Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಸಾಗರ ಕವಚ ಅಣಕು...

ಉಡುಪಿ ಜಿಲ್ಲೆಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ5 Nov 2019 8:18 PM IST
share
ಉಡುಪಿ ಜಿಲ್ಲೆಯಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ: ಜಿಲ್ಲಾಧಿಕಾರಿ

ಉಡುಪಿ, ನ.5: ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಭದ್ರತಾ ದೃಷ್ಠಿಯಿಂದ ಪ್ರಸ್ತುತ ಇರುವ ರಕ್ಷಣಾ ಕ್ರಮಗಳು ಹೇಗೆ ಸಮರ್ಥವಾಗಿವೆ ಎಂಬುದನ್ನು ಸ್ವಯಂ ವೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ನ.6 ಮತ್ತು 7ರಂದು ಜಿಲ್ಲೆಯಾದ್ಯಂತ ‘ಸಾಗರ ಕವಚ’ ಅಣಕು ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಗರ ಕವಚ ಅಣಕು ಕಾರ್ಯಾಚರಣೆಯ ಪೂರ್ವಭಾವಿ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿನಡೆದಸಾಗರಕವಚಅಣಕುಕಾರ್ಯಾಚರಣೆಯಪೂರ್ವಾವಿ ಸಿದ್ಧತೆ ಕುರಿತ ಸೆಯಅ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಕಾರ್ಯಾಚರಣೆಯ ಮುಖ್ಯ ಉದ್ದೇಶ ರಕ್ಷಣಾ ಸಾಮರ್ಥ್ಯವನ್ನು ಸನ್ನದ್ಧ ಗೊಳಿಸುವುದು ಮತ್ತು ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ನಡುವಿನ ಸಾಮರಸ್ಯವನ್ನು ವೃದ್ಧಿಸುವುದು. ಅಲ್ಲದೇ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಪ್ರಯೋಗವನ್ನು ನಡೆಲಾಗುತ್ತಿದೆ ಎಂದವರು ನುಡಿದರು.

ಈ ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್‌ಗಳು, ದೇವಸ್ಥಾನ, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಹಾಗೂ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿ, ಸರಕಾರಿ ಕಟ್ಟಡಗಳು, ಕೈಗಾರಿಕೆಗಳ ಬಳಿ ವ್ಯಾಪಕ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಈ ಸ್ಥಳಗಳಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳು ಅಥವಾ ವಸ್ತುಗಳು ಕಂಡುಬಂದಲ್ಲಿ ಪೊಲೀಸ್ ಕಂಟ್ರೊಲ್ ರೂಂ ನಂ.112ಗೆ, ಕರಾವಳಿ ಕಾವಲು ಪಡೆ ಕಂಟ್ರೊಲ್ ರೂಂ 1093, ಜಿಲ್ಲಾಧಿಕಾರಿ ಕಂಟ್ರೊಲ್ ರೂಂ 1077ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಅಪರಿಚಿತ ವ್ಯಕ್ತಿಗಳು ಅಥವಾ ವಸ್ತುಗಳು ಕಂಡು ಬಂದಲ್ಲಿ ಯಾವುದೇ ಕಾರಣಕ್ಕೂ ನಾಗರಿಕರು ಸ್ವಯಂ ಪ್ರೇರಿತವಾಗಿ ವಸ್ತುಗಳು ಅಥವಾ ವ್ಯಕ್ತಿಗಳ ಕುರಿತಂತೆ ಕ್ರಮ ಕೈಗೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಪ್ರಮುಖ ಮಾಲ್‌ಗಳು, ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆಗಳು, ದೇವಾಲಯಗಳು, ಬಂದರು ಹಾಗೂ ಕೈಗಾರಿಕೆಗಳ ಮೇಲ್ವಿಚಾರಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ ಡಿಸಿ, ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ, ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಇದೊಂದು ಅಣುಕು ಕಾರ್ಯಾಚರಣೆಯಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೇ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಡಿಸಿ ಜಗದೀಶ್ ತಿಳಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಸಾರ್ವಜನಿಕರು ಹಾಗೂ ವಾಹನಗಳ ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಇದಕ್ಕೆ ಸಹಕಾರ ನೀಡುವಂತೆ ಹಾಗೂ ಅಪರಿಚಿತ ಗುರುತು ಪರಿಚಯ ಇಲ್ಲದ ಸಂಶಯಾಸ್ಪದ ವ್ಯಕ್ತಿಗಳು ಹಾಗೂ ಸಂಶಯಾಸ್ಪದ ವಸ್ತುಗಳು ಸ್ಥಳದಲ್ಲಿ ದೊರೆತಲ್ಲಿ ಯಾವುದೇ ರೀತಿ ಭಯಭೀತರಾಗದೇ ಸಮೀಪದ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧೀಕ್ಷಕರ ಕಚೇರಿ ಉಡುಪಿ ಕಂಟ್ರೋಲ್ ರೂಮ್ 112, ದೂರವಾಣಿ ಸಂ: 2526709, 2526444, ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪಡೆ ಕಂಟ್ರೊಲ್ ರೂಂ 1093/ ದೂ.ಸಂ: 2538100, ಜಿಲ್ಲಾಧಿಕಾರಿ ಕಂಟ್ರೊಲ್ ರೂಂ 1077/ ದೂ.ಸಂ: 2574802ಗೆ ಮಾಹಿತಿ ನೀಡಿ ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಕಾರ್ಯಾಚರಣೆ ಸಂದರ್ಭದಲ್ಲಿ ಅಗತ್ಯವಿರುವೆಡೆಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಿದ್ದು, ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಾಹನಗಳ ವ್ಯಾಪಕ ತಪಾಸಣೆ ನಡೆಯಲಿದೆ. ಈ ಸಂದರ್ಭದಲ್ಲೂ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ದೋಣಿಗಳಲ್ಲಿ ಮೀನುಗಾರರು, ತಮ್ಮ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆ ಪತ್ರಗಳನ್ನು ಇಟ್ಟುಕೊಳ್ಳುವಂತೆ, ಸಮುದ್ರದಲ್ಲಿ ಅಪರಿಚಿತ ದೋಣಿಗಳು ಹಾಗೂ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಲ್ಪೆ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X