Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ 100 ದಿನಗಳಲ್ಲಿ ರಾಜ್ಯದ...

ಮುಂದಿನ 100 ದಿನಗಳಲ್ಲಿ ರಾಜ್ಯದ ಚಿತ್ರಣವನ್ನೇ ಬದಲಿಸುತ್ತೇವೆ: ಸಿಎಂ ಯಡಿಯೂರಪ್ಪ

‘ದಿನ ನೂರು ಸಾಧನೆ ನೂರಾರು’ ಕಿರುಹೊತ್ತಿಗೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 Nov 2019 7:27 PM IST
share
ಮುಂದಿನ 100 ದಿನಗಳಲ್ಲಿ ರಾಜ್ಯದ ಚಿತ್ರಣವನ್ನೇ ಬದಲಿಸುತ್ತೇವೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ನ. 5: ‘ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರ ಕಣ್ಣೀರೊರೆಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ರಾಜ್ಯ ಸರಕಾರಕ್ಕೆ 100 ದಿನಗಳ ಒಂದು ಅಗ್ನಿ ಪರೀಕ್ಷೆಯಾಗಿತ್ತು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ನೇತೃತ್ವದ ಸರಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ‘ದಿನ ನೂರು ಸಾಧನೆ ನೂರಾರು’ ಕಿರು ಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮುಂದಿನ 100 ದಿನಗಳಲ್ಲಿ ಕರ್ನಾಟಕ ಮತ್ತು ಬೆಂಗಳೂರಿನ ಚಿತ್ರಣವನ್ನೇ ಬದಲಿಸುತ್ತೇವೆ ಎಂದು ಅಭಯ ನೀಡಿದರು.

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕವನ್ನು ದೇಶದಲ್ಲೆ ಮಾದರಿ ರಾಜ್ಯ ಮಾಡುವ ನಿಟ್ಟಿನಲ್ಲಿ ಒಂದೂ ಕ್ಷಣವೂ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತೇವೆ ಎಂದ ಅವರು, ಈ ಬಗ್ಗೆ ಹೊಸ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಮುಂದಿನ ಬಜೆಟ್‌ನಲ್ಲಿ ತಿಳಿಸುತ್ತೇನೆ ಎಂದರು.

ನೆರವಾಗಿದ್ದೇ ಸಾಧನೆ: ರಾಜ್ಯದ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ-ಪ್ರವಾಹ ಬಂದಿತ್ತು. ತಿಂಗಳ ಕಾಲ ನಾನು ಮತ್ತು ಸಂಪುಟ ಸಹೋದ್ಯೋಗಿಗಳ ಹಗಲು-ರಾತ್ರಿ ಎನ್ನದೇ ನೆರೆ ಪೀಡಿತ ಪ್ರದೇಶದಲ್ಲೆ ಇದ್ದು ಸಂತ್ರಸ್ತರಿಗೆ ನೆಮ್ಮದಿ ಬದುಕು ಕಟ್ಟಿಕೊಳ್ಳಲು ವ್ಯವಸ್ಥೆ ಕಲ್ಪಿಸಿದ್ದೇವೆ. ಈ ಹಿಂದೆ ಹಲವು ಬಾರಿ ನೈಸರ್ಗಿಕ ವಿಕೋಪ ಸಂಭವಿಸಿದೆ. ಆದರೆ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪರಿಹಾರವನ್ನು ಯಾರೂ ಕೊಟ್ಟಿಲ್ಲ. ಇದು ಸಾಧನೆಯಲ್ಲವೆ? ಎಂದು ಪ್ರಶ್ನಿಸಿದ ಅವರು, ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರವೂ ಹೆಚ್ಚಿನ ನೆರವು ನೀಡಿದೆ ಎಂದು ಅಂಕಿ-ಸಂಖ್ಯೆ ನೀಡಿದರು.

ಅಭಿವೃದ್ಧಿಯತ್ತ ದೊಡ್ಡ ಹೆಜ್ಜೆ: ನೂರು ದಿನಗಳ ಆಡಳಿತದಲ್ಲಿ ನೆರೆ ಸಂತ್ರಸ್ತರ ಸಂಕಟ ನಿವಾರಿಸಿ ನೆರವಾದ ತೃಪ್ತಿ ಇದೆ. ಜೊತೆಗೆ ಅಭಿವೃದ್ಧಿ ದಿಕ್ಕಿನತ್ತ ದೊಡ್ಡ ಹೆಜ್ಜೆಯನ್ನಿಟ್ಟ ಸಮಾಧಾನವೂ ಇದೆ ಎಂದ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಯ ಚಿತ್ರಣ ಬದಲಾಗಲಿದೆ ಎಂದರು.

