಪ್ರಶ್ನಿಸಿದರು.

ಶೇ.80ರಷ್ಟು ಕುಟುಂಬಗಳು ಉಪವಾಸ ಬಿದ್ದಿವೆ ಎಂದ ಅವರು ಕಳೆದ ವಾರದಿಂದ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗುವ ಬಗ್ಗೆ ಎಚ್ಚರಿಕೆ ನೀಡಿದರು.

ಪ್ರತಿ ನಿರಾಶ್ರಿತ ವ್ಯಕ್ತಿಗೆ ಪ್ರತಿದಿನ 600 ಗ್ರಾಂ ಅಕ್ಕಿಯನ್ನು ನೀಡಲಾಗುತ್ತಿತ್ತು ಮತ್ತು ಈ ಪೈಕಿ ಅರ್ಧದಷ್ಟು ಮಕ್ಕಳಿಗೇ ಖರ್ಚಾಗುತ್ತಿತ್ತು. ಪ್ರತಿ ದಿನ ವಯಸ್ಕರಿಗೆ ತಲಾ 5 ರೂ. ಮತ್ತು ಮಕ್ಕಳಿಗೆ 2.50 ರೂ.ನೀಡಲಾಗುತ್ತಿತ್ತು. ನಮಗೆ ಬೇರೆ ಯಾವುದೇ ಹೆಚ್ಚುವರಿ ಆದಾಯವಿಲ್ಲ ಮತ್ತು ಇದೇ ಕಾರಣದಿಂದ ಇಂದು ಹೆಚ್ಚಿನವರು ಹಸಿವೆಯಿಂದ ನರಳುತ್ತಿದ್ದಾರೆ ಎಂದರು. ಅ.3ರಿಂದೀಚಿಗೆ 216 ಬ್ರು ಕುಟುಂಬಗಳು ಮಿಜೋರಮ್‌ಗೆ ಮರಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1997ರಲ್ಲಿ ಮಿಜೋರಮ್‌ನಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ ಜೀವವುಳಿಸಿಕೊಳ್ಳಲು ಅಲ್ಲಿಂದ ಪರಾರಿಯಾಗಿದ್ದ 32,000ಕ್ಕೂ ಅಧಿಕ ಬ್ರು ನಿರಾಶ್ರಿತರು ತ್ರಿಪುರಾದಲ್ಲಿಯ ಆರು ಪರಿಹಾರ ಶಿಬಿರಗಳಲ್ಲಿ ವಾಸವಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X