Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ. 6ರಿಂದ 8: ಸಮಗ್ರ ಮಹಾಭಾರತ ಸಮರ್ಪಣ...

ನ. 6ರಿಂದ 8: ಸಮಗ್ರ ಮಹಾಭಾರತ ಸಮರ್ಪಣ ಉತ್ಸವ

ವಾರ್ತಾಭಾರತಿವಾರ್ತಾಭಾರತಿ4 Nov 2019 9:23 PM IST
share

ಉಡುಪಿ, ನ.4: ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ತತ್ವ ಸಂಶೋಧನ ಸಂಸತ್ತಿನ ನೇತೃತ್ವದಲ್ಲಿ ಸಮಗ್ರ ಮಹಾಭಾರತ ಸಮರ್ಪಣ ಉತ್ಸವ ಹಾಗೂ ಶ್ರೀವ್ಯಾಸ-ದಾಸ ವಿ‘ಜಯ’ ಉತ್ಸವ ನ.6ರಿಂದ 8ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಮಾನ್ಯತೀರ್ಥರು ತಿಳಿಸಿದ್ದಾರೆ.

 ಶ್ರೀಕೃಷ್ಣ ಮಠದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.6ರ ಬೆಳಗ್ಗೆ 8:45ಕ್ಕೆ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸೇರಿದಂತೆ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬಳಿಕ ಮಹಾಭಾರತದ ಕುರಿತು ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ ಹಾಗೂ ಪ್ರವಚನ ನಡೆಯಲಿದೆ ಎಂದರು.

ನ.6ರ ಸಂಜೆ 4:30ಕ್ಕೆ ಅಂಕಣಕಾರ ರೋಹಿತ್ ಚಕ್ರತೀರ್ಥ ಅವರು ‘ಮಹಾಭಾರತದ ಹಿನ್ನೆಲೆಯಲ್ಲಿ ಧರ್ಮಯುದ್ಧ’ ವಿಷಯದ ಕುರಿತು ಹಾಗೂ 5:15ರಿಂದ ಲೋಕಸಭಾ ಸದಸ್ಯ ತೇಜಸ್ವೀಸೂರ್ಯ ಅವರು ‘ಮಹಾಭಾರತದ ಸಾಂವಿಧಾನಿಕ ನೀತಿಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದರು.

ನ.7ರ ಸಂಜೆ 4:30ಕ್ಕೆ ಚಿನ್ನದ ರಥದಲ್ಲಿ ಮಹಾಭಾರತದ ಸಮಗ್ರ ಗ್ರಂಥಗಳನ್ನಿರಿಸಿ ಹಾಗೂ ವಿಜಯದಾಸರ ಭವ್ಯ ಶೋಭಾ ಯಾತ್ರೆ ರಥಬೀದಿಯಲ್ಲಿ ನಡೆಯಲಿದೆ. ಸಂಜೆ 5:00ಗಂಟೆಗೆ ಸಂಪೂರ್ಣ ಮಹಾಭಾರತ ಗ್ರಂಥಗಳ ಸಮರ್ಪಣೆ ಸಮಸ್ತ ಮಾಧ್ವ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಮಹಾಭಾರತ ಸಂಸ್ಕೃತ ಮತ್ತು ಕನ್ನಡ ಗ್ರಂಥಗಳ ಆಂಡ್ರಾಯ್ಡಾ ಆ್ಯಪ್ ಸಹ ಬಿಡುಗಡೆಗೊಳ್ಳಲಿದೆ.

ಉಡುಪಿಯ ಅಷ್ಟಮಠಗಳು ಹಾಗೂ ಶ್ರೀಸುಬ್ರಹ್ಮಣ್ಯ ಮಠದಲ್ಲಿ ಇರುವ ಸುಮಾರು 250ಕ್ಕೂ ಅಧಿಕ ಪ್ರಾಚೀನ ತಾಳಪತ್ರಗಳನ್ನು ಕಲೆಹಾಕಿ, ನಾಡಿನ ಪ್ರಸಿದ್ಧ 40 ಮಂದಿಹಿರಿಯ ವಿದ್ವಾಂಸರ ತಂಡ ಕಳೆದ ಎಂಟು ವರ್ಷಗಳಲ್ಲಿ ನಡೆಸಿದ ಸಂಶೋಧನೆಯಿಂದ ಕನ್ನಡದಲ್ಲಿ 37 ಸಂಪುಟಗಳಲ್ಲಿ ಹಾಗೂ ಸಂಸ್ಕೃತ ದಲ್ಲಿ 24 ಸಂಪುಟಗಳಲ್ಲಿ ಒಟ್ಟು 61 ಸಂಪುಟಗಳಲ್ಲಿ ಸಮಗ್ರ ಮಹಾಭಾರತ ಗ್ರಂಥ ಹೊರಬಂದಿದೆ ಎಂದು ಅವರು ತಿಳಿಸಿದರು.

ಅಷ್ಟಮಠಗಳಲ್ಲಿರುವ 250ಕ್ಕೂ ಅಧಿಕ ತಾಳಪತ್ರಗಳಲ್ಲಿ 99,400 ಶ್ಲೋಕಗಳು ಸಿಕ್ಕಿದ್ದು, ಅವುಗಳನ್ನು ಕನ್ನಡಕ್ಕೆ ಅನುವಾದಿಸಿ, ಆನಂದತೀರ್ಥಾಚಾರ್ಯರ ಮಹಾಭಾರತ ತಾತ್ಪರ್ಯ ನಿರ್ಣಯ ಹಾಗೂ ವಾದಿರಾಜರ ಲಕ್ಷಾಲಂಕಾರ ಶ್ಲೋಕಗಳನ್ನು ಅಳವಡಿಸಿ ಸಂಪೂರ್ಣ ಮಹಾಭಾರತ ಗ್ರಂಥವನ್ನು 37 ಸಂಪುಟಗಳಲ್ಲಿ ಮುದ್ರಿಸಿ ಲೋಕಾರ್ಪಣೆಗೊಳಿಸಲಾಗುತ್ತಿದೆ ಎಂದವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X