ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ....: ಸಿದ್ದುಗೆ ತಿರುಗೇಟು ನೀಡಿದ ಎಚ್‌ಡಿಕೆ ಹೇಳಿದ್ದೇನು ?

ಬೆಂಗಳೂರು, ನ.5: ಕೆಲವರು ತಾವು ಮುಖ್ಯಮಂತ್ರಿ ಆಗಲೇಬೇಕು ಎಂಬ ಸ್ವಾರ್ಥದ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಪಕ್ಷ ಬಿಟ್ಟು ಹೋದ ಶಾಸಕರಲ್ಲಿ ಬಹುತೇಕರು ನಿಮ್ಮ ಪಕ್ಷದವರೇ ಎಂಬುದನ್ನು ಮರೆಯಬಾರದು. ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.
Next Story





