Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಿಂಟೋ ಆಸ್ಪತ್ರೆ ಪ್ರಕರಣದಲ್ಲಿ ರಾಜಕೀಯ...

ಮಿಂಟೋ ಆಸ್ಪತ್ರೆ ಪ್ರಕರಣದಲ್ಲಿ ರಾಜಕೀಯ ಆಟ ನಡೆಯುವುದಿಲ್ಲ: ಡಿಸಿಎಂ ಡಾ.ಅಶ್ವತ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ5 Nov 2019 9:27 PM IST
share
ಮಿಂಟೋ ಆಸ್ಪತ್ರೆ ಪ್ರಕರಣದಲ್ಲಿ ರಾಜಕೀಯ ಆಟ ನಡೆಯುವುದಿಲ್ಲ: ಡಿಸಿಎಂ ಡಾ.ಅಶ್ವತ್ ನಾರಾಯಣ

ಬೆಂಗಳೂರು, ನ. 5: ಮಿಂಟೋ ಆಸ್ಪತ್ರೆ ವೈದ್ಯರ ಮುಷ್ಕರ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ ನಾರಾಯಣ ಸ್ಪಷ್ಟಣೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಆದ ತಪ್ಪಿನಿಂದ ಕಣ್ಣು ಕಳೆದುಕೊಂಡವರು ಹಾಗೂ ಸಂತ್ರಸ್ತರ ಪರ ನಡೆದ ಹೋರಾಟದ ವೇಳೆ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಇಬ್ಬರಿಗೂ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ. ಸರಕಾರ ಇರುವುದೇ ಸಮಾಜ ಮತ್ತು ನಾಗರಿಕರಿಗಾಗಿ ಎಂದ ಅವರು, ಸೂಕ್ಷ್ಮ ಸಂದರ್ಭಗಳನ್ನು ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುವವರು ಇರುತ್ತಾರೆ. ಈ ರೀತಿ ತಮ್ಮ ಬೇಳೆ ಬೇಯಿಸಿಕೊಳ್ಳುವವರಿಗೆ ಒಂದೊಂದು ರೀತಿ ಒಲವಿರುತ್ತದೆ. ತಮ್ಮ ಸ್ಥಾನದ ದುರ್ಬಳಕೆ ಮಾಡಿಕೊಳ್ಳುವವರು ಇರುತ್ತಾರೆ. ಅಂಥ ಮಹಾನುಭಾವರ ಪ್ರಚೋದನೆಗೆ ಒಳಗಾಗಬಾರದೆಂದು ಮನವಿ ಮಾಡಿದರು.

ಎಲ್ಲರೂ ಕಾನೂನನ್ನು ಕೈಗೆ ತೆಗೆದುಕೊಂಡರೆ ವ್ಯವಸ್ಥೆ ನಿಯಂತ್ರಣ ಹೇಗೆ ಸಾಧ್ಯ? ಹೋರಾಟಗಾರರು ಅಥವಾ ವೈದ್ಯರು, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಎಲ್ಲರೂ ಅವರವರ ಕೆಲಸ ಮಾಡಿದರೆ ಯಾರಿಗೂ ತೊಂದರೆ ಆಗದು. ಯಾವುದೇ ಕಾರಣಕ್ಕೂ ಅಮಾಯಕರಿಗೆ ತೊಂದರೆ ಆಗಬಾರದು. ಸಾಮಾನ್ಯ ಜನರು ಇವರ ಆಟಕ್ಕೆ ಬಲಿಪಶು ಆಗಬಾರದು.

ಈ ವಿಚಾರದಲ್ಲಿ ರಾಜಕೀಯ ಬೇಡ. ಈ ಎಲ್ಲ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ನಡೆಯುವುದು. ಇನ್ನು ಮುಂದೆ ಇಂಥ ಪ್ರಕರಣಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಳಲಾಗುವುದು. ವೈದ್ಯರು ಹಲವು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ವೈದ್ಯರ ಹಿತಾಸಕ್ತಿ ಕಾಯುವಂಥ ಕಾನೂನುನ್ನು ಈ ಹಿಂದೆಯೇ ಪರಿಚಯಿಸಲಾಗಿದೆ. ಕಾನೂನು, ವ್ಯವಸ್ಥೆ, ಸಮಾಜದ ಬಗ್ಗೆ ವೈದ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಅಶ್ವತ್ ನಾರಾಯಣ ತಿಳಿಸಿದರು.

ವೈದ್ಯರ ಭದ್ರತೆ ಕ್ರಮ: ವೈದ್ಯರ ಮೇಲಿನ ಹಲ್ಲೆ ತಡೆಗೆ ಕೇಂದ್ರ ಅಥವಾ ರಾಜ್ಯ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ವೈದ್ಯರ ರಕ್ಷಣೆಗೆ ಕೃತಕ ಬುದ್ಧಿಮತ್ತೆ, ಆಧುನಿಕ ತಂತ್ರಜ್ಞಾನ ಅನುಸರಿಸಲಾಗುವುದು. ತುರ್ತು ಪರಿಸ್ಥಿತಿ ನಿಭಾಯಿಸಲು ಆಂತರಿಕ ಪಡೆ, ಪೊಲೀಸ್, ಮೀಸಲು ಪಡೆ ಸ್ಥಳಕ್ಕೆ ಧಾವಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುವುದು’

-ಡಾ.ಸಿ.ಎನ್.ಅಶ್ವತ್ ನಾರಾಯಣ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X