Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಬೀದಿಗಿಳಿದ ಪೊಲೀಸರು: ಭಾರೀ...

ದಿಲ್ಲಿಯಲ್ಲಿ ಬೀದಿಗಿಳಿದ ಪೊಲೀಸರು: ಭಾರೀ ಪ್ರತಿಭಟನೆ

ಕರ್ತವ್ಯಕ್ಕೆ ವಾಪಸಾಗಲು ಪೊಲೀಸ್ ಆಯುಕ್ತರ ಮನವಿ

ವಾರ್ತಾಭಾರತಿವಾರ್ತಾಭಾರತಿ5 Nov 2019 2:18 PM IST
share
ದಿಲ್ಲಿಯಲ್ಲಿ ಬೀದಿಗಿಳಿದ ಪೊಲೀಸರು: ಭಾರೀ ಪ್ರತಿಭಟನೆ

ಹೊಸದಿಲ್ಲಿ, ನ.5:  ಪ್ರತಿಭಟನೆನಿರತ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಮರಳುವಂತೆ ದಿಲ್ಲಿ ಪೊಲೀಸ್ ಆಯುಕ್ತ ಅಮುಲ್ಯ ಪಟ್ನಾಯಕ್ ಮಂಗಳವಾರ ಒತ್ತಾಯಿಸಿದ್ದಾರೆ ಮತ್ತು ಅವರು "ಶಿಸ್ತುಬದ್ಧ ಶಕ್ತಿಯಂತೆ" ವರ್ತಿಸಬೇಕು ಎಂದು ಹೇಳಿದ್ದಾರೆ

ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಪಟ್ನಾಯಕ್ ಮಾತನಾಡಿದರು.

 ಸೋಮವಾರ ಸಾಕೇತ್ ನ್ಯಾಯಾಲಯದ ಹೊರಗೆ ಪೊಲೀಸ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ  ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದಾರೆ.

"ನಾವು ಶಿಸ್ತುಬದ್ಧ ಶಕ್ತಿಯಂತೆ ವರ್ತಿಸಬೇಕು. ನಾವು ಕಾನೂನನ್ನು ಎತ್ತಿ ಹಿಡಿಯಬೇಕೆಂದು ಸರ್ಕಾರ ಮತ್ತು ಜನರು ಬಯಸುತ್ತಾರೆ, ಇದು ನಮ್ಮ ದೊಡ್ಡ ಜವಾಬ್ದಾರಿ. ಕರ್ತವ್ಯವನ್ನು ಪುನರಾರಂಭಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ" ಎಂದು ಪಟ್ನಾಯಕ್ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು, ಪೊಲೀಸರ  ಸಮಸ್ಯೆಯನ್ನು  ಪರಿಹರಿಸಲಾಗುವುದು ಎಂದು ಹೇಳಿದರು.

ನ. 2 ರಂದು ತೀಸ್  ಹಜಾರಿ ನ್ಯಾಯಾಲಯದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆದ ಘರ್ಷಣೆಯ ವಿರುದ್ಧ ಪೊಲೀಸರು  ಮಂಗಳವಾರ ಪೊಲೀಸ್ ಹೆಡ್ ಕ್ವಾರ್ಟರ್ಸ್ (ಪಿಎಚ್‌ಕ್ಯು) ಹೊರಗೆ ಪ್ರತಿಭಟನೆ ನಡೆಸಿದರು.

"ಪೋಲಿಸ್ ಮತ್ತು ವಕೀಲರ ನಡುವೆ ಸಂಭವಿಸಿದ ಘರ್ಷಣೆ ದುರದೃಷ್ಟಕರ. ಎಲ್ಲರೂ ಸಾರ್ವಜನಿಕ ವಲಯದಲ್ಲಿನ  ವಿಷಯಗಳ  ಆಧಾರದ ಮೇಲೆ ಸಮತೋಲಿತ ದೃಷ್ಟಿಕೋನವನ್ನು ತೆಗೆದುಕೊಳ್ಳಬೇಕು.ದೈಹಿಕ ಹಲ್ಲೆ ಮತ್ತು ಅವಮಾನಕ್ಕೆ ಒಳಗಾದ ಆ ಪೊಲೀಸ್ ಸಿಬ್ಬಂದಿ ಪರವಾಗಿ  ದೇಶಾದ್ಯಂತ ಪೊಲೀಸರು ಒಗ್ಗಟ್ಟಿನಲ್ಲಿ ನಿಲ್ಲುತ್ತಾರೆ "ಎಂದರು.

ಜಿಲ್ಲಾ ನ್ಯಾಯಾಲಯಗಳ ಎಲ್ಲಾ ಬಾರ್ ಅಸೋಸಿಯೇಷನ್‌ಗಳ ಸಮನ್ವಯ ಸಮಿತಿಯ ಅಧ್ಯಕ್ಷರಾದ ಮಹಾವೀರ್ ಶರ್ಮಾ ಅವರು ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ವಕೀಲರು ಅನಿರ್ದಿಷ್ಟವಾಗಿ ಕೆಲಸದಿಂದ ದೂರವಿರುತ್ತಾರೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಕಾನೂನು ಭ್ರಾತೃತ್ವದ ಸದಸ್ಯರಿಗೆ ನ್ಯಾಯಾಲಯಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಮಂಗಳವಾರದಿಂದ ತಮ್ಮ ನ್ಯಾಯಾಲಯದ ಕೆಲಸವನ್ನು ಪುನರಾರಂಭಿಸಬೇಕು ಎಂದು ಮನವಿ ಮಾಡಿದೆ.

ತೀಸ್ ಹಜಾರಿಯಲ್ಲಿ ನಡೆದ ಘಟನೆಯನ್ನು ಖಂಡಿಸಿ  ವಕೀಲರು ನಗರದಾದ್ಯಂತ ಹಲವಾರು ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ವಕೀಲರ ಗುಂಪೊಂದು ಸೋಮವಾರ ಸುಪ್ರೀಂ ಕೋರ್ಟ್‌ನ ಹೊರಗೆ ಪ್ರತಿಭಟನೆ ನಡೆಸಿತು.

ಘಟನೆಗೆ ಸಂಬಂಧಿಸಿ  ಶನಿವಾರ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

ಘಟನೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು (ಉತ್ತರ), ಇಬ್ಬರು ಸ್ಟೇಷನ್ ಹೌಸ್ ಅಧಿಕಾರಿಗಳು (ಎಸ್‌ಎಚ್‌ಒ) ಮತ್ತು ಎಂಟು ವಕೀಲರು ಸೇರಿದಂತೆ ಒಟ್ಟು 20 ಮಂದಿ  ಗಾಯಗೊಂಡಿದ್ದಾರೆ.

ಮತ್ತೊಂದೆಡೆ ಕೇಂದ್ರ ಗೃಹ ಸಚಿವಾಲಯವು ಘರ್ಷಣೆ ಕುರಿತು ದಿಲ್ಲಿ ಪೊಲೀಸರಿಂದ ವರದಿ ಸ್ವೀಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ವಾಸ್ತವಿಕ ವರದಿಯಾಗಿದ್ದು, ಶನಿವಾರದ ಘಟನೆಗೆ ಕಾರಣವಾದ ಸನ್ನಿವೇಶಗಳು ಮತ್ತು ಅದರ ನಂತರ ಕೈಗೊಂಡ ಕ್ರಮಗಳ ವಿವರಗಳನ್ನು ದಿಲ್ಲಿ  ಪೊಲೀಸರು ನೀಡಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು  ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X