ನಾಪತ್ತೆ
ಕಾರ್ಕಳ, ನ.5: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯರ್ಲಪಾಡಿ ಗ್ರಾಮದ ಗೋವಿಂದೂರು ಮಿತ್ತೊಟ್ಟು ನಿವಾಸಿ ದಿನೇಶ್ ಶೆಟ್ಟಿ(48) ಎಂಬವರು ಅ.29ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಇವರು 5 ಅಡಿ 6 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು, ಭಾಷೆ ಮಾತನಾಡು ತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಅರ್ಧ ತೋಳಿನ ಟಿಶರ್ಟ್, ಗುಲಾಬಿ ಬಣ್ಣದ ಬೈರಾಸ್ ಧರಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





