Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಮನಪಾ ಚುನಾವಣೆ: ಬಿಜೆಪಿ...

ಮಂಗಳೂರು ಮನಪಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 Nov 2019 8:07 PM IST
share
ಮಂಗಳೂರು ಮನಪಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮಂಗಳೂರು, ನ.6: ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೆ ನ.12ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ‘ಸ್ವಚ್ಛ, ಸುಂದರ, ಸುವ್ಯವಸ್ಥಿತ ನಮ್ಮ ಕುಡ್ಲ’ ಎಂಬ ಸಂಕಲ್ಪದೊಂದಿಗೆ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಶಾಸಕ ಸಂಜೀವ್ ಮಠಂದೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜೀವ್ ಮಠಂದೂರು, ಮಂಗಳೂರು ನಗರವು ರಾಜ್ಯದಲ್ಲೇ ರಸ್ತೆ, ರೈಲು, ವಾಯು, ಜಲ ಸಂಪರ್ಕ ಹೊಂದಿರುವ ಏಕೈಕ ನಗರವಾಗಿದೆ. ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್, ವಾಣಿಜ್ಯ, ಮೀನುಗಾರಿಕೆ, ಪ್ರವಾಸೋದ್ಯಮ ಇಲ್ಲಿನ ವೈಶಿಷ್ಟ. ಕರಾವಳಿಯ ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಆಚರಣೆಗಳು ನಡೆಯುವ ಮೂಲಕ ವೈವಿಧ್ಯತೆಯಲ್ಲಿ ಏಕತೆ ಎನ್ನುವ ಭಾರತೀಯ ಸಂಸ್ಕೃತಿಯ ಅನುಕರಣೆಯ ಪ್ರತಿಬಿಂಬವಾಗಿದೆ ಎಂದರು.

ಮುಂದಿನ ಯೋಜನೆಗಳು

ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು. ರೈಲು ನಿಲ್ದಾಣ, ಇನ್ನಿತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗುವುದು. 24x7 ಅವಧಿಯಲ್ಲೂ ಗುಣಮಟ್ಟದ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಬೇರೆ ಬೇರೆ ವಯಸ್ಸಿನ ನಾಗರಿಕರ ಅಗತ್ಯಗಳಿಗೆ ಅನುಗುಣವಾಗಿ ಆಟದ ಮೈದಾನ, ಗ್ರಂಥಾಲಯ, ಉದ್ಯಾನ, ಪಾದಚಾರಿ ಮಾರ್ಗ, ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು. ಅಂತಾರಾಷ್ಟ್ರೀಯ ಕ್ರೀಡಾಂಗಣ ರಚನೆ ಉದ್ದೇಶ ಹೊಂದಲಾಗಿದೆ ಎಂದು ಸಂಜೀವ್ ಮಠಂದೂರು ಹೇಳಿದರು.

ನನೆಗುದಿಗೆ ಬಿದ್ದಿರುವ ರಂಗಮಂದಿರದ ಕಾಮಗಾರಿಯ ಶೀಘ್ರ ಅನುಷ್ಠಾನ. ಎಸ್ಸಿ-ಎಸ್ಟಿ ವಸತಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ. ನಗರದಲ್ಲಿರುವ ತೆರೆದ ಬಾವಿಗಳ ದುರಸ್ತಿ ಮತ್ತು ನಿರ್ವಹಣೆ. ಪಾಲಿಕೆಯ ಆಡಳಿತವನ್ನು ಮಕ್ಕಳ ಸ್ನೇಹಿಯಾಗಿ ಪರಿವರ್ತಿಸಿ ಭಿಕ್ಷಟನೆ, ಮಾದಕದ್ರವ್ಯ ಮಾರಾಟ, ಮಕ್ಕಳ ಶೋಷಣೆಯ ವಿರುದ್ಧ ಲಭ್ಯವಿರುವ ಎಲ್ಲ ಕಾನೂನುಗಳ ಕಡ್ಡಾಯ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.

ಮಂಗಳೂರು ನಗರದಲ್ಲಿ ಉತ್ಪಾದನೆಯಾಗುತ್ತಿರುವ ಕಟ್ಟಡ ನಿರ್ಮಾಣದ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಒಣಕಸ ಮತ್ತು ಹಸಿಕಸ ವಿಂಗಡಣೆ ಹಾಗೂ ಸಂಸ್ಕರಣೆಗಾಗಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಪರಿಣಾಮಕಾರಿ ವ್ಯವಸ್ಥೆಯ ಅನುಷ್ಠಾನದ ಮೂಲಕ ಪಚ್ಚನಾಡಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು ಎಂದು ಮಾಹಿತಿ ನೀಡಿದರು.

ನಗರದ ಎಲ್ಲ ಬಸ್ ನಿಲ್ದಾಣಗಳಲ್ಲಿ ಬಸ್ಸಿನ ವೇಳಾಪಟ್ಟಿ ಹಾಗೂ ಇತರ ಮಾಹಿತಿ ಒದಗಿಸಲು ಅನುಕೂಲವಾಗುವಂತೆ ಎಲ್‌ಸಿಡಿ ಪರದೆಗಳನ್ನು ಅಳವಡಿಸಲಿದ್ದೇವೆ. ವಾಹನ ದಟ್ಟಣೆ ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಸೆಟಲೈಟ್ ಬಸ್ ನಿಲ್ದಾಣಗಳ ಸ್ಥಾಪನೆ ಮಾಡಲಾಗುವುದು. ಎಲ್ಲ ಸೌಲಭ್ಯಗಳುಳ್ಳ ಯೋಜನಾ ಬದ್ಧ ಸೆಟಲೈಟ್ ಟೌನ್‌ಶಿಪ್‌ಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.

ಪಾಲಿಕೆ ವ್ಯಾಪ್ತಿಯ ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡಲಾಗುವುದು. ಇ-ಗವರ್ನೆನ್ಸ್‌ಗೆ ಆದ್ಯತೆ ನೀಡಿ ಏಕಗವಾಕ್ಷಿ ಯೋಜನೆ, ಪೇಪರ್‌ಲೆಸ್ ಕಚೇರಿ, ನಾಗರಿಕರಿಗೆ ಆನ್‌ಲೈನ್ ಪೇಮೆಂಟ್ ಗೇಟ್‌ವೇ ಮತ್ತಿತರ ಪೂರಕ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಾಪರ್ಟಿ ಕಾರ್ಡ್ ವಿತರಣೆಯಲ್ಲಿನ ಗೊಂದಲ ನಿವಾರಣೆ ಮಾಡಲಾಗುವುದು. ಸ್ಮಾರ್ಟ್‌ಸಿಟಿ ಯೋಜನಾ ವೆಚ್ಚಗಳ ಕುರಿತು ತಜ್ಞರ ಸಮಿತಿ ರಚಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಬಿಜೆಪಿ ಮುಖಂಡರಾದ ಕ್ಯಾ.ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಪೂಜಾ ಪೈ, ಪ್ರಭಾ ಮಾಲಿನಿ, ಯೋಗಿಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X