ಮುಂಬರುವ ದಿನಗಳಲ್ಲಿ ಕೃಷಿ, ನೀರಾವರಿ, ವಸತಿ, ಕೈಗಾರಿಕೆ ಮತ್ತು ಬೆಂಗಳೂರು ನಗರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದ ಬಿಎಸ್‌ವೈ, ಸರಕಾರದ ಸಾಧನೆಗೆ ಅಂಕ ಕೊಡುವ ಅಧಿಕಾರ ರಾಜ್ಯದ ಜನರಿಗಿದೆಯೇ ಹೊರತು ಬೇರೆ ಯಾರಿಗೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಸಚಿವ ಸಂಪುಟ ಸಹೋದ್ಯೊಗಿಗಳಿಗೂ ನಾನು ಯಾವುದೇ ಅಂಕ ನೀಡಲು ಹೋಗುವುದಿಲ್ಲ. ಅವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದಾರೆ ಎಂದ ಬಿಎಸ್‌ವೈ, ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದೆ. ಮೂರು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕ್ರಮ ವಹಿಸಲಾಗಿದೆ ಎಂದರು.

ಗುರಿ ಸಾಧನೆ: ಸಾರಿಗೆ ಹೊಸತುಪಡಿಸಿದರೆ ವಾಣಿಜ್ಯ ತೆರಿಗೆ, ಅಬಕಾರಿ ಸೇರಿದಂತೆ ಎಲ್ಲ ಇಲಾಖೆಗಳು ತೆರಿಗೆ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ಸಾಧನೆ ಮಾಡಿವೆ ಎಂದ ಅವರು, ಕೃಷಿ ಮತ್ತು ಕೂಲಿ ಕಾರ್ಮಿಕರ ಬದುಕನ್ನು ಉತ್ತಮಗೊಳಿಸುವ ಸಂಕಲ್ಪ ಮಾಡಿದ್ದೇವೆ ಎಂದರು.

ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ನಮ್ಮ ಸರಕಾರ ಆದ್ಯತೆ ನೀಡಿದ್ದು, ರಾಜ್ಯದ ಜನತೆ ನೆಮ್ಮದಿಯಿಂದ, ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಿಸುವ ಕೆಲಸ ಮಾಡಿದ್ದೇವೆ ಎಂದು ಯಡಿಯೂರಪ್ಪ ನುಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್‌ ನಾರಾಯಣ, ಸಚಿವರಾದ ಮಾಧುಸ್ವಾಮಿ, ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಸಿ.ಸಿ.ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಶಾಸಕ ರೇಣುಕಾಚಾರ್ಯ ಹಾಗೂ ಅಧಿಕಾರಿಗಳು ಹಾಜರಿದ್ದರು.

‘ಸಂತ್ರಸ್ತರಿಗೆ ನೆರವಾಗುವಲ್ಲಿ ಕೇಂದ್ರ, ಕರ್ನಾಟಕವನ್ನು ನಿರ್ಲಕ್ಷಿಸಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಕೇಂದ್ರದ ಸಹಕಾರವಿಲ್ಲದಿದ್ದರೆ ನಾವು ಏನೂ ಮಾಡಲು ಸಾಧ್ಯವಿರಲಿಲ್ಲ. 1,200 ಕೋಟಿ ರೂ.ನೆರವು ನೀಡಿದೆ. ಇದೀಗ ನೆರೆ ಸಂತ್ರಸ್ತರ ಗುಳೆ ತಪ್ಪಿಸಲು ಖಾತ್ರಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಜನೆಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ’

-ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ

ಎಸಿಬಿಗೆ ಮತ್ತಷ್ಟು ಬಲ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಮತ್ತಷ್ಟು ಬಲ ತುಂಬುವ ಮೂಲಕ ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು. ಮೋಡ ಬಿತ್ತನೆಗೆ 90ಕೋಟಿ ರೂ. ಟೆಂಡರ್ ಅನುಮೋದನೆ ಸುಳ್ಳು. ಮಳೆ-ಪ್ರವಾಹ ಸ್ಥಿತಿ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಸ್ಥಗಿತಗೊಳಿಸಲಾಗಿದೆ

-ಯಡಿಯೂರಪ್ಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X