ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್: ಬಿಜೆಪಿ ನಾಯಕ ಗೋಪಾಲ್ ತಾಂಡೇಲ್ ರಾಜೀನಾಮೆ

ಹೊಸದಿಲ್ಲಿ, ನ.4: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋವೊಂದು ವೈರಲ್ ಆದ ನಂತರ ಕೇಂದ್ರಾಡಳಿತ ಪ್ರದೇಶವಾದ ದಾಮನ್ ಮತ್ತು ದಿಯುವಿನ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ತಾಂಡೇಲ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯ ಬಿಜೆಪಿ ನಾಯಕ ವಾಸುಭಾಯ್ ಪಟೇಲ್ ಎಂಬವರು ಮಾಹಿತಿ ನೀಡಿದ್ದಾರೆ.
ಯುವತಿಯೊಂದಿಗೆ ಅಶ್ಲೀಲ ವಿಡಿಯೋದಲ್ಲಿದ್ದ ವ್ಯಕ್ತಿಯು ತಾಂಡೇಲ್ ಎನ್ನಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಭಾರೀ ವಿವಾದ ಸೃಷ್ಟಿಸಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಂಡೇಲ್ ಈ ವಿಡಿಯೋ ನಕಲಿಯಾಗಿದೆ ಎಂದಿದ್ದಾರೆ ಮತ್ತು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
Next Story