ಭತ್ತದ ಬೆಳೆಗೆ ಫಸಲ್ ಭಿಮಾ ಯೋಜನೆ
ಮಂಗಳೂರು, ನ.4: 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆಯಡಿ ನೋಂದಣಿ ಮಾಡಿದ ರೈತರ ಭತ್ತದ ಬೆಳೆಯು ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭ (ಕಟಾವು ಮಾಡಿದ 14 ದಿನದೊಳಗೆ) ಮಳೆ ಮತ್ತು ಆಲಿಕಲ್ಲು ಮಳೆಯಿಂದ ನಷ್ಟವಾದಲ್ಲಿ 72 ಗಂಟೆಯೊಳಗೆ ‘ಭಿಮಾ’ ಸಂಸ್ಥೆಗೆ ಮಾಹಿತಿ ನೀಡಬೇಕು.
ವಿವರಗಳಿಗೆ ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು, ದ.ಕ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.
Next Story





