Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾ ನೀರಿನ ದರ ಏರಿಸಿದ್ದು ಕಾಂಗ್ರೆಸ್:...

ಮನಪಾ ನೀರಿನ ದರ ಏರಿಸಿದ್ದು ಕಾಂಗ್ರೆಸ್: ಶಾಸಕ ವೇದವ್ಯಾಸ ಕಾಮತ್

ವಾರ್ತಾಭಾರತಿವಾರ್ತಾಭಾರತಿ4 Nov 2019 10:14 PM IST
share
ಮನಪಾ ನೀರಿನ ದರ ಏರಿಸಿದ್ದು ಕಾಂಗ್ರೆಸ್: ಶಾಸಕ ವೇದವ್ಯಾಸ ಕಾಮತ್

ಮಂಗಳೂರು, ನ.4: ಮಂಗಳೂರು ಮಹಾನಗರ ಪಾಲಿಕೆಯ ಕುಡಿಯುವ ನೀರಿನ ದರವನ್ನು ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಏರಿಕೆ ಮಾಡಿರುವುದು ಶತಸತ್ಯ. ಮಂಗಳೂರಿನ ಜನತೆಯನ್ನು ಸಂಕಷ್ಟಕ್ಕೀಡು ಮಾಡಿರುವುದು ಸಲ್ಲದು ಎಂದು ಶಾಸಕ ವೇದವ್ಯಾಸ ಕಾಮತ್ ಖಂಡಿಸಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷವು ಜನರನ್ನು ಲೂಟಿ ಮಾಡುವುದಲ್ಲದೆ, ಮನಪಾ ಚುನಾವಣೆ ಸಮಯದಲ್ಲಿ ಬಿಜೆಪಿಯವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

ನೀರಿನ ದರವನ್ನು ಏಕಾಏಕಿ ಏರಿಕೆ ಮಾಡಿರುವುದರಿಂದ ನಗರದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೊರೆಯಾಗಿದೆ. ಕಳೆದ ಐದು ವರ್ಷಗಳಿಂದ ಪಾಲಿಕೆಯು ಕುಡಿಯುವ ನೀರಿನ ಬಿಲ್‌ಗಳನ್ನು ಜಾರಿಗೊಳಿಸುವಲ್ಲಿ ಹಾಗೂ ದರ ವಸೂಲಾತಿಯಲ್ಲಿ ವೈಫಲ್ಯ ಕಂಡಿದೆ ಎಂದರು.

ಈ ಹಿಂದೆ ಆಡಳಿತ ನಡೆಸಿದ ಮೇಯರ್‌ಗಳು ಕೂಡ ನೀರಿನ ಲಕ್ಷಗಟ್ಟಲೇ ಬಿಲ್ ಬಾಕಿಯಿರುವಂತಹ ವ್ಯಕ್ತಿಗಳ ಪಟ್ಟಿ ಬಹಿರಂಗಪಡಿಸಲಾಗಿತ್ತು. ಈ ಎಲ್ಲ ವೈಫಲ್ಯಗಳ ನಡುವೆ ಕಾಂಗ್ರೆಸ್ ಪಕ್ಷವು ಪಾಲಿಕೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ (ಜೂನ್ ತಿಂಗಳು) ಏಕಾಏಕಿಯಾಗಿ ನೀರಿನ ದರವನ್ನು ಮೂರು-ನಾಲ್ಕು ಪಟ್ಟು ಏರಿಕೆ ಮಾಡಿದೆ ಎಂದರು.

ನೀರಿನ ದರ ಏರಿಕೆಯಿಂದ ಜನತೆ ಪರದಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ನೀರಿನ ದರ ಏರಿಕೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರವಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಯು.ಟಿ.ಖಾದರ್‌ನೀರಿನ ದರ ಏರಿಕೆ ಮಾಡುವ ಮೂಲಕ ಜನವಿರೋಧಿ ನಿಲುವು ತಾಳಿದ್ದರು ಎಂದು ಶಾಸಕರು ಆಪಾದನೆ ಮಾಡಿದರು.

ಪಾಲಿಕೆಯು ಈ ಹಿಂದೆ ಗೃಹ ಬಳಕೆಗೆ ತಿಂಗಳೊಂದಕ್ಕೆ ಕನಿಷ್ಠ 24 ಸಾವಿರ ಲೀಟರ್ ನೀರು ಬಳಸಲು ಅವಕಾಶವಿತ್ತು. ಇದನ್ನು ಏಕಾಏಕಿ 8,000 ಲೀಟರ್‌ಗೆ ಸೀಮಿತಗೊಳಿಸಿರುವುದು ಖಂಡನೀಯ. ಏತನ್ಮಧ್ಯೆ, ಕಾಂಗ್ರೆಸ್ ಆಡಳಿತ ವೈಫಲ್ಯಗಳನ್ನು ಬಿಜೆಪಿ ಜನಪ್ರತಿನಿಧಿಗಳ ಮೇಲೆ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಮುಖಂಡರಾದ ರವೀಂದ್ರಕುಮಾರ್, ರಾಜಗೋಪಾಲ ರೈ ಮತ್ತಿತರರು ಉಪಸ್ಥಿತರಿದ್ದರು.

‘ಕಾಂಗ್ರೆಸ್‌ಗೆ ಸೋಲು ಖಚಿತ’

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದೇಶಾದ್ಯಂತ ಬಿಜೆಪಿಯತ್ತ ಒಲವು ಹೆಚ್ಚುತ್ತಿದೆ. ಮನಪಾ ವ್ಯಾಪ್ತಿಯಲ್ಲಿ ಬಿಜೆಪಿಯ ಮುಖಂಡರು ಭಾರೀ ಅಬ್ಬರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಪ್ರಚಾರ ಸಭೆಗಳು ರಾತ್ರಿವರೆಗೂ ಮುಂದುವರಿದಿರುತ್ತವೆ. ಮನಪಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತ ಎಂದು ಶಾಸಕ ವೇದವ್ಯಾಸ ಕಾಮತ್ ಭವಿಷ್ಯ ನುಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X